IMG 20230513 WA0056

JD (S) :ಚುನಾವಣೆ ಫಲಿತಾಂಶ: ಜನಾದೇಶ ಸ್ವಾಗತಿಸಿದ ಹೆಚ್.ಡಿ.ಕುಮಾರಸ್ವಾಮಿ

ಚುನಾವಣೆ ಫಲಿತಾಂಶ: ಜನಾದೇಶ ಸ್ವಾಗತಿಸಿದ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರು: ಜನಾದೇಶವನ್ನು ಸ್ವಾಗತಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿಗಳು, ರಾಜ್ಯದ ಜನತೆ ನೀಡಿರುವ ಆದೇಶವನ್ನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆ. ಆದರೆ, ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ, ಸದಾ ಜನರ ಜತೆಯಲ್ಲೇ ಇರುತ್ತೇನೆ ಎಂದಿದ್ದಾರೆ. ಇದೇ ವೇಳೆ ನಮ್ಮ ಪಕ್ಷವನ್ನು ಆಶೀರ್ವದಿಸಿದ ಮಹಾಜನತೆಗೆ ಮಾಜಿ […]

Continue Reading
IMG 20230512 WA0029

BJP :ಕಾಂಗ್ರೆಸ್ ನವರಿಗೆ ಬಹುಮತ ಬರಲ್ಲ…!

ಕಾಂಗ್ರೆಸ್ ನವರಿಗೆ ಬಹುಮತ ಬರಲ್ಲ: ಅವರ ಶಾಸಕರ ಮೇಲೆ ಅವರಿಗೆ ನಂಬಿಕೆ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು: ಕಾಂಗ್ರೆಸ್ ನವರಿಗೆ ಬಹುಮತ ಬರಲ್ಲ. ಹಾಗಾಗಿ ಬೇರೆ ಪಕ್ಷದವರ ಜತೆ ಮಾತನಾಡುವ ಪ್ರಯತ್ನ ಪಡ್ತಿದಾರೆ. ಅವರ ಶಾಸಕರ ಮೇಲೆ ಅವರಿಗೆ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಇಂದು ಬೆಂಗಳೂರಿನ ಆರ್.ಟಿ ನಗರದ ಮನೆಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ನಾನು ಮೊದಲಿಂದಲೂ ಒಂದೇ ಮಾತು ಹೇಳುತ್ತ ಬಂದಿದ್ದೇನೆ. ನಮಗೆ ಸ್ಪಷ್ಟ ಬಹುಮತ ಬರುತ್ತದೆ. ನಾವು […]

Continue Reading
20230429 220407

BJP :ನಮ್ಮ ಕಂಪ್ಲೀಟ್ ಗ್ರೌಂಡ್ ರಿಪೋರ್ಟ್ ಮೂಲಕ ನಾವು ಸಂಪೂರ್ಣ ಬಹುಮತ…!

ನಮ್ಮ ಕಂಪ್ಲೀಟ್ ಗ್ರೌಂಡ್ ರಿಪೋರ್ಟ್ ಮೂಲಕ ನಾವು ಸಂಪೂರ್ಣ ಬಹುಮತ ಪಡೆಯುತ್ತೇವೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಎಕ್ಸಿಟ್ ಪೋಲ್ ಒಂದೇ ರಿತಿಯಾಗಿಲ್ಲ; ಫಲಿತಾಂಶಕ್ಕಾಗಿ ಮೇ 13ರವರೆಗೆ ಕಾಯೋಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹಾವೇರಿ: ಎಕ್ಸಿಟ್ ಪೋಲ್ ಒಂದೊಂದು ರೀತಿ ತೋರಿಸುತ್ತಿವೆ. ನಮ್ಮ ಕಂಪ್ಲೀಟ್ ಗ್ರೌಂಡ್ ರಿಪೋರ್ಟ್ ಮೂಲಕ ನಾವು ಸಂಪೂರ್ಣ ಬಹುಮತ ಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಇಂದು ಹಾವೇರಿಯಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಎಕ್ಸಿಟ್ ಪೋಲ್ ನೂರಕ್ಕೆ ನೂರರಷ್ಟು ನಿಖರವಾಗಿರುವುದಿಲ್ಲ. 5 ರಿಂದ […]

Continue Reading
20230507 105249

ಬೆಂಗಳೂರು:ನರೇಂದ್ರ ಮೋದಿಯವರ ಬೆಂಗಳೂರು ‘ರೋಡ್ ಷೋ’ ಅಭೂತಪೂರ್ವ, ಐತಿಹಾಸಿಕ…!

