IMG 20230531 WA0037

ಕಾಂಗ್ರೆಸ್: ಎಲ್ಲಾ ಐದು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ

ಎಲ್ಲಾ ಐದು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ : ಮುಖ್ಯಮಂತ್ರಿ ಸಿದ್ಧರಾಮಯ್ಯ ಬೆಂಗಳೂರು, ಮೇ 31 : ಐದು ಗ್ಯಾರೆಂಟಿಗಳನ್ನು ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಜೂನ್ 2 ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿಳಿಸಿದರು. ಅವರು ಇಂದು ಗ್ಯಾರಂಟಿ ಯೋಜನೆಗಳ ಕುರಿತು ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಐದು ಗ್ಯಾರೆಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯ ಅಧಿಕಾರಿಗಳು ಸಚಿವರಿಗೆ ಗ್ಯಾರೆಂಟಿ ಯೋಜನೆಗಳ ಆರ್ಥಿಕ ಪರಿಣಾಮ […]

Continue Reading
IMG 20230516 WA0006

BJP : ಹೊಸ ಸರ್ಕಾರ ಯಾವುದೇ ತನಿಖೆ ನಡೆಸಲಿ; ಎದುರಿಸಲು ನಾವು ಸಿದ್ದ…!

ಹೊಸ ಸರ್ಕಾರ ಯಾವುದೇ ತನಿಖೆ ನಡೆಸಲಿ; ಎದುರಿಸಲು ನಾವು ಸಿದ್ದ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಬೆಂಗಳೂರು: ಹೊಸ ಸರ್ಕಾರ ಯಾವುದೇ ತನಿಖೆ ನಡೆಸಲಿ. ಎದುರಿಸಲು ನಾವು ಸಿದ್ದ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಇಂದು ಬೆಂಗಳೂರಿನ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯಲ್ಲಿ ಬಿಜೆಪಿ ಅವಧಿಯಲ್ಲಿ ಹಗರಣ ನಡೆದಿದೆ ಎಂದು ಸರ್ಕಾರ ತನಿಖೆಗೆ ಆದೇಶಿಸಿರುವುದಕ್ಕೆ ಮಾಧ್ಯಮಗಳ ಪ್ರಶ್ನಗೆ ಉತ್ತರಿಸಿದ ಅವರು ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ದೂರು ಇರಲಿ. […]

Continue Reading
IMG 20230530 WA0013

Karnataka:ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆವಹಿಸಿ…!

ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆವಹಿಸಿ: ಅಧಿಕಾರಿಗಳಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸೂಚನೆ ಬೆಂಗಳೂರು, ಮೇ.30: ಮುಂಗಾರು ಹಂಗಾಮು ಆರಂಭವಾಗುತ್ತಿದ್ದು ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆವಹಿಸಿ ಎಂದು ಕೃಷಿ ಸಚಿವ ಚಲವರಾಯಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಕೃಷಿ ಇಲಾಖೆ ಜವಾಬ್ದಾರಿವಹಿಸಿಕೊಂಡ ಬಳಿಕ ಇಂದು ವಿಧಾನಸೌಧದಲ್ಲಿ ಮೊದಲ ಬಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಪರಿಚಯಾತ್ಮಕ ಹಾಗೂ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಈ ವೇಳೆ ಇಲಾಖೆಯ ಯೋಜನೆಗಳು, ಬಿತ್ತನೆ ಬೀಜ, […]

Continue Reading
IMG 20230527 WA0066

Karnataka: ಸಿದ್ದರಾಮಯ್ಯ ಸಂಪುಟದ 34 ಸಚಿವರ ಖಾತೆ ಗಳ ಅಧಿಕೃತ ಪ್ರಕಟ….!

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ 34 ಸಚಿವರ ಖಾತೆ ಗಳಳು ಅಧಿಕೃತ ವಾಗಿ ಪ್ರಕಟವಾಗಿವೆ ಬೆಂಗಳೂರು, ಮೇ 29 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟಕ್ಕೆ ಇದೇ ಶನಿವಾರ 24 ನೂತನ ಸಚಿವರು ಸೇರ್ಪಡೆಯಾಗಿದ್ದರು. ಇದರೊಂದಿಗೆ 34 ಸಚಿವರ ಪೂರ್ಣ ಪ್ರಮಾಣದ ಕ್ಯಾಬಿನೆಟ್ ಅಸ್ತಿತ್ವಕ್ಕೆ ಬಂದಿತ್ತು. ನೂತನ ಸರ್ಕಾರದ  34 ಸಚಿವ ರ ಸಂಪುಟ ದ ಖಾತೆ ಗಳ ಹಂಚಿಕೆ ಗೆ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ರಿಂದ ಅಧೀಕೃತ ಆದೇಶ ಹೊರಬಿದ್ದಿದೆ. ಸಚಿವರ ವಿವರ ಹೆಚ್ ಕೆ ಪಾಟೀಲ್, […]

Continue Reading
IMG 20230527 WA0065

Karnataka: ಸಿದ್ದು ಸಂಪುಟವಿಗ ಹಿರಿಯರ-ಕಿರಿಯರ ಸಮ್ಮಿಶ್ರಣ….!

