IMG 20251216 WA0085

ಬೆಳಗಾವಿ : 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ….!

*1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ* – *ಗೃಹ ಸಚಿವ ಡಾ.ಜಿ.ಪರಮೇಶ್ವರ* *ಬೆಳಗಾವಿ ಸುವರ್ಣಸೌಧ ಡಿ.16(ಕ.ವಾ.):* ಗೃಹ ಇಲಾಖೆಯಿಂದ 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಮಂಗಳವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶಿವಮೊಗ್ಗ ಶಾಸಕ ಚನ್ನಬಸಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು. ಈ ಹಿಂದಿನ […]

Continue Reading
IMG 20251216 WA0084

ಬೆಳಗಾವಿ : ಮುಂದಿನ ಬಜೆಟ್ ಒಳಗಾಗಿ ರಾಜ್ಯದ ಎಲ್ಲಾ ಕೆರೆಗಳ ಒತ್ತುವರಿ ತೆರವುಗೊಳಿಸುವ ಗುರಿ….!

*ಮುಂದಿನ ಬಜೆಟ್ ಒಳಗಾಗಿ ರಾಜ್ಯದ ಎಲ್ಲಾ ಕೆರೆಗಳ ಒತ್ತುವರಿ ತೆರವುಗೊಳಿಸುವ ಗುರಿ: ಸಚಿವ ಎನ್.ಎಸ್. ಭೋಸರಾಜು* – ಕೆರೆ ಬಳಕೆದಾರರ ಸಂಘಗಳ ಪದಾಧಿಕಾರಿಗಳಿಗೆ ನಿರ್ವಹಣಾ ಕಾರ್ಯಾಗಾರ ಉದ್ಘಾಟನೆ – ರಾಜ್ಯದ 41,849 ಜಲಮೂಲಗಳ ಪೈಕಿ ಕೇವಲ 6,500 ಕೆರೆಗಳ ಒತ್ತುವರಿ ತೆರವು ಬಾಕಿ – ಕೆರೆಗಳಲ್ಲಿ ಮೀನುಗಾರಿಕೆ ಹರಾಜು ಮೂಲಕ ಸಂಪನ್ಮೂಲ ಕ್ರೋಢೀಕರಣಕ್ಕೆ ಚಿಂತನೆ *ಬೆಳಗಾವಿ, ಡಿಸೆಂಬರ್ 16:* ರಾಜ್ಯದಲ್ಲಿರುವ ಜಲಮೂಲಗಳ ಸಂರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಮುಂದಿನ ಆಯವ್ಯಯ (ಬಜೆಟ್) ಮಂಡನೆಯ ಒಳಗಾಗಿ ರಾಜ್ಯದ ಎಲ್ಲಾ ಕೆರೆಗಳ […]

Continue Reading
ವಿಧಾನ ಸಭೆಯ ಕಾರ್ಯಕಲಾಪದ ಛಾಯಾಚಿತ್ರಗಳು 10

ಬೆಳಗಾವಿ : ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಉಭಯ ಸದನಗಳಲ್ಲಿ ಸಂತಾಪ ಸೂಚನೆ

ಶಾಮನೂರು ಶಿವಶಂಕರಪ್ಪ ನಿಧನಕ್ಕೆ ವಿಧಾನ ಸಭೆಯಲ್ಲಿ ಸಂತಾಪ ಸೂಚನೆ: ಅಜಾತ ಶತ್ರು ಹಾಗೂ ಸ್ನೇಹಜೀವಿಯ ಒಡನಾಟ ನೆನೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ / ಬೆಂಗಳೂರು, ಡಿಸೆಂಬರ್ 15 (ಕರ್ನಾಟಕ ವಾರ್ತೆ): ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ ಅವರು ಅಜಾತಶತ್ರು ಎನಿಸಿದ್ದರು. ದಾವಣಗೆರೆ ಜಿಲ್ಲೆಯನ್ನು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಪಡಿಸಲು ಶಿವಶಂಕರಪ್ಪನವರ ಕೊಡುಗೆ ಅಪಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿಂದು ವಿಧಾನ ಸಭೆ […]

Continue Reading
IMG 20251214 WA0063

Karnataka : ಜಿಬಿಎ ಚುನಾವಣೆ; ನಾಳೆಯಿಂದ 369 ವಾರ್ಡ್ ಗಳ ಆಕಾಂಕ್ಷಿಗಳ ಅರ್ಜಿ ಸ್ವೀಕಾರ….!

