IMG 20230718 WA0040

ವಿಧಾನಸಭೆ:ಬರಗಾಲ ಘೋಷಣೆ ಮಾಡಿ, ಪ್ರತಿ ಕ್ಷೇತ್ರಕ್ಕೂ 1 ಕೋಟಿ ಅನುದಾನ ನೀಡಿ…!

ಬರಗಾಲ ಘೋಷಣೆ ಮಾಡಿ, ಪ್ರತಿ ಕ್ಷೇತ್ರಕ್ಕೂ 1 ಕೋಟಿ ಅನುದಾನ ನೀಡಿ: ಬಸವರಾಜ ಬೊಮ್ಮಾಯಿ ಬೆಂಗಳೂರು: ರಾಜ್ಯದಲ್ಲಿ ಮಳೆ ಅಭಾವ ಉಂಟಾಗಿ ರೈತರು ಬಿತ್ತಿದ ಬೀಜ ಮೊಳಕೆಯಿಡೆದಿಲ್ಲ. ಬರಗಾಲ ಘೋಷಣೆ ಮಾಡಿ, ಪ್ರತಿ ಕ್ಷೇತ್ರಕ್ಕೂ ಒಂದು ಕೋಟಿ ರೂ.ಅನುದಾನ ನೀಡಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.ವಿಧಾನಸಭೆಯಲ್ಲಿ ನಿಲುವಳಿ ಸೂಚನೆ ಮೇಲೆ ಪ್ರಾಸ್ತಾವಿಕ ಮಾತನಾಡಿದ ಅವರು, ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿ ಹಲವೆಡೆ ಮಳೆಯ ಅಭಾವ ಉಂಟಾಗಿದೆನಿಗದಿತ ಸಮಯಕ್ಕೂ ಮಳೆ ಬಂದಿಲ್ಲ. ಮಳೆ ಬಾರದ ಕಾರಣ ರೈತರು […]

Continue Reading
IMG 20230707 WA0049

ಜನರ ಸಂಕಷ್ಟಗಳಿಗೆ ಸ್ಪಂದಿಸುವ ಪೂರ್ಣಪ್ರಮಾಣದ ಆಯವ್ಯಯ….!

ಎಂಟು ವರ್ಷಗಳಿಂದ ಕೇಂದ್ರ ಸರ್ಕಾರದ ಬೆಲೆ ಏರಿಕೆಯಿಂದ ಬಳಲಿದ್ದ ನಮ್ಮ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಪೂರ್ಣಪ್ರಮಾಣದ ಆಯವ್ಯಯ ಮಂಡನೆ- ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಕಿ ಕೊಡ್ತೀವಿ ಅಂದಾಗ ಬೇಡ ಹಣ ಕೊಡಿ ಅಂದ್ರು-ಈಗ ಹಣ ಕೊಡ್ತಿದ್ದೀವಿ. ಬೇಡ ಅಕ್ಕಿ ಕೊಡಿ ಅಂತಾರೆ: ಬಿಜೆಪಿಯವರ ಡಬ್ಬಲ್ ಟಂಗ್ ನಮ್ಮ ಗ್ಯಾರಂಟಿಗಳಿಗೆ ನಾಡಿನ ಶೇ90 ರಷ್ಟು ಮಂದಿ ಫಲಾನುಭವಿಗಳು ಈಗಾಗಲೇ ಕೋಟಿ ಮಂದಿ ನೋಂದಣಿ ಮಾಡಿಸಿದ್ದಾರೆ. ಪ್ರತೀ ದಿನ 49 ಲಕ್ಷ ಮಹಿಳೆಯರು ಉಚಿತ ಪ್ರಯಾಣಿಸುತ್ತಿದ್ದಾರೆ ಬೆಂಗಳೂರು, ಜುಲೈ 7 : […]

Continue Reading
IMG 20230706 WA0001

ಸವಾಲುಗಳನ್ನು ಎದುರಿಸುವ ಶಕ್ತಿ ವೀರಶೈವ ಲಿಂಗಾಯತ ಸಮಾಜಕ್ಕೆ ಇದೆ..!

