IMG 20241121 WA0000

ನವದೆಹಲಿ : ರಾಜ್ಯದ ರೈತರಿಗೆ ಅನ್ಯಾಯ…..!

*ರಾಜ್ಯಕ್ಕೆ ನಬಾರ್ಡ್ ನೀಡುವ ಸಾಲದಲ್ಲಿ ಇಳಿಕೆ: ರಾಜ್ಯದ ರೈತರಿಗೆ ಮಾಡುತ್ತಿರುವ ಅನ್ಯಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ* *ಕೇಂದ್ರ ಹಣಕಾಸು ಸಚಿವರು ಅಸಹಾಯಕತೆ ವ್ಯಕ್ತಪಡಿಸಿದರೆ ಹೇಗೆ? ಸಿಎಂ ಪ್ರಶ್ನೆ* ನವದೆಹಲಿ, ನವೆಂಬರ್ 21: ನಬಾರ್ಡ್ ನೀಡುವ ಸಾಲದ ಮೊತ್ತದಲ್ಲಿ ಅರ್ಧದಷ್ಟು ಕಡಿತಗೊಳಿಸಿರುವುದರಿಂದ ನಾವು ವಾಣಿಜ್ಯ ಬ್ಯಾಂಕುಗಳಿಗೆ ಹೋಗಬೇಕಾಗುತ್ತದೆ. ವಾಣಿಜ್ಯ ಬ್ಯಾಂಕುಗಳಲ್ಲಿ 10 ರಿಂದ 12 % ಬಡ್ಡಿ ಹಾಕುತ್ತಾರೆ. ಇದು ರೈತರಿಗೆ ಮಾಡುತ್ತಿರುವ ಅನ್ಯಾಯವಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಈ ಬಗ್ಗೆ […]

Continue Reading
IMG 20241116 WA0012

ಬೆಂಗಳೂರು : ಸ್ವಾತಂತ್ರ್ಯ ಕಾಪಾಡುವ ಹೊಣೆಗಾರಿಕೆ ಮಾಧ್ಯಮಗಳದ್ದು….!

*ಸಾಮಾನ್ಯ ಮನುಷ್ಯನ ಅಸಹಾಯಕತೆ ನೀಗಿಸಲು ಪತ್ರಿಕೆಗಳು ಅತಿ ಅಗತ್ಯ *ಸ್ವಾತಂತ್ರ್ಯ ಕಾಪಾಡುವ ಹೊಣೆಗಾರಿಕೆ ಮಾಧ್ಯಮಗಳದ್ದು: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ* ಬೆಂಗಳೂರು, ನವೆಂಬರ್‌ 16- ಮಾಧ್ಯಮಗಳನ್ನು ನಾಶಪಡಿಸಲು ಸಾಧ್ಯವಾಗದು. ಅಂತೆಯೇ ಸಂವಿಧಾನದತ್ತವಾಗಿ ದೊರೆತಿರುವ ಸ್ವಾತಂತ್ರ್ಯವನ್ನು ಕಾಪಾಡುವ ಹೊಣೆಗಾರಿಕೆ ಮಾಧ್ಯಮಗಳದ್ದು ಎಂದು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಅವರು ಅಭಿಪ್ರಾಯಪಟ್ಟರು. ಅವರು ಇಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ “ಬದಲಾಗುತ್ತಿರುವ ಪತ್ರಿಕಾ […]

Continue Reading
IMG 20241106 WA0047 scaled

ಮೈಸೂರು : ಲೋಕಾಯುಕ್ತ ವಿಚಾರಣೆ- ಸುಳ್ಳು ಆರೋಪಕ್ಕೆ ಸತ್ಯವನ್ನು ತಿಳಿಸಿದ್ದೇನೆ ….!

