d69da8e7 2443 47e6 add6 377c484fca26

ನಿತ್ಯೋತ್ಸವ ಕವಿ ಅಂತಿಮ ನಮನ ಸಲ್ಲಿಸಿದ -ಡಿಕೆಶಿ

Genaral STATE

ಬೆಂಗಳೂರು ಮೇ ೩ : ನಿತ್ಯೋತ್ಸವ ಕವಿ ಎಂದೇ ಖ್ಯಾತರಾಗಿರುವ ಕೆ.ಎಸ್. ನಿಸಾರ್ ಅಹಮದ್ ಅವರ ನಿಧನಕ್ಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ

ಪದ್ಮನಾಭನಗರದ ಕೆ ಎಸ್. ನಿಸಾರ್ ಅಹಮದ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದರು ಡಿಕೆಶಿ

799115e3 f35d 4de4 8bce 04453dcb07b1
ಅಂತಿಮ ನಮನ ಸಲ್ಲಿಸಿದ ಡಿಕೆಶಿ

ನಿಸಾರ್ ಅಹಮದ್ ಅವರು ಕನ್ನಡ ಸಾರಸ್ವತ ಲೋಕದ ದಿಗ್ಗಜ. ನಮ್ಮ ನಾಡನ್ನು ನಿತ್ಯೋತ್ಸವ ಗೀತೆ ಮೂಲಕ ಅದ್ಭುತವಾಗಿ ವರ್ಣಿಸಿ ನಿತ್ಯೋತ್ಸವ ಕವಿ ಎಂದು ಖ್ಯಾತಿ ಪಡೆದವರು. ಅವರ ಅಗಲಿಕೆ ಸುದ್ದಿ ಬೇಸರ ತಂದಿದೆ.

ನಿಸಾರ್ ಅಹಮದ್ ಅವರು ಕನ್ನಡ ಸಾಹಿತ್ಯ ಲೋಕಕ್ಕೆ ಕೊಟ್ಟ ಕೊಡುಗೆ ಅಪಾರ. ಮನಸು ಗಾಂಧಿಬಜಾರು, ನಿತ್ಯೋತ್ಸವ ಸೇರಿದಂತೆ ಒಟ್ಟು 21 ಕವನ ಸಂಕಲನಗಳು, 14 ವೈಚಾರಿಕ ಕೃತಿಗಳು, 5 ಮಕ್ಕಳ ಸಾಹಿತ್ಯ, 5 ಅನುವಾದ ಕೃತಿಗಳು, 13 ಸಂಪಾದನಾ ಗ್ರಂಥಗಳನ್ನು ನೀಡುವ ಮೂಲಕ , ಬೆಣ್ಣೆ ಕದ್ದ ನಮ್ಮ ಕೃಷ್ಣದಂತಹ ಕವನದ ಮೂಲಕ ಅಕ್ಷರ ಲೋಕಕ್ಕೆ ತಮ್ಮದೇ ಆದ ಸೇವೆ ಸಲ್ಲಿಸಿದ್ದಾರೆ ಎಂದರು