ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಲಾಭವೊ, ನಷ್ಟವಾಗಲಿದೆಯೊ ಎಂಬ ಚರ್ಚೆ ಆರಂಭವಾಗಿದೆ, ಸರ್ಕಾರ ರೈತರಿಗೆ ಇದರಿಂದ ಅನುಕೂಲವಾಗಲಿದೆ ಎಂದರೆ, ವಿರೋಧ ಪಕ್ಷಗಳು, ರೈತ ಸಂಘಟನೆಗಳು ಖಾಸಗಿ ಮತ್ತು ಬಹುರಾಷ್ಟೀಯ ಕಂಪನಿಗಳ ಮಾರಕಟ್ಟೆ ಪ್ರವೇಶವಾಗಿ ಮುಂದೆ ರೈತ ಸಂಕಷ್ಟಕ್ಕೆ ಒಳಗಾಗುತ್ತಾನೆ ಎನ್ನುತ್ತಿವೆ.
ಬೆಂಗಳೂರು ಮೇ ೧೫ ;- ಎಪಿಎಂಸಿ ಮಸೂದೆಗೆ ತಿದ್ದುಪಡಿ ತಂದಿರುವುದರಿಂದ ರೈತರಿಗೆ ಅನುಕೂಲವಾಗಲಿದೆ. ಪ್ರಧಾನಿ ಮೋದಿ ಯವರು ರೈತರ ಆದಾಯ ೨೦೨೦ ಕ್ಕೆ ದ್ವಿಗುಣ ಆಗಬೇಕು ಎಂಬ ಆಶಯ ನೆರವೇರಲು ಸಹಕಾರಿ ಯಾಗಲಿದೆ. ಈ ಕಾಯ್ದೆಗೆ ತಿದ್ದುಪಡಿ ತರಲಾಗಿರುವ ಉದ್ದೇಶವನ್ನು ವಿರೋಧಪಕ್ಷದ ನಾಯಕರು, ರೈತ ಮುಖಂಡರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿ ವಿವರಿಸಿದ್ದೇನೆ. ರೈತರು ತಾವು ಬೆಳೆದ ಬೆಳೆಯನ್ನು ಯಾರಿಗೆ ಬೇಕಾದರು ಮಾರಲು ಅವಕಾಶ ನೀಡಲಿದೆ ಇದರಿಂದ ರೈತರಿಗೆ ಉತ್ತಮ ಬೆಲೆ ಸಿಗಲಿದೆ ಎಂದು ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ತರಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸುದ್ದಿಗೋಷ್ಟಿಯಲ್ಲಿ ಇಂದು ತಿಳಿಸಿದರು.
ಎಪಿಎಂಸಿ ಕಾಯ್ದೆ ತಿದ್ದುಪಡಿ ಪ್ರಮುಖ ಅಂಶಗಳು
1. ಎಪಿಎಂಸಿ ತಿದ್ದುಪಡಿ ಕಾಯ್ದೆಯ ಅನುಷ್ಠಾನದಿಂದ “ರೈತರೇ ಮೊದಲು” ಎಂಬ ಘೋಷವಾಕ್ಯದ ಅನುಷ್ಠಾನ ಸಾಧ್ಯವಾಗುತ್ತದೆ.
2. ರೈತರು ತಮ್ಮ ಉತ್ಪನ್ನಗಳನ್ನು ಮಾರುಕಟ್ಟೆ ಪ್ರಾಂಗಣದಲ್ಲಿ ಅಥವಾ ನೇರವಾಗಿ ಮಾರಾಟ ಮಾಡುವ ಅವಕಾಶ ಹೊಂದಿರುತ್ತಾರೆ.
3. ಇದರಿಂದ ರೈತರಿಗೆ ತಮ್ಮ ಉತ್ಪನ್ನಗಳಿಗೆ ಯೋಗ್ಯ ಧಾರಣೆ ದೊರೆಯುವ ಅವಕಾಶ ಕಲ್ಪಿಸಿದಂತಾಗುತ್ತದೆ.
4. ಈ ಕಾಯ್ದೆಯಿಂದ ಪಿಎಂಸಿ ಕಮಿಟಿಗಳ ಅಸ್ತಿತ್ವಕ್ಕೆ ಯಾವುದೇ ಆಗುವುದಿಲ್ಲ. ಅವು ಹಿಂದಿನಂತೆ ಮುಂದುವರೆಯುತ್ತವೆ.