ರಾಜಕೀಯ ಮೀರಿ ಒಗ್ಗಟ್ಟಾದರೆ ಸಮಾಜದ ಸಮಸ್ಯೆಗಳಿಗೆ ಪರಿಹಾರ: ಸವಾಲುಗಳನ್ನು ಎದುರಿಸುವ ಶಕ್ತಿ ವೀರಶೈವ ಲಿಂಗಾಯತ ಸಮಾಜಕ್ಕೆ ಇದೆ: ಬಸವರಾಜ ಬೊಮ್ಮಾಯಿ ಬೆಂಗಳೂರು: ಈ ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯ ಹಲವಾರು ಸವಾಲುಗಳನ್ನು ಎದುರಿಸಿದೆ. ಸವಾಲನ್ನು ಎದುರಿಸುವವರು ನಾಯಕರಾಗುತ್ತಾರೆ. ಸವಾಲುಗಳನ್ನು ಎದುರಿಸುವ ಶಕ್ತಿ ವೀರಶೈವ ಲಿಂಗಾಯತ ಸಮಾಜಕ್ಕೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಸಮಾಜದ ನೂತನ ಶಾಸಕರು ಹಾಗೂ ಸಚಿವರ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ […]

Continue Reading
IMG 20230624 WA0018

Karnataka: ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸುವಷ್ಟು ಶಕ್ತವಾಗಿದೆ..!

ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸುವಷ್ಟು ಶಕ್ತವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೀಜ, ರಸಗೊಬ್ಬರ, ಔಷಧದ ಸಮೇತ ಕೃಷಿ ಇಲಾಖೆ ಸರ್ವ ಸನ್ನದ್ದವಾಗಿದೆ ಬೆಂಗಳೂರು, ಜೂನ್ 24: ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸಲು ಶಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವವರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಪ್ರಸ್ತುತ ಮಳೆ ಶುರುವಾಗಿದೆ. ಮಳೆ ಇನ್ನಷ್ಟು ವ್ಯಾಪಕವಾಗಿ ಆಗಬೇಕಿದೆ. ಮಳೆ ಬರಲಿ ಎಂದು ಪ್ರಾರ್ಥಿಸುತ್ತಿದ್ದು, ಬಿತ್ತನೆ ಈಗಾಗಲೇ ಕೆಲವೆಡೆ ಪ್ರಾರಂಭವಾಗಿದೆ. ಇನ್ನು ಕೆಲವೆಡೆ ಕುಡಿಯುವ ನೀರಿನ ಸಮಸ್ಯೆ ಇದ್ದು, […]

Continue Reading
IMG 20230623 WA0012

Karnataka :ಅನ್ನಭಾಗ್ಯ ಯೋಜನೆಗೆ ರಾಜ್ಯಕ್ಕೆ ಅಕ್ಕಿ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರ….!

ಅನ್ನಭಾಗ್ಯ ಯೋಜನೆಗೆ ರಾಜ್ಯಕ್ಕೆ ಅಕ್ಕಿ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರ ನವದೆಹಲಿ (ಕರ್ನಾಟಕ ವಾರ್ತೆ) ಜೂನ್ -23 ಬಡತನದ ರೇಖೆಗಿಂತ ಕೆಳಗಿರುವ ಜನರಿಗೆ ಒದಗಿಸಲು 1.35 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ನೀಡಲು ನಾವು ವಿನಂತಿಸಿದ್ದೇವೆ ಆದರೆ ಕೇಂದ್ರ ಆಹಾರ ಸಚಿವರು ಅಕ್ಕಿಯನ್ನು ನೀಡಲು ನಿರಾಕರಿಸಿರುತ್ತಾರೆ ಎಂದು ರಾಜ್ಯ ಆಹಾರ ಸಚಿವರಾದ ಕೆ ಎಚ್ ಮುನಿಯಪ್ಪ ರವರು ದೆಹಲಿಯಲ್ಲಿ ಇಂದು ತಿಳಿಸಿದರು. ಸಭೆಯ ಬಳಿಕ ಸಚಿವರು ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡುವಾಗ ಹೀಗೆ ತಿಳಿಸಿದರು ಇಂದು ಕೇಂದ್ರ ಜವಳಿಯ […]

Continue Reading
IMG 20230623 WA0051

ಕರ್ನಾಟಕ : 5 ವರ್ಷದಲ್ಲಿ 25 ಕೋಟಿ ಸಸಿ ನೆಡುವ ಸಂಕಲ್ಪ…!