*ಬಿಜೆಪಿಯವರು ಯಾವುದೇ ಪ್ರಕರಣವನ್ನು ಇದುವರೆಗೆ ಸಿಬಿಐ ಗೆ ನೀಡಿಲ್ಲ* *ಲೋಕಾಯುಕ್ತ ವಿಚಾರಣೆ- ಸುಳ್ಳು ಆರೋಪಕ್ಕೆ ಸತ್ಯವನ್ನು ತಿಳಿಸಿದ್ದೇನೆ -ಮುಖ್ಯಮಂತ್ರಿ ಸಿದ್ದರಾಮಯ್ಯ* ಮೈಸೂರು, ನವೆಂಬರ್ 06: ಮುಡಾಕ್ಕೆ ಸಂಬಂಧಿಸಿದಂತೆ ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದ್ದು, ಲೋಕಾಯುಕ್ತ ವಿಚಾರಣೆಯಲ್ಲಿ ಸತ್ಯವನ್ನು ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿಗಳು ಲೋಕಾಯುಕ್ತ ವಿಚಾರಣೆಯನ್ನು ಎದುರಿಸಿದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಲೋಕಾಯುಕ್ತ ವಿಚಾರಣೆಗೆ ಇಂದು ಹಾಜರಾಗಿದ್ದು, ಅವರ ಪ್ರಶ್ನೆಗಳಿಗೆ […]

Continue Reading
IMG 20241106 WA0045

ಚನ್ಬಪಟ್ಟಣ :ಅಭಿವೃದ್ಧಿಗಾಗಿ ನಾನು, ಕುಮಾರಸ್ವಾಮಿ ಶಕ್ತಿ ಮೀರಿ ಕೆಲಸ ಮಾಡಿದ್ದೇವ….!

*ನಿಖಿಲ್ ಪರವಾಗಿ ಕೇಂದ್ರ ಸಚಿವ HD ಕುಮಾರಸ್ವಾಮಿ, ಮಾಜಿ ಸಿಎಂ ಯಡಿಯೂರಪ್ಪ ಬಿರುಸಿನ ಪ್ರಚಾರ* *ಅಭಿವೃದ್ಧಿಗಾಗಿ ನಾನು, ಕುಮಾರಸ್ವಾಮಿ ಶಕ್ತಿ ಮೀರಿ ಕೆಲಸ ಮಾಡಿದ್ದೇವೆ ಎಂದ ಬಿಎಸ್ ವೈ* *ವರಿಷ್ಠ ನಾಯಕರ ಪ್ರಚಾರಕ್ಕೆ ಜನತೆಯಿಂದ ಅತ್ಯುತ್ತಮ ಸ್ಪಂದನೆ* ಚನ್ನಪಟ್ಟಣ/ರಾಮನಗರ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಮತ್ತು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರುಗಳು ಕ್ಷೇತ್ರದ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಬಿರುಸಿನ ಪ್ರಚಾರ ನಡೆಸಿದರು. ಕ್ಷೇತ್ರದ ಅಂಬಾಡಹಳ್ಳಿ ಮತ್ತು ಸೋಗಾಲ ಗ್ರಾಮಗಳಲ್ಲಿ ಜಂಟಿ ಪ್ರಚಾರ ನಡೆಸಿದ […]

Continue Reading
images 39

Karnataka : ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ….!

*ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ* *ಕೇಂದ್ರ ಸರ್ಕಾರ ಎರಡು, ರಾಜ್ಯ ಸರ್ಕಾರದಿಂದ ದಿಂದ ನಾಲ್ಕು ಖರೀದಿ ಏಜನ್ಸಿ ನೇಮಕ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ* ಬೆಂಗಳೂರು, ಅಕ್ಟೋಬರ್ 25 (ಕರ್ನಾಟಕ ವಾರ್ತೆ):- ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಅನುಮತಿ ನೀಡಬೇಕು ಎಂಬ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಪ್ರತಿ ಕ್ವಿಂಟಾಲ್ ಗೆ 6,783 ರೂ. ನಿಗದಿಪಡಿಸಿದ್ದು, ಬೆಂಬಲ ಬೆಲೆಯ […]

Continue Reading
IMG 20241024 WA0051

ಲೋಕಾಯುಕ್ತ : ಭ್ರಷ್ಟಾಚಾರದಿಂದ ದೇಶದ ಅಭಿವೃದ್ಧಿ ಕುಂಠಿತ….!