ನರೇಂದ್ರ ಮೋದಿಯವರ ಬೆಂಗಳೂರು ‘ರೋಡ್ ಷೋ’ ಅಭೂತಪೂರ್ವ, ಐತಿಹಾಸಿಕ: ತೇಜಸ್ವಿ ಸೂರ್ಯಬೆಂಗಳೂರು: ಪ್ರಧಾನಮಂತ್ರಿಗಳಾದ ನರೇಂದ್ರಮೋದಿಯವರು ಇಂದು ನಡೆಸಿದ ‘ನಮ್ಮ ಬೆಂಗಳೂರು-ನಮ್ಮ ಹೆಮ್ಮೆ’ ರೋಡ್ ಷೋ ಅಭೂತಪೂರ್ವ ಮತ್ತು ಐತಿಹಾಸಿಕ ಎಂದು ಬೆಂಗಳೂರು ದಕ್ಷಿಣ ಸಂಸದರಾದ ತೇಜಸ್ವಿ ಸೂರ್ಯ ಹೇಳಿದ್ದಾರೆ.ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ದಕ್ಷಿಣ, ಕೇಂದ್ರ, ಉತ್ತರದಲ್ಲಿ ಸಾಗಿದ ಪ್ರಧಾನಮಂತ್ರಿಯವರ ರೋಡ್ ಷೋ ಅಭೂತಪೂರ್ವವಾಗಿ ಯಶಸ್ವಿಯಾಗಿದೆ. 12 ಲಕ್ಷಕ್ಕೂ ಅಧಿಕ ಜನ ಭಾಗವಹಿಸಿ ಆಶೀರ್ವದಿಸಿದ್ದಾರೆ. ಪುಷ್ಪ ಮಳೆಯೊಂದಿಗೆ ಪ್ರಧಾನಮಂತ್ರಿಯವರನ್ನು ಸ್ವಾಗತಿಸಿದ್ದಾರೆ […]

Continue Reading
20230429 220308

BJP :ಕಾಂಗ್ರೆಸ್ ಅವರು ನನ್ನನ್ನು 91 ಬಾರಿ ಬೈದಿದ್ದಾರೆ – ಪ್ರಧಾನಿ ಮೋದಿ

ಕಾಂಗ್ರೆಸ್ ಅವರು ನನ್ನನ್ನು 91 ಬಾರಿ ಬೈದಿದ್ದಾರೆ – ಪ್ರಧಾನಿ ಮೋದಿಅಂಬೇಡ್ಕರ್ ರಂತಹ ಮಹಾ ಪುರುಷರನ್ನೇ ದ್ರೋಹಿ ಎಂದು ಕರೆದಿದೆ ಕಾಂಗ್ರೆಸ್ – ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ತೀಕ್ಷ್ಣ ಮಾತಿನಿಂದ ಹರಿಹಾಯ್ದ ಪ್ರಧಾನಿ ನರೇಂದ್ರ ಮೋದಿ ಹುಮನಾಬಾದ್, ಏಪ್ರಿಲ್ 29: ನನ್ನನ್ನು ಬೈಯ್ಯುವುದರಲ್ಲೇ ಕಾಂಗ್ರೆಸ್ ಸಮಯ ವ್ಯರ್ಥ ಮಾಡ್ತಿದೆ. ಚುನಾವಣೆ ಸಂದರ್ಭದಲ್ಲಿ ನನಗೆ ಮತ್ತೆ ಬೈಯುವ ಕೆಲಸವನ್ನು ಮಾಡುತ್ತಿದ್ದಾರೆ. ಕಾಂಗ್ರೆಸ್ ಅವರು ಇದುವರೆಗೂ ನನ್ನನ್ನು 91 ಬಾರಿ ಅವಾಚ್ಯವಾಗಿ ಬೈದಿದ್ದಾರೆ. ಹಾಗೆ ನಿಂದಿಸಿದಾಗಲೆಲ್ಲಾ ಅವರರಿಗೆ ಶಿಕ್ಷೆ […]

