ನವದೆಹಲಿ ಮೇ ೧೦ :- ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಾಳೆ ರಾಜ್ಯದ ಎಲ್ಲಾ ಮುಖ್ಯಮಂತ್ರಿಗಳೊಂದಿಗೆ ಐದನೇ ಬಾರಿಗೆ ವಿಡಿಯೋ ಕಾನ್ಫರೆನ್ಸ ಮೂಲಕ ಸಭೆ ನಡೆಸಲಿದ್ದಾರೆ.
ದೇಶಾದ್ಯಾಂತ ಜಾರಿಯಲ್ಲಿರು ೩ ನೇ ಹಂತದ ಲಾಕ್ ಡೌನ್ ಮೇ ೧೭ ಕ್ಕೆ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ನಾಳೆ ಸೋಮವಾರ ಮಧ್ಯಾಹ್ನ ೩ ಗಂಟೆಗೆ ನಡೆಯುವ ಸಭೆ ಹೆಚ್ಚು ಮಹತ್ವ ಪಡೆದಿದೆ. ದೇಶದಲ್ಲಿ ಕೊರೋನಾ ಕೇಸ್ ಗಳು ಹೆಚ್ಚಾಗುತ್ತಿರುವುದು,ಆರ್ಥಿಕ ಪರಿಸ್ಥಿತಿ ಸುಧಾರಣೆ ಮತ್ತು ಕೊರೋನಾ ನಿಯಂತ್ರಣಕ್ಕಾಗಿ ೪ ನೇ ಬಾರಿಗೆ ಲಾಕ್ ಡೌನ್ ಮುಂದುವರಿಸುವ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ. ಈ ಸಭೆಯಲ್ಲಿ ವ್ಯಕ್ತವಾಗುವ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಅಭಿಪ್ರಾಯದೊಂದಿಗೆ ಕೇಂದ್ರ ಮುಂದಿನ ತೀರ್ಮಾನ ಕೈಗೊಳ್ಳಲಿದೆ.