*ಭ್ರಷ್ಟಾಚಾರದಿಂದ ದೇಶದ ಅಭಿವೃದ್ಧಿ ಕುಂಠಿತ: ಉಪ ಲೋಕಾಯುಕ್ತ ಫಣೀಂದ್ರ* ಬೆಂಗಳೂರು ನಗರ ಜಿಲ್ಲೆ, ಅಕ್ಟೋಬರ್  24 (ಕರ್ನಾಟಕ ವಾರ್ತೆ ) ಭ್ರಷ್ಟಾಚಾರದಿಂದ ದೇಶದ ಅಭಿವೃದ್ಧಿ ಕುಂಠಿತಗೊಳ್ಳುತ್ತದೆ. ಸರ್ಕಾರಿ ನೌಕರರು ಭ್ರಷ್ಟಾಚಾರ ತೊರೆದು ಪ್ರಾಮಾಣಿಕ ಹಾದಿಯಲ್ಲಿ ನಡೆದು, ತಮ್ಮ ಕರ್ತವ್ಯದಲ್ಲಿ ಸತ್ಯ, ನಿಷ್ಠೆ ಹಾಗೂ ಸಮಗ್ರತೆಯನ್ನು ಪ್ರದರ್ಶಿಸಿ ದೇಶದ ಅಭಿವೃದ್ಧಿಗೆ ಪೂರಕವಾಗಬೇಕು, ಎಂದು ಗೌರವಾನ್ವಿತ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ರವರು ಕರೆಕೊಟ್ಟರು. ಯಲಹಂಕ ಉಪ ನಗರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಇಂದು ನಡೆದ ಕರ್ನಾಟಕ ಲೋಕಾಯುಕ್ತ ಕಚೇರಿಯಿಂದ ಹಮ್ಮಿಕೊಳ್ಳಲಾಗಿದ್ದ […]

Continue Reading
IMG 20240829 WA0024

BJP : ಯೋಗೇಶ್ವರ್ ಎಲ್ಲ ಪಕ್ಷಗಳಲ್ಲೂ ವಿಶೇಷ ಸಂಪರ್ಕ…!

ಕಾರ್ಯಕರ್ತರ ಪಡೆ ಬಿಜೆಪಿ ಜೊತೆಗಿದೆ; ಪಕ್ಷ ಬಲಪಡಿಸಲು ಕ್ರಮ ಯೋಗೇಶ್ವರ್ ಎಲ್ಲ ಪಕ್ಷಗಳಲ್ಲೂ ವಿಶೇಷ ಸಂಪರ್ಕ: ವಿಜಯೇಂದ್ರ ಬೆಂಗಳೂರು: ಯೋಗೇಶ್ವರ್ ಎಲ್ಲ ಪಕ್ಷಗಳಲ್ಲೂ ವಿಶೇಷ ಸಂಪರ್ಕ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಇವತ್ತಿನ ಬೆಳವಣಿಗೆಗಳು ಅನಿರೀಕ್ಷಿತವೇನಲ್ಲ; ಎಲ್ಲವೂ ಕೂಡ ನಿರೀಕ್ಷಿತವೇ ಎಂದ ಅವರು, ಕಾಂಗ್ರೆಸ್ಸಿನಲ್ಲೂ ಅವರಿಗೆ ನಿಕಟ ಸಂಪರ್ಕ ಇತ್ತು. ಹಾಗಾಗಿ ಒಂದು ರಾಜಕೀಯ ನಿರ್ಧಾರವನ್ನು ಅಂತಿಮವಾಗಿ ತೆಗೆದುಕೊಂಡಿದ್ದಾರೆ. ಯೋಗೇಶ್ವರ್‍ಗ್ ಒಳ್ಳೆಯದಾಗಲಿ ಎಂದು […]

Continue Reading
IMG 20241023 WA0083 scaled

Karnataka :ರಾಜ್ಯದಾದ್ಯಂತ ವರ್ಷವಿಡೀ “ಗಾಂಧೀ ಭಾರತ” ಕಾರ್ಯಕ್ರಮ…..!