Continue Reading
IMG 20230423 WA0034

ಲಿಂಗಾಯತ ಸಿಎಂಗಳ ಬಗ್ಗೆ ಸಿದ್ದರಾಮಯ್ಯ ಹೇಳಿಕೆಗೆ ಜನ ಪಾಠ ಕಲಿಸುತ್ತಾರೆ…!

ಲಿಂಗಾಯತ ಸಿಎಂಗಳ ಬಗ್ಗೆ ಸಿದ್ದರಾಮಯ್ಯ ಹೇಳಿಕೆಗೆ ಜನ ಪಾಠ ಕಲಿಸುತ್ತಾರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಬೆಂಗಳೂರು: ಲಿಂಗಾಯತ ಸಿಎಂಗಳ ಬಗ್ಗೆ ಸಿದ್ದರಾಮಯ್ಯ ಅವರಿಂದ ಇಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ. ಅವರೊಬ್ಬ ಹಿರಿಯ ನಾಯಕ. ಅವರು ಲಿಂಗಾಯತ ಸಮುದಾಯದ ಆತ್ಮ ಕಲುಕುವ ಹೇಳಿಕೆ ಕೊಟ್ಟಿದ್ದಾರೆ. ಲಿಂಗಾಯತ ಸಮುದಾಯವನ್ನೇ ಭ್ರಷ್ಟ ಅನ್ನೋದು ತಪ್ಪು. ಅವರಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಇಂದು ಬಸವ ಜಯಂತಿ. ಇಂದಿನಿಂದ […]

Continue Reading
IMG 20230420 WA0002

Karnataka:ನನ್ನ ಸಾವಾದರೆ ಶಿಗ್ಗಾವಿಯ ಮಣ್ಣಿನಲ್ಲಿ ಮಣ್ಣು ಮಾಡಿ ನಾನು ಓಡಿ ಹೋಗುವ ಸಿಎಂ ಅಲ್ಲ…!

ಶಿಗ್ಗಾವಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಬೃಹತ್ ರೋಡ್ ಶೊ ನನ್ನ ಸಾವಾದರೆ ಶಿಗ್ಗಾವಿಯ ಮಣ್ಣಿನಲ್ಲಿ ಮಣ್ಣು ಮಾಡಿ ನಾನು ಓಡಿ ಹೋಗುವ ಸಿಎಂ ಅಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾವೇರಿ (ಶಿಗ್ಗಾವಿ): ನನ್ನನ್ನು ಬೆಳಸಿದವರು ನೀವು. ನನ್ನನ್ನು ಉಳಿಸಿಕೊಳ್ಳುವವರು ನೀವು. ನಾನು ನನ್ನ ಜೀವನದ ಕೊನೆಯ ಉಸಿರು ಇರುವವರೆಗೂ ನಿಮ್ಮ ಸೇವೆಯನ್ನು ಮಾಡುತ್ತೇನೆ. ನನ್ನ ಸಾವಾದರೆ, ನನ್ನನ್ನು ಶಿಗ್ಗಾವಿಯಲ್ಲೇ ಮಣ್ಣು ಮಾಡಬೇಕು. ಇದು ನನ್ನ ಶಿಗ್ಗಾವಿಯ ಭೂಮಿ ತಾಯಿಯ ಮಣ್ಣಿನ ಋಣ ತೀರಿಸುವಂತದ್ದಾಗಲಿ ಎಂದು ಮುಖ್ಯಮಂತ್ರಿ ಬಸವರಾಜ […]

Continue Reading
IMG 20230417 WA0064

ಕಾಂಗ್ರೆಸ್ : ಡಿ ಕೆ ಶಿವಕುಮಾರ್ ನಾಮಪತ್ರ ಸಲ್ಲಿಕೆ…!