5 ವರ್ಷದಲ್ಲಿ 25 ಕೋಟಿ ಸಸಿ ನೆಡುವ ಸಂಕಲ್ಪ ಜುಲೈ 1ರಿಂದ 7ರವರೆಗೆ ವನಮಹೋತ್ಸವ; 1 ವಾರದಲ್ಲಿ 1 ಕೋಟಿ ಗಿಡ ನೆಡುವ ಗುರಿ -ಸಚಿವ ಈಶ್ವರ ಖಂಡ್ರೆ ಬೆಂಗಳೂರು, ಜೂ. 23 (ಕರ್ನಾಟಕ ವಾರ್ತೆ): ಜುಲೈ 1 ರಿಂದ 7 ದಿನಗಳ ಕಾಲ ಆಚರಿಸಲಾಗುತ್ತಿರುವ ವನಮಹೋತ್ಸವದ ಅಂಗವಾಗಿ ಈ ಒಂದು ವಾರದಲ್ಲಿ ರಾಜ್ಯಾದ್ಯಂತ 1ಕೋಟಿ ಸಸಿಗಳನ್ನು ನೆಡಲಾಗುವುದು ಹಾಗೂ ಪ್ರಸಕ್ತ ಸಾಲಿನಲ್ಲಿ ಒಟ್ಟು 5 ಕೋಟಿ ಸಸಿಗಳನ್ನು ರಾಜ್ಯಾದ್ಯಂತ ನೆಡುವ ಗುರಿ ಹೊಂದಲಾಗಿದ್ದು, ಅವುಗಳು ಮರವಾಗಿ ಬೆಳೆಯುವಂತೆ ಕಾಳಜಿ ವಹಿಸುವುದರ ಜೊತೆಗೆ ಎಷ್ಟು ಸಸಿಗಳು ಉಳಿದಿವೆ ಎಂಬ ಬಗ್ಗೆ ಜಿಯೋ ಟ್ಯಾಗ್ ಮೂಲಕ ಆಡಿಟ್ ಮಾಡಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ವಿಕಾಸಸೌಧದಲ್ಲಿಂದು ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯ್ತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸಚಿವರು,  ಅರಣ್ಯ ವ್ಯಾಪ್ತಿ, ಹಸಿರು ವ್ಯಾಪ್ತಿ ಹೆಚ್ಚಿಸುವುದು ಸರ್ಕಾರದ ಗುರಿಯಾಗಿದೆ. ಒಟ್ಟಾರೆ ಭೌಗೋಳಿಕ ಪ್ರದೇಶದ ಪೈಕಿ ಅರಣ್ಯ ಹಾಗೂ ಹಸಿರು ವ್ಯಾಪ್ತಿ ಕನಿಷ್ಠ ಶೇ.33ಕ್ಕೆ ಇರಬೇಕು ಎಂಬುದು ಮಾನದಂಡ. ಆದರೆ ಪ್ರಸ್ತುತ ರಾಜ್ಯದಲ್ಲಿ ಈ ವ್ಯಾಪ್ತಿ ಸುಮಾರು 20.19ರಷ್ಟು ಮಾತ್ರವೇ ಇದ್ದು, ಸರ್ಕಾರ ವ್ಯಾಪ್ತಿ ಹೆಚ್ಚಳವನ್ನು ಆದ್ಯ ಕರ್ತವ್ಯ ಎಂದು ಪರಿಗಣಿಸಿದೆ ಎಂದರು. ನಾವು ಪ್ರಕೃತಿ ಪರಿಸರ ರಕ್ಷಿಸಿದರೆ ಪ್ರಕೃತಿ ನಮ್ಮನ್ನು ರಕ್ಷಿಸುತ್ತದೆ.  ಅರಣ್ಯ ಇಲಾಖೆ ಮುಖ್ಯವಾಗಿ ಅರಣ್ಯ ಸಂರಕ್ಷಿಸಬೇಕು. ಆ ಕಾರ್ಯವನ್ನು ಇಲಾಖೆ ಮಾಡುತ್ತದೆ.  