ಬೆಂಗಳೂರು ಮೇ ೫: – ಕೋವೀಡ್ ೧೯ ಸೋಂಕು ನಿಂದ ಮುಂದೂಡಲ್ಲಟ್ಟಿದ್ದ ಎಸ್ ಎಸ ಎಲ್ ಸಿ ಪರೀಕ್ಷೆಯ ವೇಳಾ ಪಟ್ಟಿಯನ್ನು ಜೂನ್ ಎರಡನೆ ಅಥೌಾ ಮೂರನೆ ವಾರ ಪ್ರಕಟವಾಗಲಿದೆ, ಇದೇ ಮೊದಲಬಾರಿಗೆ ವಿದ್ಯಾರ್ಥಿಗಳು ಎಲ್ಲಿ ಪರೀಕ್ಷೆ ಬರೆಯಲು ಬಯಸುತ್ತಾರೊ ಅದೇ ಕೇಂದ್ರದಲ್ಲಿ ಪರೀಕ್ಷ ಬರೆಯಲು ಶಿಕ್ಷಣ ಇಲಾಖೆ ಅವಕಾಶ ನೀಡಲಿದೆ.
ತಮ್ಮ ಅಧಿಕೃತ ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಎಸ್ ಎಸ ಎಲ್ ಸಿ ಪರೀಕ್ಷೆಯಲ್ಲಿ ಯಾವುದೇ ತೊಂದರೆಯಾಗದಂತೆ ಪರೀಕ್ಷಾವೇಳಾ ಪಟ್ಟಿಯನ್ನು ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ.ಪರೀಕ್ಷಾ ಕೇಂದ್ರಗಳಿಗೆ ಬರುವ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಸ್ಯಾನಿಟೈಸರ್ ಹಾಗೂ ಉಷ್ಣಾಂಶ ಪರೀಕ್ಷೆ ಕಡ್ಡಾಯ ಮಾಡಿಸಿ ಕೊಳ್ಳಬೇಕೆಂದು ತಿಳಿಸಿದರು.
ಜೂನ್ ತಂಗಳಿನಲ್ಲಿ ಲಾಕ್ ಡೌನ್ ಇನ್ನಷ್ಟು ಸಡಲಿಕೆಯಾಗುವ ಸಂಭವವಿದೆ. ೧೦ ರಿಂದ ೧೫ ದಿನ ಮುಂಚಿತವಾಗಿ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಸ್ಪಷ್ಟಪಡಿಸಿದರು.