ಕನಕಪುರ: ಈ ಬಾರಿಯ ಚುನಾವಣೆಯಲ್ಲಿ ಕೇವಲ ಕರ್ನಾಟಕ ರಾಜ್ಯ ಮಾತ್ರವಲ್ಲ ಇಡೀ ರಾಷ್ಟ್ರವೇ ಕನಕಪುರ ಮತದಾರರ ತೀರ್ಪನ್ನು ಎದುರು ನೋಡುತ್ತಿದ್ದಾರೆ. ಇಂದು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ನೀವೆಲ್ಲರೂ ನನಗೆ ಆಶೀರ್ವಾದ ಮಾಡಿದ್ದೀರಿ. ನಿಮ್ಮೆಲ್ಲರ ಪಾದಗಳಿಗೆ ಸಾಷ್ಟಾಂಗ ನಮಸ್ಕಾರಗಳು. ಎಂದು ಕನಕಪುರದಲ್ಲಿ ನಾಮಪತ್ರ ಸಲ್ಲಿಸಿದ ನಂತರ ಜನಸ್ತೋಮ ಉದ್ದೇಶಿಸಿ ಡಿ.ಕೆ. ಶಿವಕುಮಾರ್ ಮಾಡಿದರು ದೊಡ್ಡಾಲಹಳ್ಳಿ ಕೆಂಪೇಗೌಡರು ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್ ಹಾಗೂ ಮಂಜುಳಾ ಅವರಿಗೆ ಜನ್ಮ ಕೊಟ್ಟಿದ್ದಾರೆ. ಆದರೆ ಈ ಡಿ.ಕೆ ಶಿವಕುಮಾರ್ ನನ್ನು ಕಳೆದ 40 […]

Continue Reading
IMG 20230417 WA0067

ಬೆಂಗಳೂರು :ಹಿರಿಯ ನಾಯಕನಿಗೆ ನೀಡಬೇಕಾದ ಗೌರವ ನೀಡಿಲ್ಲ…!

ಇಂದು ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದೇನೆ. ಅನೇಕರಿಗೆ ಆಶ್ಚರ್ಯವಾಗಿರಬಹುದು. ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕರಾಗಿದ್ದವರು ಕಾಂಗ್ರೆಸ್ ಸೇರುತ್ತಿರುವುದೇಕೆ ಎಂಬ ಪ್ರಶ್ನೆ ಸಹಜವಾಗಿ ಮೂಡುತ್ತಿದೆ. ಅನೇಕ ತಿಂಗಳಿಂದ ಹಿರಿಯ ನಾಯಕನಾಗಿ ನನಗೆ ಆಗಿರುವ ವೇದನೆ ಯಾರೂ ಅರ್ಥ ಮಾಡಿಕೊಂಡಿಲ್ಲ. ನಾನು ಬಿಜೆಪಿ ಪಕ್ಷ ಕಟ್ಟಿ ಬೆಳೆಸಿದ್ದೆ. ಉತ್ತರ ಕರ್ನಾಟಕದಲ್ಲಿ ಪಕ್ಷಕ್ಕೆ ಸಂಘಟನೆ ಮಾಡಿದ್ದೆ. ಬಿಜೆಪಿ ನನಗೆ ಕೊಟ್ಟ ಸ್ಥಾನಮಾನ, ಅಧಿಕಾರಕ್ಕೆ ಪ್ರತಿಯಾಗಿ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷ ಕಟ್ಟಿ ಬೆಳೆಸಿದ್ದೇನೆ. ಹುಬ್ಬಳ್ಳಿ ಯಲ್ಲಿ 6 ಬಾರಿ ಶಾಸಕನಾಗಿ ಗೆದ್ದಿದ್ದೇನೆ. […]

Continue Reading