ಮಕ್ಕಳಲ್ಲಿ ಪರಿಸರ ಕಾಳಜಿ ಮೂಡಿಸಲು ಯೋಜನೆ ರೂಪಿಸಿದ್ದು, ಶಿಕ್ಷಣ ಇಲಾಖೆಯೂ ಸೇರಿದಂತೆ ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳ ಸಹಯೋಗದಲ್ಲಿ ಪ್ರಸಕ್ತ ವರ್ಷ 5 ಕೋಟಿ ಸಸಿ ನೆಟ್ಟು, ಪೋಷಿಸುವ ಮೂಲಕ ಯೋಜನೆಯನ್ನು ಯಶಸ್ವಿಗೊಳಿಸಲಾಗುವುದು. ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಎಷ್ಟು ಮಹತ್ವದ್ದು ಎಂಬುದು ಇಡೀ ಮಾನವ ಕುಲಕ್ಕೆ ಅರಿವಾಯಿತು. ಹೀಗಾಗಿ ನಮಗೆ ಪ್ರಾಣವಾಯು ನೀಡುವ ವೃಕ್ಷಗಳನ್ನು ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದ್ದು, ಮಾಧ್ಯಮಗಳು ಈ ನಿಟ್ಟಿನಲ್ಲಿ ಜನಜಾಗೃತಿ ಮೂಡಿಸಬೇಕು.ಜುಲೈ 1ರಿಂದ 7 ದಿನಗಳ ಕಾಲ ಆಚರಿಸಲಾಗುತ್ತಿರುವ ವನಮಹೋತ್ಸವಕ್ಕಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯ್ತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೂ ಇದ್ದು,  ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಸದಸ್ಯ ಕಾರ್ಯದರ್ಶಿ ಆಗಿರುತ್ತಾರೆ. ಜಿಲ್ಲೆಯ ಇತರ ಎಲ್ಲ ಇಲಾಖೆಗಳ ಸಹಯೋಗದೊಂದಿಗೆ ಈ ಕಾರ್ಯಕ್ರಮ ರೂಪಿಸಲಾಗಿದೆ. ಹಸಿರು ವ್ಯಾಪ್ತಿ ಹೆಚ್ಚಳ ಕೇವಲ ಅರಣ್ಯ ಇಲಾಖೆ ಒಂದರಿಂದ ಆಗುವ ಕಾರ್ಯವಲ್ಲ. ಇದರಲ್ಲಿ ಇಡೀ ಸಮಾಜ ಪಾಲ್ಗೊಳ್ಳಬೇಕು. ಪ್ರತಿಯೊಬ್ಬರೂ ಸಸಿ ನೆಟ್ಟು ಬೆಳೆಸುವುದು ತಮ್ಮ ಕರ್ತವ್ಯ ಎಂದು ತಿಳಿಯಬೇಕು. ಆಬಾಲವೃದ್ಧರಾದಿಯಾಗಿ ಎಲ್ಲರೂ ಕೈಜೋಡಿಸಿದರೆ ಇದು ಜನಾಂದೋಲನವಾಗುತ್ತದೆ. ಇಂದು ಹಸಿರು ವ್ಯಾಪ್ತಿ ಕ್ಷೀಣಿಸುತ್ತಿರುವುದರ ಪರಿಣಾಮವಾಗಿ ಮತ್ತು ಕೈಗಾರಿಕೆಗಳು, ವಾಹನಗಳು ಮತ್ತು ಮನೆಗಳಲ್ಲಿ ಎಲೆಕ್ಟ್ರಿಕ್ ಉಪಕರಣಗಳಿಂದ ಹೊರಹೊಮ್ಮುವ ಶಾಖ, ತ್ಯಾಜ್ಯ, ಹೊಗೆಯಿಂದ ಹಸಿರು ಮನೆ ಅನಿಲ ಪ್ರಮಾಣ ಹೆಚ್ಚಾಗಿ ಓಜೋನ್ ಪದರಕ್ಕೂ ಹಾನಿಯಾಗಿ ಹವಾಮಾನ ವೈಪರೀತ್ಯ ಆಗುತ್ತಿರುವುದು ನಮಗೆಲ್ಲಾ ತಿಳಿದ ವಿಷಯವಾಗಿದೆ. ಕುಡಿಯುವ ನೀರು, ಸೇವಿಸುವ ಗಾಳಿ ಮಲಿನವಾಗುತ್ತಿದೆ. ಈ ಬಗ್ಗೆ ಎಲ್ಲರಲ್ಲೂ ಜಾಗೃತಿ ಮೂಡಬೇಕು. ನಾವೆಲ್ಲರೂ ಸೇರಿ ಪ್ರಕೃತಿ ಪರಿಸರ ಉಳಿಸಬೇಕು ಎಂದು ಈಶ್ವರ ಖಂಡ್ರೆ ಹೇಳಿದರು.