*ಜಿಬಿಎ ಚುನಾವಣೆ; ನಾಳೆಯಿಂದ 369 ವಾರ್ಡ್ ಗಳ ಆಕಾಂಕ್ಷಿಗಳ ಅರ್ಜಿ ಸ್ವೀಕಾರ: ಡಿಸಿಎಂ ಡಿ.ಕೆ. ಶಿವಕುಮಾರ್* *ಕಟ್ಟಡ ನಿಧಿಗಾಗಿ ಸಾಮಾನ್ಯ ವರ್ಗಕ್ಕೆ 50 ಸಾವಿರ, ಮಹಿಳೆಯರು ಹಾಗೂ ಪರಿಶಿಷ್ಟ ಸಮುದಾಯದ ಅಭ್ಯರ್ಥಿಗಳಿಂದ 25 ಸಾವಿರ ಠೇವಣಿ ಸಂಗ್ರಹ* *ಜನರ ಉತ್ಸಾಹ ಮುಂದಿನ ಚುನಾವಣೆಗಳಿಗೆ ನಾಂದಿ* *ಮತ ಕಳ್ಳತನ ವಿರುದ್ಧದ ಹೋರಾಟ ಮುಂದುವರಿಕೆ* *ನನ್ನನ್ನು ನೋಡಿದರೆ ನಮ್ಮ ನಾಯಕರು ಕುಶಲೋಪರಿ ವಿಚಾರಿಸುತ್ತಾರೆ* *ಬೆಂಗಳೂರು, ಡಿ.14:*ನಾಳೆಯಿಂದ ಜಿಬಿಎ ಚುನಾವಣೆಗೆ ಅರ್ಜಿ ಸ್ವೀಕಾರ ಮಾಡಲಾಗುವುದು. ಮೀಸಲಾತಿ ಇನ್ನು ಅಂತಿಮವಾಗಿಲ್ಲವಾದರೂ 369 ವಾರ್ಡ್ […]

Continue Reading
20251214 215054

ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ….!

ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ ಬೆಂಗಳೂರು : ಕಾಂಗ್ರೆಸ್ ನ  ಹಿರಿಯ ಶಾಸಕ , ಮಾಜಿ ಸಚಿವರು ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಆದ  ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಸಂಜೆ ವಿಧಿವಶರಾಗಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ 94 ವರ್ಷದ ಶಾಮನೂರು ಶಿವಶಂಕರಪ್ಪ (Shamanuru Shivashankarappa) ನಿಧನರಾಗಿದ್ದಾರೆ.ಅವರು ಆರು […]

Continue Reading
IMG 20251213 WA0026 scaled

ಬೆಳಗಾವಿ : ಎಲ್ಲ ಪಕ್ಷದವರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ ಅಜಾತಶತ್ರು….!

*ಎಲ್ಲ ಪಕ್ಷದವರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ ಅಜಾತಶತ್ರು* *ನನ್ನ ಮತ್ತು ಬಸವರಾಜ ಹೊರಟ್ಟಿಯವರ ಸ್ನೇಹ ನಾಲ್ಕು ದಶಕಗಳದ್ದು- ಮುಖ್ಯಮಂತ್ರಿ ಸಿದ್ದರಾಮಯ್ಯ* ಹೊರಟ್ಟಿ ಹ್ಯಾಂಡಸಮ್ ಟೀಚರ್ ಆ್ಯಂಡ್ ಇಂಟಲಿಜೆಂಟ್ ಪೊಲಿಟಿಷಿಯನ್: ಬಸವರಾಜ ಬೊಮ್ಮಾಯಿ* *ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ಬಸವರಾಜ ಬೊಮ್ಮಾಯಿ* ಬೆಳಗಾವಿ, ಡಿಸೆಂಬರ್ 12: ಎಲ್ಲ ಪಕ್ಷದವರೊಂದಿಗೂ ಉತ್ತಮ ಬಾಂಧವ್ಯ ಹೊಂದಿರುವ ಬಸವರಾಜ ಹೊರಟ್ಟಿಯವರೊಂದಿಗೆ ನಾಲ್ಕು ದಶಕಗಳ ಸ್ನೇಹ ಸಂಬಂಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸನ್ಮಾನ್ಯ ಶ್ರೀ ಬಸವರಾಜ ಹೊರಟ್ಟಿ ಅಭಿನಂದನಾ ಸಮಿತಿ […]

Continue Reading
IMG 20251213 WA0008

Bengaluru : 2ನೇ ವಿಮಾನ ನಿಲ್ದಾಣ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ…..!

*2ನೇ ವಿಮಾನ ನಿಲ್ದಾಣ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ- ಎಂ ಬಿ ಪಾಟೀಲ* ಬೆಂಗಳೂರು: ರಾಜಧಾನಿಯ ಸಮೀಪ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಸ್ಥಳದ ಅನುಕೂಲ ಮತ್ತು ತಾಂತ್ರಿಕ ಹಾಗೂ ಆರ್ಥಿಕ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಪರಿಣತ ಸಲಹಾ ಸಂಸ್ಥೆಯ ಆಯ್ಕೆಗಾಗಿ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮವು (ಕೆಎಸ್ಐಐಡಿಸಿ) ಟೆಂಡರ್ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು 2026ರ ಜನವರಿ 12 ಕೊನೆಯ ದಿನವಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ […]

Continue Reading
IMG 20251213 WA0002

BJP : ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ…!