ಪೂರ್ಣ ಪ್ರಮಾಣದ ಸಂಪುಟ ವಿಸ್ತರಣೆ , ಸಿದ್ದು ಸಂಪುಟವಿಗ ಹಿರಿಯರ-ಕಿರಿಯರ ಸಮ್ಮಿಶ್ರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟಕ್ಕೆ 24 ನೂತನ ಸಚಿವರ ಸೇರ್ಪಡೆ ಬೆಂಗಳೂರು, ಮೇ 28 (ಕರ್ನಾಟಕ ವಾರ್ತೆ):ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟಕ್ಕೆ 24 ನೂತನ ಸಚಿವರು ಸೇರ್ಪಡೆಯಾಗುವುದರೊಂದಿಗೆ   ನೂತನ ಸರ್ಕಾರದ  ಪೂರ್ಣ ಪ್ರಮಾಣದ ಸಚಿವ ಸಂಪುಟ ಇಂದು ರಚನೆಯಾಯಿತು   ರಾಜಭವನದ ಗಾಜಿನ ಮನೆಯಲ್ಲಿ ಇಂದು ಬೆಳಗ್ಗೆ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯ ವಿಧಾನ ಸಭೆಯ […]

Continue Reading
images 22

Karnataka: ಸಚಿವ ಸಂಪುಟ ವಿಸ್ತರಣೆ ಯ ನೇರಪ್ರಸಾರ – Live

ಬೆಂಗಳೂರು, ಮೇ. 27: ಕರ್ನಾಟಕ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಯಾಗುತ್ತಿದ್ದು 24 ಸಚಿವರು ಇಂದು ಬೆಳಗ್ಗೆ 11.45ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸರ್ಕಾರದ ಮನವಿಯಂತೆ ಪ್ರಮಾಣವಚನ ಕಾರ್ಯಕ್ರಮಕ್ಕೆ ರಾಜ್ಯಪಾಲರು ಪ್ರತಿಜ್ಞಾ ವಿಧಿಯನ್ನು ಬೋದಿಸಲಿದ್ದಾರೆ. ನೇರಪ್ರಸಾರ……

Continue Reading
IMG 20230525 WA0052

JD(S) : ಸುಳ್ಳು ಗ್ಯಾರಂಟಿಗಳ ವಿರುದ್ಧ ಹೋರಾಟ….!

ಜೆಡಿಎಸ್ ಆತ್ಮಾವಲೋಕನ ಸಭೆ: ಪಕ್ಷದ ಸಂಘಟನೆ ಬಲಪಡಿಸಲು ಹೆಚ್.ಡಿ.ಕುಮಾರಸ್ವಾಮಿ ಸಂಕಲ್ಪ ಲೋಕಸಭೆ ಚುನಾವಣೆ ಫಲಿತಾಂಶದ ಮೇಲೆ ಕಾಂಗ್ರೆಸ್ ಸರಕಾರದ ಭವಿಷ್ಯ ನಿಂತಿದೆ ಎಂದ ಮಾಜಿ ಸಿಎಂ ಸುಳ್ಳು ಗ್ಯಾರಂಟಿಗಳ ವಿರುದ್ಧ ಹೋರಾಟ; ಮುಖಂಡರಿಗೆ ರಣವೀಳ್ಯ ನೀಡಿದ ಕುಮಾರಸ್ವಾಮಿ ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯ ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಬಹಳ ನೊಂದು ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲಿಷ್ಟಗೊಳಿಸಲು ರಾಜಿ ಇಲ್ಲದೆ ಕೆಲಸ ಮಾಡುವೆ ಎಂದು ಘೋಷಣೆ ಮಾಡಿದರು. ಬೆಂಗಳೂರಿನಲ್ಲಿ ಗುರುವಾರ ವಿಧಾನಸಭೆ […]

Continue Reading
IMG 20230525 WA0006

Karnataka :ವಿಧಾನಸಭಾ ಸಭಾಧ್ಯಕ್ಷರಾಗಿ ಯು.ಟಿ.ಖಾದರ್ ಫರೀದ್ ಅವಿರೋಧವಾಗಿ ಆಯ್ಕೆ…!