5. ಮಾರುಕಟ್ಟೆ ಪ್ರಾಂಗಣದ ಹೊರಗೆ ಅಧಿಸೂಚಿತ ಕೃಷಿ ಉತ್ಪನ್ನಗಳ ವಹಿವಾಟು ನಡೆಸಲು ಮತ್ತು ಮೇಲ್ವಿಚಾರಣೆಯನ್ನು ಕೃಷಿ ಮಾರಾಟ ನಿರ್ದೇಶಕರು ಮಾಡುತ್ತಾರೆ.
6. ಈ ತಿದ್ದುಪಡಿ ಕಾಯ್ದೆಯಿಂದ ಎಪಿಎಂಸಿ ಕಮಿಟಿಗಳನ್ನು ಮಾರುಕಟ್ಟೆ ಪ್ರಾಂಗಣಕ್ಕೆ ಸೀಮಿತಗೊಳಿಸಿ ರೈತರು ಉತ್ತಮ ಧಾರಣೆ ಪಡೆಯಲು ಅವಕಾಶ ಒದಗಿಸಿ ಆ ಮೂಲಕ ರೈತರ ಬೆಳೆಗಳಿಗೆ ಸ್ಪರ್ಧಾತ್ಮಕ ಮಾರುಕಟ್ಟೆ ಒದಗಿಸಿ ರೈತರ ಹಿತ ಕಾಯಲು ಅವಕಾಶ ನೀಡುತ್ತದೆ.
7. ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರಿಗಾಗಲಿ, ಕೇಂದ್ರ ಸರ್ಕಾರಕ್ಕಾಗಲಿ ರೈತರ ಹಿತಾಸಕ್ತಿ ಸಂರಕ್ಷಣೆಯೇ ಮುಖ್ಯ.
8. 2022ರ ವೇಳೆಗೆ ರೈತರ ಆದಾಯ ದ್ವಿಗುಣ ಮಾಡಬೇಕು. ರೈತರಿಗೆ ನೆರವಾಗಬೇಕು ಎನ್ನುವುದಕ್ಕಾಗಿಯೇ ಅನೇಕ ಕಾರ್ಯಕ್ರಮಗಳನ್ನು ಮತ್ತು ಸುಧಾರಣೆಗಳನ್ನು ಜಾರಿಗೆ ತರಲಾಗುತ್ತಿದೆ.
9. ಈಗಲೂ ಎಪಿಎಂಸಿ ಕಾಯ್ದೆಯನ್ನೇನೂ ನಾವು ತೆಗೆದು ಹಾಕಿಲ್ಲ. ಕೇವಲ ಕಾಯ್ದೆಯ ಎರಡು ಸೆಕ್ಷನ್ ಗಳಿಗೆ ತಿದ್ದುಪಡಿ ಮಾಡಿದ್ದೇವೆ.
10. ಈ ಸುಧಾರಣೆಯ ಉದ್ದೇಶ- ನಮ್ಮ ರೈತರಿಗೆ ಮಾರುಕಟ್ಟೆಯ ಹೆಚ್ಚಿನ ಆಯ್ಕೆಗಳು ಲಭಿಸಲಿವೆ. ನಮ್ಮ ರೈತರು ಎಪಿಎಂಸಿ ಯಾಗಲೀ ಅಥವಾ ಇತರೇ ವರ್ತಕರ ಅಧೀನಕ್ಕೆ ಒಳಪಡುವುದಿಲ್ಲ. ತಮ್ಮಿಷ್ಟದಂತೆ ಯಾರಿಗೆ ಬೇಕಾದರೂ ಉತ್ಪನ್ನ ಮಾರಾಟ ಮಾಡಬಹುದು.
11. ಬೆಂಬಲ ಬೆಲೆಗೆ ಕಡಿಮೆ ದರದಲ್ಲಿ ಖರೀದಿ ಮಾಡುವ, ಎಷ್ಟೋ ಉದಾಹರಣೆಗಳು ನಮ್ಮ ಕಣ್ಣಮುಂದೆಯೇ ಇದೆ. ಈ ಶೋಷಣೆಯನ್ನು ಇನ್ನು ಮುಂದೆ ತಪ್ಪಿಸಬಹುದು.