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ?: ವಿಜಯೇಂದ್ರ ಶಿವಮೊಗ್ಗ: ಮುಖ್ಯಮಂತ್ರಿ ಕುರ್ಚಿಗೆ ಪೈಪೋಟಿ ನಡೆಯುತ್ತಿದ್ದು, ಸದ್ಯದಲ್ಲಿ ಈ ಸಮಸ್ಯೆ ಬಗೆಹರಿಯುವುದಿಲ್ಲ. ಯಾವ ಪುರುಷಾರ್ಥಕ್ಕೆ ಅಧಿವೇಶನ ಮಾಡುತ್ತೀರಿ? ಸಾಧ್ಯವಾದರೆ ಇದನ್ನು ಮುಂದೂಡಿ ಎಂದು ತಿಳಿಸಿದ್ದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಹೇಳಿದ್ದಾರೆ. ಅವರು ಇಂದು ಇಲ್ಲಿ ಮಾಧ್ಯಮಗೋಷ್ಠಿಯಲ್ಲಿÀ ಮಾತನಾಡಿದರು. ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ನಾಡಿನ ಕೃಷಿಕರು, ರೈತರ, ಬಡವರ, ನೇಕಾರರ ಸಮಸ್ಯೆ ಸೇರಿ […]

Continue Reading

ಬೆಳಗಾವಿ : ಗ್ರಂಥಾಲಯ, ಮಾಹಿತಿ ಕೇಂದ್ರದ ಮೇಲ್ವಿಚಾರಕರಿಗೆ ನಿಗದಿತ ಸಮಯಕ್ಕೆ ವೇತನ…..!

ಗ್ರಾಮ ಪಂಚಾಯಿತಿಗಳ ಗ್ರಂಥಾಲಯ, ಮಾಹಿತಿ ಕೇಂದ್ರದ ಮೇಲ್ವಿಚಾರಕರಿಗೆ ನಿಗದಿತ ಸಮಯಕ್ಕೆ ವೇತನ ಪಾವತಿಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಬೆಳಗಾವಿ / ಬೆಂಗಳೂರು,  ಡಿಸೆಂಬರ್ 12,  (ಕರ್ನಾಟಕ ವಾರ್ತೆ) : ರಾಜ್ಯದ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ಮೇಲ್ವಿಚಾರಕರಿಗೆ ನಿಗದಿತ ಸಮಯಕ್ಕೆ ವೇತನ ಪಾವತಿಸಲು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕಳೆದ ನವೆಂಬರ್ ಮಾಹೆಯಲ್ಲಿ ನಿರ್ದೇಶನ ನೀಡಲಾಗಿದೆ. ಅದರಂತೆ ವೇತನ ಪಾವತಿಸಲು ಕ್ರಮವಹಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ […]

Continue Reading
IMG 20251210 WA0032

Belagavi: ಸೂರ್ಯನಗರ 1 ನೇ ಹಂತದ ಬಡಾವಣೆ ಪುರಸಭೆಗಳಿಗೆ ಹಸ್ತಾoತರ..!

*ಸೂರ್ಯನಗರ 1 ನೇ ಹಂತದ ಬಡಾವಣೆಯ ಸ್ವತ್ತುಗಳಿಗೆ ಇ-ಖಾತಾ ಮಾಡಿಕೊಡುವಲ್ಲಿ ಗೃಹ ಮಂಡಳಿ ಯಿಂದ ನಿರ್ಲಕ್ಷ ವಾಗಿಲ್ಲ: ಸಚಿವ ಜಮೀರ್ ಅಹಮದ್ ಖಾನ್* ಬೆಳಗಾವಿ, ಸುವರ್ಣ ವಿಧಾನಸೌಧ ಕ.ವಾ. (ಡಿ.10): ಸೂರ್ಯನಗರ 1ನೇ ಹಂತ ವಸತಿ ಬಡಾವಣೆಯನ್ನು ಚಂದಾಪುರ ಮತ್ತು ಬೊಮ್ಮಸಂದ್ರ ಪುರಸಭೆಗಳಿಗೆ ಹಸ್ತಾoತರಿಸಲು ಕ್ರಮ ಕೈಗೊಳ್ಳಲಾಗಿದ್ದು, ಸದರಿ ಪುರಸಭೆಗಳು ಹಸ್ತಾಂತರ ಮಾಡಿಕೊಂಡು ಬಡಾವಣೆಯ ಸ್ವತ್ತುಗಳಿಗೆ ಇ-ಖಾತಾವನ್ನು ಮಾಡಿಕೊಡಲು ಕ್ರಮ ವಹಿಸಬೇಕಾಗಿದೆ. ಈ ವಿಷಯದಲ್ಲಿ ಗೃಹ ಮಂಡಳಿಯಿಂದ ನಿರ್ಲಕ್ಷ ವಾಗಿಲ್ಲ ಎಂದು ವಸತಿ, ವಕ್ಫ್ ಮತ್ತು ಅಲ್ಪ […]

Continue Reading