ವಿಧಾನಸಭಾ ಸಭಾಧ್ಯಕ್ಷರಾಗಿ ಯು.ಟಿ.ಖಾದರ್ ಫರೀದ್ ಅವಿರೋಧವಾಗಿ ಆಯ್ಕೆ ಬೆಂಗಳೂರು : ಇಂದು ನಡೆದ 16 ನೇ ವಿಧಾನಸಭೆ ಅಧಿವೇಶನದಲ್ಲಿ ಸಭಾಧ್ಯಕ್ಷರ ಸ್ಥಾನಕ್ಕೆ ಯು.ಟಿ. ಖಾದರ್ ಫರೀದ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಮಾನ್ಯ ಮುಖ್ಯಮಂತ್ರಿಗಳ ಸೂಚನೆಯನ್ನು ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಅನುಮೋದಿಸಿದರು. ಯು.ಟಿ.ಖಾದರ್ ಫರೀಧ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿರುವುದನ್ನು ಹಂಗಾಮಿ ಸಭಾಧ್ಯಕ್ಷರಾದ ಆರ್. ವಿ. ದೇಶಪಾಂಡೆ ಅವರು ಅಂಗೀಕರಿಸಿದರು. ಎಲ್ಲಾ ಸದಸ್ಯರಿಗೂ ಧನ್ಯವಾದ ಸಲ್ಲಿಸಿದ ನೂತನ ಸಭಾಧ್ಯಕ್ಷ […]

Continue Reading
kvp2

ಸಂವಿಧಾನ ಉಳಿಸಲು, ಜನಪರ ಬದಲಾವಣೆ ತರಲು ಪತ್ರಿಕೋದ್ಯಮದಿಂದ ಸಾಧ್ಯ:ಕೆವಿಪಿ

ಸಂವಿಧಾನ ಉಳಿಸಲು, ಜನಪರ ಬದಲಾವಣೆ ತರಲು ಪತ್ರಿಕೋದ್ಯಮದಿಂದ ಸಾಧ್ಯ:ಕೆವಿಪಿ ಬೆಂಗಳೂರು: ಸಂವಿಧಾನವನ್ನು ಉಳಿಸಲು ಪತ್ರಿಕೋದ್ಯಮ ಸಹಾ ಮಹತ್ವದ ದಾರಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರು ಅಭಿಪ್ರಾಯಪಟ್ಟರು.  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ) ಬೆಂಗಳೂರಿನಲ್ಲಿ ಇಂದು ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕೆಯುಡಬ್ಲ್ಯೂಜೆ ಗೌರವ ಸ್ವೀಕರಿಸಿ ಅವರು ಮಾತನಾಡಿದರು.  ಪತ್ರಿಕೋದ್ಯಮ ನನ್ನ ಉಸಿರು. ಪತ್ರಿಕೋದ್ಯಮ ಅನೇಕ ಮೌಲ್ಯಗಳನ್ನು ಕಲಿಸಿದೆ. ಸಮಾಜದಲ್ಲಿ ಜನಪರ ಬದಲಾವಣೆ ತರುವಲ್ಲಿ ಪತ್ರಿಕೋದ್ಯಮದ ಪಾತ್ರ ಮುಖ್ಯವಾದದ್ದು.  ಹಾಗಾಗಿ ನನಗೆ ಪತ್ರಿಕೋದ್ಯಮದ ಘನತೆಯ ಬಗ್ಗೆ […]

Continue Reading
IMG 20230525 WA0005

ವಿಧಾನ ಸಭೆ: ನಿಮ್ಮ ತಕ್ಕಡಿ ಸಮನಾಗಿರಲಿ….!

ನಿಮ್ಮ ತಕ್ಕಡಿ ಸಮವಾಗಿರಲಿ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಗೆ‌ ಶುಭಾಶಯ ಕೋರಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ‌ ಬೆಂಗಳೂರು: ವಿಧಾನಸಭೆಯ ಸಭಾಧ್ಯಕ್ಷರಾಗಿ ಯು ಟಿ ಖಾದರ ಅವಿರೋಧವಾಗಿ ಆಯ್ಕೆ ಆಗಿರುವುದಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಶುಭ ಕೋರಿ, ನಿಮ್ಮ ತಕ್ಕಡಿ ಸಮವಾಗಿ ಇರಲಿ ಎಂದು ಹೇಳಿದರು. ಇಂದು ವಿಧಾನಸಭೆಯಲ್ಲಿ ಅವರು ಮಾತನಾಡಿದರು. ಕರ್ನಾಟಕದ ವಿಧಾನ ಮಂಡಲ ತನ್ನದೇ ಆದ ಘನತೆ ಹೊಂದಿದೆ. ಇಂತಹ ಮಹತ್ವದ ಸದನದ ಸಭಾಧ್ಯಕ್ಷರಾಗಿ ನೀವು […]

Continue Reading