ಬೆಂಗಳೂರು ಮೇ ೧೮ :- ಕೋವಿಡ್ ೧೯ ಲಾಕ್ ಡೌನ್ ನಿಂದ ಮುಂದೂಡಿದ್ದ ಎಸ್ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ವೇಳಾ ಪಟ್ಟಿಯನ್ನು ಇಂದು ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಟಿ ಪ್ರಕಟಿಸಿದರು. Sslc ಪರೀಕ್ಷೆ ಜೂನ್ ೨೫ ರಿಂದ ಜುಲೈ ೪ ರವರೆಗೆ ಮತ್ತು ದ್ವಿತೀಯ ಪಿಯುಸಿ ಯ ಬಾಕಿ ಉಳಿದಿರುವ ಇಂಗ್ಲೀಷ್ ಪರೀಕ್ಷೆಯನ್ನು ಜೂನ್ ೧೮ ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಎಸ್ಎಸ್ ಎಲ್ ಸಿ ಪರೀಕ್ಷೆ. ರಾಜ್ಯಾದ್ಯಂತ 2879 ಪರೀಕ್ಷಾ ಕೇಂದ್ರಗಳು. 43,720 ಕೊಠಡಿಗಳಲ್ಲಿ ನಡೆಸಲಾಗುವುದು,ಪ್ರತಿ ವಿದ್ಯಾರ್ಥಿ ಗೆ ಮಾಸ್ಕ್ ಕಡ್ಡಾಯ. ಸ್ಕೌಟ್ಸ್ ಮತ್ತು ಗೈಡ್ಸ್ ಸಿಬ್ಬಂದಿ ವತಿಯಿಂದ ಮಾಸ್ಕ್ ವಿತರಣೆಗೆ ವ್ಯವಸ್ಥೆ ಮಾಡಲಾಗಿದೆ ಎಂದರು
ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ನಡುವೆ ಸಾಮಾಜಿಕ ಅಂತರದ ವ್ಯವಸ್ಥೆ, ಪರೀಕ್ಷಾ ಕೊಠಡಿಗಳ ಸಂಪೂರ್ಣ ಸ್ಯಾನಿಟೈಸೇಷನ್ ವ್ಯವಸ್ಥೆ ಮಾಡಲಾಗುವುದು. ರಾಜ್ಯದಲ್ಲಿ ಎಂಟು ಲಕ್ಷದ ನಲವತ್ತೆಂಟು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಚಂದನ ವಾಹಿನಿ ಮೂಲಕ ಪುನರ್ ಮನನ ಕಾರ್ಯಕ್ರಮ ಮಾಡಲಾಗುತ್ತಿದ್ದು ಇದು ಈ ತಿಂಗಳ ಅಂತ್ಯದವರೆಗೆ ಮುಂದುವರೆಯಲಿದೆ ಎಂದು ತಿಳಿಸಿದರು
.