IMG 20220509 WA0052

ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆ ಸುಪ್ರೀಂಕೋರ್ಟ್ ಆದೇಶ ಪಾಲನೆ…!

ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆ ಬಗ್ಗೆ ಸುಪ್ರೀಂಕೋರ್ಟ್ ಆದೇಶ ಸೌಹಾರ್ದಯುತ ಅನುಷ್ಠಾನ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ಮೇ 09 : ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಅದಕ್ಕೆ ಸಂಬಂಧಿಸಿದಂತೆ ೨೦೦೨ ರಲ್ಲಿ ಕರ್ನಾಟಕದ ಅಂದಿನ ಸರ್ಕಾರ ಒಂದು ಆದೇಶ ಹೊರಡಿಸಿದೆ. ಅದನ್ನು ಸೌಹಾರ್ದಯುತವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಜಿಲ್ಲೆಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಸಭೆ ಹಾಗೂ ಗಾಯತ್ರಿಪೀಠ ಮಹಾಸಂಸ್ಥಾನದ ಬಳಿ ಮಾಧ್ಯಮದವರೊಂದಿಗೆ […]

Continue Reading
IMG 20220509 WA0035

ಜಿಲ್ಲಾಪಂಚಾಯತ್ ಸಿಇಓ ಸಭೆ :ಬಜೆಟ್ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಸಹಿಸುವುದಿಲ್ಲ

ಬಜೆಟ್ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಸಹಿಸುವುದಿಲ್ಲ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಟ್ಟೆಚ್ಚರ ನೀವೆಲ್ಲರೂ ನನ್ನ ಕಣ್ಗಾವಲಿನಲ್ಲಿದ್ದೀರಿ: ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರು, ಮೇ 09:ನನ್ನ ಸರ್ಕಾರ ಬಜೆಟ್ ಘೋಷಿತ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬ ಧೋರಣೆ ಸಹಿಸುವುದಿಲ್ಲ. ನೀವೆಲ್ಲರೂ ನನ್ನ( ರಡಾರ್) ಕಣ್ಗಾವಲಿನಲ್ಲಿ ಇದ್ದೀರಿ. ನಿಮ್ಮೆಲ್ಲರನ್ನು ನಾನು ಗಮನಿಸುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಅವರು ಇಂದು ಬೆಂಗಳೂರಿನಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣ […]

Continue Reading
IMG 20220507 WA0011

ಸ್ಥಳೀಯ ಸಂಸ್ಥೆ ಚುನಾವಣೆ: ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ಅಧ್ಯಯನಕ್ಕೆ ಆಯೋಗ ರಚನೆ…!

ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ಅಧ್ಯಯನಕ್ಕೆ ನ್ಯಾಯಮೂರ್ತಿ ಭಕ್ತವತ್ಸಲ ಅಧ್ಯಕ್ಷತೆಯಲ್ಲಿ ಆಯೋಗ ರಚನೆ ಬೆಂಗಳೂರು, ಮೇ 8- ರಾಜ್ಯದಲ್ಲಿ ಹಿಂದುಳಿದ ವರ್ಗಗಳಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡುವ ಕುರಿತು ಅಧ್ಯಯನ ನಡೆಸಲು ಸರ್ಕಾರವು ಪ್ರತ್ಯೇಕ ಆಯೋಗವನ್ನು ನ್ಯಾಯಮೂರ್ತಿ ಭಕ್ತವತ್ಸಲ ಅವರ ಅಧ್ಯಕ್ಷತೆಯಲ್ಲಿ ರಚಿಸಿದೆ. ನಿವೃತ್ತ ಐಎಎಸ್ ಅಧಿಕಾರಿ ಸಿ.ಆರ್. ಚಿಕ್ಕಮಠ ಅವರು ಈ ಆಯೋಗದ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಹಿಂದುಳಿದ ವರ್ಗಗಳಿಗೆ ಪಂಚಾಯತ್ ರಾಜ್ ಸಂಸ್ಥೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೂಕ್ತ ಪ್ರಾತಿನಿಧ್ಯ ಕಲ್ಪಿಸುವ ಕುರಿತ ಪ್ರಕರಣವೊಂದಕ್ಕೆ […]

Continue Reading
IMG 20220509 WA0000

ಭ್ರಷ್ಟಾಚಾರ ಸಹಿಸಲ್ಲ. ವಿಳಂಬ ಧೋರಣೆ ಒಪ್ಪಲ್ಲ…!

