ಬೆಂಗಳೂರು, ಮೇ 4- ವಲಸೆ ಕಾರ್ಮಿಕರಿಗೆ ಪ್ರಕಟಿಸಿರುವ ಉಚಿತ ಬಸ್ ಪ್ರಯಾಣ ಸೌಲಭ್ಯ ಸುಗಮವಾಗಿ ನಡೆಯುತ್ತಿದ್ದು ಅದನ್ನು ಇನ್ನು 02 ದಿನಗಳ ಕಾಲ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಮಂಗಳವಾರ ಈ ಸೌಲಭ್ಯ ಕೊನೆಗೊಳುವದಿತ್ತು; ಆದರೆ ಕಾರ್ಮಿಕರ ಮತ್ತು ಜನರ ಅನುಕೂಲಕ್ಕಾಗಿ ಉಚಿತ ಸೌಲಭ್ಯವನ್ನು ಗುರುವಾರದವರೆಗೆ ವಿಸ್ತರಿಸಲಾಗಿದೆ. ಕಾರ್ಮಿಕರು ಮತ್ತು ಇತರೆ ಜನರು ಬಸ್ ನಿಲ್ದಾಣಗಳಲ್ಲಿ ಜಮಾವಣೆಯಾಗದೆ ನೆಮ್ಮದಿಯಿಂದ ತಮ್ಮ ಊರುಗಳಿಗೆ ತೆರಳಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.
ಬೆಂಗಳೂರು ನಗರದಿಂದ 800 ಬಸ್ಸುಗಳು ಹಾಗೂ ರಾಜ್ಯದ ಇತರೆ ಭಾಗಗಳಿಂದ 200 ಬಸ್ಸುಗಳನ್ನು ಒಟ್ಟಾರೆ 1000 ಬಸ್ಸುಗಳನ್ನು ಕಾರ್ಯಚರಣೆ ಮಾಡಲಾಗಿದ್ದು, 30000 ಕಾರ್ಮಿಕರನ್ನು ಇಂದು ಒಂದೇ ದಿನ ಕಳಹಿಸಿ ಕೊಡಲಾಗಿದ್ದರೆ..ಕಳೆದ ಮೂರು ದಿನಗಳಿಂದ ಒಟ್ಟು 59880 ಕಾರ್ಮಿಕರನ್ನು ಅವರ ಊರುಗಳಿಗೆ ಕೂಹಿಸಲಾಗಿದೆ ಎಂದಿದೆ ಕೆ ಎಸ್ ಆರ್ ಟಿಸಿ