ನಮ್ಮ ಅರಣ್ಯ ಇಲಾಖೆ 5 ಕೋಟಿ ಸಸಿ ನೆಡಲೆಂದೇ ತನ್ನ ನರ್ಸರಿಗಳಲ್ಲಿ ವ್ಯಾಪಕ ಶ್ರೇಣಿಯ ಸಸಿ ಬೆಳೆಸಿದೆ. 2.5 ಕೋಟಿಯಷ್ಟು ಸಸಿಗಳನ್ನು ಅರಣ್ಯ ವ್ಯಾಪ್ತಿಯಲ್ಲಿ ಇಲಾಖೆಯ ವತಿಯಿಂದ ನೆಡಲಾಗುತ್ತಿದೆ. ದರ ಇಳಿಕೆ:  ತಾವು ಅಧಿಕಾರ ವಹಿಸಿಕೊಳ್ಳುವ ಮೊದಲೇ ರೈತರಿಗೆ ಪೂರೈಕೆ ಮಾಡುತ್ತಿದ್ದ ಸಸಿಗಳ ದರವನ್ನು ಹೆಚ್ಚಳ ಮಾಡಲಾಗಿತ್ತು. ಈ ಬಗ್ಗೆ ಪುನರ್ ಪರಿಶೀಲನೆ ಮಾಡಿ, 5×8 ಗಿಡಗಳಿಗೆ 2 ರೂ., 6 x8 ಗಿಡಗಳಿಗೆ 3 ರೂ. ಮತ್ತು 8 x12 ಗಿಡಗಳಿಗೆ 6 ರೂ. ನಿಗದಿ ಮಾಡಲಾಗಿದೆ ಎಂದು ವಿವರಿಸಿದರು. ಮಹಾತ್ಮಾ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲೂಗ್ರಾಮೀಣ ಪ್ರದೇಶದಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಅದೇ ರೀತಿ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ   ಸ್ಥಳೀಯ ನಗರ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮ ರೂಪಿಸಲಾಗುವುದು. ಒಣ ಮಹೋತ್ಸವ ಆಗಲು ಬಿಡುವುದಿಲ್ಲ: ಯಾವುದೇ ಕಾರಣಕ್ಕೂ ವನಮಹೋತ್ಸವವನ್ನು ಒಣ ಮಹೋತ್ಸವ ಆಗಲು ಬಿಡುವುದಿಲ್ಲ. ನೆಟ್ಟ ಸಸಿಗಳು ಜೀವಂತ ಉಳಿಯಬೇಕು, ಬೆಳೆಯಬೇಕು. ಇದಕ್ಕಾಗಿ ಜಿಯೋ ಟ್ಯಾಗ್ ಮೂಲಕ ಆಡಿಟ್ ಮಾಡಿಸಲಾಗುವುದು, ಅಗತ್ಯ ಬಿದ್ದರೆ ಮೂರನೆ ವ್ಯಕ್ತಿ ಆಡಿಟ್ ಕೂಡ ಮಾಡಿಸಲಾಗುವುದು. ಈ ಬಾರಿ ನೆಟ್ಟ ಗಿಡಗಳ ಪೈಕಿ ಕನಿಷ್ಠ ಶೇ.80ರಷ್ಟು ಜೀವಂತ ಉಳಿಸಿ ಬೆಳೆಸುವುದು ನಮ್ಮ ಉದ್ದೇಶವಾಗಿದೆ. ಅಕೇಶಿಯಾ ಮತ್ತು ನೀಲಗಿರಿ ಗಿಡಗಳಿಂದಾಗುವ ದುಷ್ಪರಿಣಾಮದ ಬಗ್ಗೆಯೂ ಕ್ರಮ ವಹಿಸುವ ಭರವಸೆ ನೀಡಿದರು.