ಭ್ರಷ್ಟಾಚಾರ ಸಹಿಸಲ್ಲ. ವಿಳಂಬ ಧೋರಣೆ ಒಪ್ಪಲ್ಲ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಡಳಿತ ಶೈಲಿಯಲ್ಲಿ ಬದಲಾವಣೆ ತರುವ ಸಂಕಲ್ಪ ಮಾಡಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆಬೆಂಗಳೂರು, ಮೇ 08 :: ಭ್ರಷ್ಟಾಚಾರ ಸಹಿಸಲ್ಲ. ಯೋಜನೆಗಳ ವಿಳಂಬವನ್ನು ಒಪ್ಪಲ್ಲ.ಇವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಇಂದು ನಡೆಸಿದ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾತಿಗಳಿಗೆ ನೀಡಿದ ಖಡಕ್ ಸೂಚನೆಗಳು. ಆಡಳಿತ ಶೈಲಿಯಲ್ಲಿ ಬದಲಾವಣೆ ತರುವ ಸಂಕಲ್ಪ ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ಕರೆ ನೀಡಿದರು. ಬಡವರಿಗೆ […]

Continue Reading
DSC 84362 scaled

ಪ್ರತಿ ಕಂದಾಯ ವಿಭಾಗಗಳಲ್ಲಿನ ನೂರು ಗ್ರಾಮಗಳಲ್ಲಿ ಹೊಸ ಆರ್.ಟಿ.ಸಿಗಳನ್ನುಆಗಸ್ಟ್ ಒಳಗೆ ವಿತರಿಸಲು ಕ್ರಮ…!

ಪ್ರತಿ ಕಂದಾಯ ವಿಭಾಗಗಳಲ್ಲಿನ ನೂರು ಗ್ರಾಮಗಳಲ್ಲಿ ಹೊಸ ಆರ್.ಟಿ.ಸಿಗಳನ್ನುಆಗಸ್ಟ್ ಒಳಗೆ ವಿತರಿಸಲು ಕ್ರಮಕ್ಕೆ ಸೂಚನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಬೆಂಗಳೂರು, ಮೇ 06: ರಾಜ್ಯದ ಎಲ್ಲಾ ಕಂದಾಯ ವಿಭಾಗಗಳ ತಲಾ 100 ಗ್ರಾಮಗಳಲ್ಲಿ ಹೊಸ ಆರ್.ಟಿ.ಸಿಗಳನ್ನು ಆಗಸ್ಟ್ ಮಾಹೆಯೊಳಗೆ ವಿತರಿಸಲು ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. 2022-23 ನೇ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. […]

Continue Reading
IMG 20220506 WA0023

ವಸತಿ ಇಲಾಖೆ: 6 ಲಕ್ಷ ಮನೆ ನಿರ್ಮಾಣದ ಗುರಿ….!

ಅಮೃತ ಯೋಜನೆಯ ಮನೆಗಳನ್ನೂ ಒಳಗೊಂಡಂತೆ ಒಟ್ಟು 6 ಲಕ್ಷ ಮನೆಗಳನ್ನು ಡಿಸೆಂಬರ್ ಮಾಹೆಯೊಳಗೆ ಪೂರ್ಣಗೊಳಿಸಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ಮೇ 06 : ಅಮೃತ ಯೋಜನೆಯ ಮನೆಗಳನ್ನೂ ಒಳಗೊಂಡಂತೆ ಒಟ್ಟು 6 ಲಕ್ಷ ಮನೆಗಳನ್ನು ಡಿಸೆಂಬರ್ ಮಾಹೆಯೊಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. 2022-23 ನೇ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.ಸಭೆಯ ಮುಖ್ಯಾಂಶಗಳು: ಫಲಾನುಭವಿಗಳ ಆಯ್ಕೆ […]

Continue Reading
IMG 20220505 WA0031

ಯಶಸ್ವಿನಿ ಯೋಜನೆ ಅಕ್ಟೋಬರ್ 2 ರಂದು ಉದ್ಘಾಟನೆ …..!

ಯಶಸ್ವಿನಿ ಯೋಜನೆಯನ್ನು ಅಕ್ಟೋಬರ್ 2 ರಂದು ಉದ್ಘಾಟನೆ ಮಾಡಲು ಸೂಕ್ತ ಕ್ರಮ ವಹಿಸಲು ಸಿಎಂ.ಸೂಚನೆ ಬೆಂಗಳೂರು, ಮೇ 05: ಯಶಸ್ವಿನಿ ಯೋಜನೆಯನ್ನು ಅಕ್ಟೋಬರ್ 2 ರಂದು ಉದ್ಘಾಟನೆ ಮಾಡಲು ಸೂಕ್ತ ಕ್ರಮ ವಹಿಸುವಂತೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 2022- 23 ನೆ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅವರು ಇಂದು ಸಹಕಾರ ಇಲಾಖೆಯ ಪ್ರಗತಿ ಪರಿಶೀಲಿಸಿದರು. ಸಭೆಯ ಇತರ ಮುಖ್ಯಾಂಶಗಳು: . ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆಗೆ ಸಂಬಂಧಿಸಿದಂತೆ ಆರ್.ಬಿ.ಐ ನಿಯಮಾವಳಿಗಳ […]

Continue Reading
IMG 20220505 WA0037

ಐಐಟಿ ಮಾದರಿಯಲ್ಲಿ ರಾಜ್ಯದ 7 ಇಂಜಿನಿಯರಿಂಗ್ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಲು ಟಾಸ್ಕ್ ಫೋರ್ಸ್