*ಮಹಾತ್ಮಾ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ನೂರು ವರ್ಷ* *ರಾಜ್ಯದಾದ್ಯಂತ ವರ್ಷವಿಡೀ “ಗಾಂಧೀ ಭಾರತ” ಕಾರ್ಯಕ್ರಮ* *ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ * – ಸಚಿವ ಎಚ್.ಕೆ. ಪಾಟೀಲ* ಬೆಂಗಳೂರು ಅಕ್ಟೋಬರ್ 23 (ಕರ್ನಾಟಕ ವಾರ್ತೆ): 1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೇಸ್ ಅಧಿವೇಶನದ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ವಿಶೇಷ ಕಾರ್ಯಕ್ರಮವನ್ನು ಮುಖ್ಯಮಂತ್ರಿಯವರು 2024-25ನೇ ಸಾಲಿನ ಬಜೆಟ್‍ನಲ್ಲಿ ಘೋಷಿಸಿದ್ದಾರೆ. “ಗಾಂಧೀ ಭಾರತ” ಹೆಸರಿನಲ್ಲಿ ವರ್ಷವಿಡೀ ರಾಜ್ಯದಾದ್ಯಂತ […]

Continue Reading
WhatsApp Image 2024 10 23 at 2.37.31 PM 1

ಬಿಜೆಪಿ – ಜೆಡಿಎಸ್ ಪಕ್ಷ ಮೈತ್ರಿ : ನನ್ನ ರಾಜಕೀಯ ಬೆಳವಣಿಗೆಗೆ ಪೂರಕವಾಗಿಲ್ಲ…..!

ನನ್ನ ರಾಜಕೀಯ ಜೀವನವನ್ನು ನಾವು ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಆರಂಭಿಸಿದ್ದೆ. ಕಾಂಗ್ರೆಸ್ ಪಕ್ಷ ಬಿಟ್ಟಿದ್ದೆ. ಈಗ ಮತ್ತೆ ಬಂದಿದ್ದೇನೆ. ನನ್ನ ಮುಂದಿನ ರಾಜಕೀಯ ಭಾಗ ಕಾಂಗ್ರೆಸ್ ನಲ್ಲಿ ಮುಂದುವರಿಯಲಿದೆ. ಕಳೆದ ಮೂರ್ನಾಲ್ಕು ತಿಂಗಳಲ್ಲಿ ನಡೆದಿರುವ ರಾಜಕೀಯ ಬೆಳವಣಿಗೆಯಲ್ಲಿ ಬೇಸರವಾಗಿದೆ. ಕೆಲವೊಮ್ಮೆ ನಮಗಾಗಿ ನಾವು ಕಟ್ಟಿದ ಮನೆಯಲ್ಲಿ ನಾವು ವಾಸ ಮಾಡಲು ಆಗುವುದಿಲ್ಲ. ಅದೇ ಸಂದರ್ಭ ನನಗೆ ಬಂದಿದೆ. ನಾನಿದ್ದ ಬಿಜೆಪಿ ಜತೆಗೆ ಜೆಡಿಎಸ್ ಪಕ್ಷ ಸೇರಿಕೊಂಡ ನಂತರ ಎನ್ಡಿಎ ಮೈತ್ರಿಕೂಟದಲ್ಲಿ ಇದ್ದ ವಾತಾವರಣ […]

Continue Reading
WhatsApp Image 2024 10 23 at 12.18.23 PM scaled

Karnataka : ಕಮಲಕ್ಕೆ ʻ ಕೈʼ ಕೊಟ್ಟ ಸೈನಿಕ….!

ಸೋಲಿನ ಭೀತಿಗೆ ಕ್ಷೇತ್ರ ಬಿಟ್ಟುಕೊಡಲು ಮುಂದಾಗಿದ್ದ ಕುಮಾರಸ್ವಾಮಿ ನಾಳೆ (ಗುರುವಾರ) ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ಸಿ.ಪಿ.ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ: ಡಿ.ಕೆ.ಶಿವಕುಮಾರ್ ಬೆಂಗಳೂರು, ಅ.23: “ಸಿ.ಪಿ.ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ. ಈ ಕಾರಣಕ್ಕೆ ಯಾವುದೇ ಷರತ್ತುಗಳನ್ನು ವಿಧಿಸದೆ ಮತ್ತೊಮ್ಮೆ ಮರಳಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಸಿಎಂ ಮಾತನಾಡಿದರು. “ಕಾಂಗ್ರೆಸ್ ಪಕ್ಷದಿಂದಲೇ […]

Continue Reading