12. ಇನ್ನು ಮುಂದೆ ಎಪಿಎಂಸಿಯಲ್ಲಿ ವ್ಯವಹಾರ ಮಾಡುವ ವರ್ತಕರು ರೈತರನ್ನು ಶೋಷಣೆ ಮಾಡುವುದು ತಪ್ಪುತ್ತದೆ.
13. ಖಾಸಗಿಯವರೂ ಎಪಿಎಂಸಿ ಹೊರಗಡೆ ವ್ಯವಹಾರ ಮಾಡುವಾಗಲೂ ಕೂಡ ಷರತ್ತನ್ನು ಪಾಲಿಸಬೇಕಾಗುತ್ತದೆ. ಸರ್ಕಾರದ ಅನುಮತಿ ಪಡೆಯಬೇಕಾಗಿದೆ. ಇದೆಲ್ಲವೂ ನಮ್ಮ ರೈತರ ಹಿತರಕ್ಷಣೆ, ಮಾರಾಟ ಸ್ವಾತಂತ್ರ್ಯ ನೀಡಲು ಸುಧಾರಣೆ ತರಲಾಗುತ್ತಿದೆ.
14. ಆದರೆ ಕೆಲವರು ಇದರ ವಿರುದ್ಧ ಅಪಪ್ರಚಾರ ಮಾಡಿ ನಮ್ಮ ರೈತರ ದಾರಿ ತಪ್ಪಿಸುವ ಕೆಲಸ ಮಾಡುತ್ತಾರೆ.
15. ರೈತರ ಹಿತಕ್ಕೆ ಧಕ್ಕೆ ಬರುವುದಾದರೆ, ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ನಾನು ಮುಖ್ಯಮಂತ್ರಿ ಸ್ಥಾನದಲ್ಲಿ ಒಂದು ಕ್ಷಣವೂ ಮುಂದುವರೆಯುವುದಿಲ್ಲ.
· 2007ರಲ್ಲಿ ಖಾಸಗಿ ಮಾರುಕಟ್ಟೆ ಈಗಾಗಲೇ ಪ್ರಾರಂಭವಾಗಿದೆ.
ರಿಲೈನ್ಸ್ , ಮೋರ್ ಅಂತಹ ಕಂಪನಿಗಳು ಭಾಗವಹಿಸುತ್ತಿದೆ .
· 2008 ರಿಂದಲೇ ಖಾಸಗಿ ಮಾರುಕಟ್ಟೆಗಳ ಅಸ್ತಿತ್ವಕ್ಕೆ ಬಂದಿದೆ. ಉದಾ: ಮೆಟ್ರೋ ಕ್ಯಾಷ್ ಆಂಡ್ ಕ್ಯಾರಿ ಪ್ರೈ ಲಿಮೆಟೆಡ್
200 7ರಲ್ಲಿ ಇ-ಟ್ರೇಡಿಂಗ್ ಪ್ರಾರಂಭವಾಗಿದ. 2013ರಲ್ಲಿ ಆನ್ ಲೈನ್ ಟ್ರೆಂಡಿಂಗ್ ನಡೆಯುತ್ತಿದೆ.
ಎಪಿಎಂಸಿ ಮಸೂದೆ ತಿದ್ದುಪಡಿ ಗೆ ತೀವ್ರ ವಿರೋಧವಿದ್ದರು ಅದನ್ನು ಲೆಕ್ಕಿಸದೆ ಸರ್ಕಾರ ಜಾರಿಗೆ ಮುಂದಾಗಿದೆ,ತಿದ್ದುಪಡಿ ಯಿಂದ ಸರ್ಕಾರ ರೈತರಿಗೆ ಅನುಕೂಲವಾಗಲಿದೆ ಎನ್ನುತ್ತಿದೆ, ಪ್ರತಿಪಕ್ಷಗಳು, ರೈತ ಸಂಘಟನೆಗಳು ವಿರೋಧಿಸುತ್ತಿವೆ ಅಂತಿಮಾಗಿ ಯಾರಿಗೆ ಅನುಕೂಲ..? ಮತ್ತೆ ಯಾರಿಗೆ ಅನಾನುಕೂಲಕ್ಕೆ ಕಾಲವೇ ಉತ್ತರಿಸಬೇಕಿದೆ