ಐಐಟಿ ಮಾದರಿಯಲ್ಲಿ ರಾಜ್ಯದ ೭ ಇಂಜಿನಿಯರಿಂಗ್ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಲು ಟಾಸ್ಕ್ ಫೋರ್ಸ್ ರಚನೆಗೆ ಸಿಎಂ ಸೂಚನೆಬೆಂಗಳೂರು, ಮೇ 05: ಐಐಟಿ ಮಾದರಿಯಲ್ಲಿ ರಾಜ್ಯದ 6 ಇಂಜಿನಿಯರಿಂಗ್ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಲು ಟಾಸ್ಕ್ ಫೋರ್ಸ್ ರಚನೆಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು. ಕರ್ನಾಟಕ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿ ಗಳಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಸಂಬಂಧಿಸಿದಂತೆ ಎನ್ ಐ ಟಿ, ಐಐಟಿಗಳ ನಿವೃತ್ತ ನಿರ್ದೇಶಕರು, ಶಿಕ್ಷಣ ತಜ್ಞರು ಒಳಗೊಂಡಿರುವ ಸಮಿತಿಯನ್ನು ಇನ್ನೆರಡು ದಿನಗಳ ಒಳಗಾಗಿ ರಚಿಸಬೇಕು. ಕೆ ಐ ಟಿಗಳಿಗೆ […]

Continue Reading
IMG 20220505 WA0002

ಗ್ರಾ.ಪಂ ಗಳಲ್ಲಿ ಗ್ರಾಮೀಣ ಹಾಗೂ ದೇಸೀ ಕ್ರೀಡೆಗಳ ಉತ್ಸವ….!

ಗ್ರಾ.ಪಂ ಗಳಲ್ಲಿ ಗ್ರಾಮೀಣ ಹಾಗೂ ದೇಸೀ ಕ್ರೀಡೆಗಳ ಉತ್ಸವ ಆಯೋಜಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಜಾತ್ರೆ ಸ್ವರೂಪದಲ್ಲಿ ಕ್ರೀಡಾ ಉತ್ಸವ ಬೆಂಗಳೂರು, ಮೇ 04: ಗ್ರಾಮೀಣ ಹಾಗೂ ದೇಸೀ ಕ್ರೀಡೆಗಳನ್ನು ಉತ್ತೇಜಿಸಲು ಪ್ರಮುಖವಾಗಿ ಕಬ್ಬಡ್ಡಿ, ಖೊ- ಖೋ , ಕುಸ್ತಿ, ಎತ್ತಿನಗಾಡಿ ಸ್ಪರ್ಧೆಗಳು ಸೇರಿದಂತೆ ಒಟ್ಟು ಹತ್ತು ಗ್ರಾಮೀಣ ಕ್ರೀಡೆಗಳನ್ನು ಗುರುತಿಸಿ 2-3 ತಿಂಗಳ ಕಾಲ ಖಾಸಗಿ ಪ್ರಾಯೋಜಕತ್ವದಲ್ಲಿ ಆಯೋಜಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ […]

Continue Reading
IMG 20220503 WA0057

KHELO INDIA: ಕಬ್ಬಡ್ಡಿ ಮತ್ತು ಬ್ಯಾಸ್ಕೆಟ್ ಬಾಲ್ ಕ್ರೀಡೆ ಪ್ರೋತ್ಸಾಹಿಸಲು ತೀರ್ಮಾನ ….!

ಕಬ್ಬಡ್ಡಿ ಮತ್ತು ಬ್ಯಾಸ್ಕೆಟ್ ಬಾಲ್ ಕ್ರೀಡೆ ಪ್ರೋತ್ಸಾಹಿಸಲು ತೀರ್ಮಾನ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು: – ಕಬ್ಬಡ್ಡಿ ಮತ್ತು ಬ್ಯಾಸ್ಕೆಟ್ ಬಾಲ್ ಕ್ರೀಡೆಗಳನ್ನು ಪ್ರೋತ್ಸಾಹಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ರಾಜ್ಯ ಸರ್ಕಾರ 75 ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಸಂದರ್ಭದಲ್ಲಿ 75 ಕ್ರೀಡಾಪಟುಗಳನ್ನು ದತ್ತು ಪಡೆದು 4 ವರ್ಷಗಳ ಕಾಲ ಗುಣಮಟ್ಟದ ತರಬೇತಿ, ಕ್ರೀಡಾ ಸೌಲಭ್ಯಗಳನ್ನು ನೀಡುವ ಮೂಲಕ ರಾಜ್ಯದ ಕನಿಷ್ಟ 10 ಕ್ರೀಡಾಪಟುಗಳು ಮುಂದಿನ ಒಲಂಪಿಕ್ಸ್ ನಲ್ಲಿ ಭಾಗವಹಿಸುವಂತೆ […]

Continue Reading