Continue Reading
IMG 20230622 WA0043

Karnataka: ಕೃಷಿ ಆದಾಯ ದ್ವಿಗುಣಗೊಳಿಸಲು ಕೇಂದ್ರ ಸರ್ಕಾರ ವಿವಿಧ ಯೋಜನೆಗಳ ಅನುಷ್ಠಾನ…!

ದ್ವಿತೀಯ ಕೃಷಿ ಆದಾಯ ದ್ವಿಗುಣಗೊಳಿಸಲು ಕೇಂದ್ರ ಸರ್ಕಾರ ವಿವಿಧ ಯೋಜನೆಗಳ ಅನುಷ್ಠಾನ – ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬೆಂಗಳೂರು, 22ನೇ ಜೂನ್ (ಕರ್ನಾಟಕ ವಾರ್ತೆ): ದ್ವಿತೀಯ ಕೃಷಿಯ ಮೂಲಕ ರೈತರ ಆದಾಯವನ್ನು ದ್ವಿಗುಣಗೊಳಿಸಲು ಕೇಂದ್ರ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ ಎಂದು ಕೃಷಿ ಮತ್ತು ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಅವರು ತಿಳಿಸಿದರು. ಇಂದು ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯ, ನವದೆಹಲಿಯ ಭಾರತೀಯ ವಿಸ್ತರಣಾ ಶಿಕ್ಷಣ ಸಂಸ್ಥೆ, ಭಾರತೀಯ ವಿಸ್ತರಣಾ ಶಿಕ್ಷಣ ಸಂಸ್ಥೆ (ಕರ್ನಾಟಕ […]

Continue Reading
IMG 20230621 131029 scaled

Karnataka :ನೂತನ ಶಾಸಕರಿಗೆ ತರಬೇತಿ ಶಿಬಿರ…!

ಜು.03ರಿಂದ 10 ದಿನಗಳ ಕಾಲ ಅಧಿವೇಶನನೂತನ ಶಾಸಕರಿಗೆ ತರಬೇತಿ ಶಿಬಿರ ಜೂ.26ರಿಂದ 28ರವರೆಗೆ:ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಬೆಂಗಳೂರು, ಜೂ.21 (ಕರ್ನಾಟಕ ವಾರ್ತೆ):16ನೇ ವಿಧಾನಸಭೆಗೆ ಮೊದಲ ಬಾರಿಗೆ ನೂತನವಾಗಿ ಆಯ್ಕೆಯಾದ 70 ಶಾಸಕರಿಗೆ 3 ದಿನಗಳ ಕಾಲ ತರಬೇತಿ ಶಿಬಿರ ಏರ್ಪಡಿಸಲಾಗಿದೆ. ಜೂ.26ರಿಂದ ಜೂ.28ರವರೆಗೆ ಮೂರು ದಿನಗಳ ಕಾಲ ನಡೆಯುವ ತರಬೇತಿ ಶಿಬಿರದಲ್ಲಿ ಈ ನೂತನ ಶಾಸಕರಿಗೆ ಆರೋಗ್ಯ ಸುಸ್ಥಿರತೆ ಮತ್ತು ಜ್ಞಾನಾಭಿವೃದ್ಧಿಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗುತ್ತದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ತಿಳಿಸಿದರು. ವಿಧಾನಸೌಧದದ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ […]

Continue Reading
20230621 144516

Karnataka : ಬ್ರಾಂಡ್ ಬೆಂಗಳೂರಿಗೆ‌ ಸಲಹೆ ಕೊಡಿ….!

ಬೆಂಗಳೂರಿನ ಅಭಿವೃದ್ಧಿ ವಿಚಾರದಲ್ಲಿ ನನಗೆ ಸಾರ್ವಜನಿಕರ ಅಭಿಪ್ರಾಯ ಬಹಳ ಮುಖ್ಯ. ಈಗಾಗಲೇ ಬೆಂಗಳೂರಿನ ಸರ್ವಪಕ್ಷ ಶಾಸಕರ ಸಭೆ ಮಾಡಿದ್ದೇನೆ. ಬೆಂಗಳೂರಿನ ಎಲ್ಲಾ ವರ್ಗಗಳ ಬ್ರ್ಯಾಂಡ್ ಅಂಬಾಸಿಡರ್ ಗಳ ಜತೆ ಚರ್ಚಿಸಿದ್ದೇನೆ. ಇವರ ಜತೆಗೆ ಸಾರ್ವಜನಿಕರ ಅಭಿಪ್ರಾಯವೂ ಮುಖ್ಯ. ಹೀಗಾಗಿ ಅಭಿಪ್ರಾಯ ಸಂಗ್ರಹಿಸಲು ಪೋರ್ಟಲ್ ಆರಂಭಿಸುತ್ತಿದ್ದೇವೆ. ಬೆಂಗಳೂರಿನ ನಾಗರೀಕರು ಹಾಗೂ ವಿದೇಶದಲ್ಲಿರುವ ಕನ್ನಡಿಗರು ಬೆಂಗಳೂರಿನ ಅಭಿವೃದ್ಧಿ ವಿಚಾರವಾಗಿ ತಮ್ಮ ಸಲಹೆಗಳನ್ನು www.brandbengaluru.karnataka.gov.in ವೆಬ್ ಸೈಟ್ ನಲ್ಲಿ ನಿಗದಿತ ಕಾಲಮಿತಿ ಜೂನ್ 30 ರ ಒಳಗಾಗಿ ನೀಡಬೇಕು ಎಂದು ವಿನಂತಿಸುತ್ತೇನೆ. […]

Continue Reading
IMG 20230405 WA0056 1

BJP :ಧಮ್ಮಿದ್ದರೆ ಪ್ರತಿಯೊಬ್ಬರಿಗೆ 15 ಕೆಜಿ ಅಕ್ಕಿ ಕೊಡಿ….!

ಧಮ್ಮಿದ್ದರೆ ಪ್ರತಿಯೊಬ್ಬರಿಗೆ 15 ಕೆಜಿ ಅಕ್ಕಿ ಕೊಡಿ: ಬಸವರಾಜ ಬೊಮ್ಮಾಯಿ ಇದು ಸುಳ್ಳ ಮಳ್ಳರ ಸರ್ಕಾರ: ಬಸವರಾಜ ಬೊಮ್ಮಾಯಿ ಬೆಂಗಳೂರು: ಕಾಂಗ್ರೆಸ್ ಸಿಎಂಗೆ ಧಮ್ಮಿದ್ದರೆ, ತಾಕತ್ತಿದ್ದರೆ ಎಲ್ಲ ಕಡೆಯಿಂದ ಅಕ್ಕಿ ಶೇಖರಿಸಿ. ಕೆಂದ್ರದ 5 ಪ್ಲಸ್ 10 ಕೆಜಿ ಸೇರಿ ಪ್ರತಿಯೊಬ್ಬರಿಗೆ 15 ಕೆಜಿ ಅಕ್ಕಿ ಕೊಡಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದರು.ಬಿಜೆಪಿ ವತಿಯಿಂದ ಇಂದು ನಗರದ ಆನಂದ ರಾವ್ ವೃತ್ತದ ಬಳಿ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆಗೆ ಮುಂದಾದಾಗ ಅವರನ್ನು […]

Continue Reading