ರಾಜ್ಯ ಸರ್ಕಾರ ಅಪಾರ್ಟಮೆಂಟ್ ಗಳ ಮೊದಲ ನೋಂದಾಣಿ ಶುಲ್ಕವನ್ನು ಕಡಿಮೆ ಮಾಡಲು ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆ
ಬೆಂಗಳೂರು ಮೇ ೨೬ :- ಕೊರೋನಾ ಸಂಕಷ್ಟದಿಂದ ಉಂಟಾಗಿರುವ ಆರ್ಥಿಕ ಸಂಕಷ್ಟ ನಿವಾರಿಸಲು ನಿಟ್ಟಿನಲ್ಲಿ ನೊಂದಾಣಿ ಮುದ್ರಾಂಕ ಇಲಾಖೆಯಲ್ಲಿ ಸಂಪನ್ಮೂಲ ಸಂಗ್ರಹಕ್ಕೆ ಒತ್ತು ನೀಡಿರುವ ಸರ್ಕಾರ ಅಪಾರ್ಟಮೆಂಟ್ ಗಳ ಮೊದಲ ನೋಂದಾಣಿ ಶುಲ್ಕವನ್ನು ಕಡಿಮೆ ಮಾಡಲು ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಂದಾಯ ಮತ್ತು ಮುಜರಾಯಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು
ಕಂದಾಯ ಇಲಾಖೆ:
• ಅನುಭವ ಮಂಟಪ ಸ್ಥಾಪನೆಗೆ 100 ಕೋಟಿ ರೂ.ಗಳನ್ನು ಒದಗಿಸಲು ನಿರ್ಧರಿಸಲಾಯಿತು.
• ಭೂ ಸುಧಾರಣೆ: 164 ತಾಲ್ಲೂಕುಗಳಲ್ಲಿ ಭೂ ನ್ಯಾಯ ಮಂಡಳಿ ರಚಿಲು ಮುಖ್ಯಮಂತ್ರಿಗಳು ಸೂಚಿಸಿದರು.
• ಡ್ರೋನ್ ಆಧಾರಿತ ಸರ್ವೆ ಸಮಿತ್ವ ಯೋಜನೆಯಡಿ 16000 ಗ್ರಾಮಗಳನ್ನು ಗುರುತಿಸಲಾಗಿದೆ. ಗ್ರಾಮ ನಿವಾಸಿಗಳಿಗೆ ಅವರ ವಾಸಸ್ಥಳದ ಆಸ್ತಿಗಳಿಗೆ ಪ್ರಾಪರ್ಟಿ ಕಾರ್ಡ್ ವಿತರಿಸುವ ಯೋಜನೆ ಇದಾಗಿದೆ. ದೇಶದ 7 ರಾಜ್ಯಗಳ ಪೈಕಿ ಕರ್ನಾಟಕ ರಾಜ್ಯದಲ್ಲಿಯೂ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಯೋಜನೆಯ ಅನುಷ್ಠಾನವನ್ನು ತ್ವರಿತವಾಗಿ ಕಾರ್ಯಗತಗೊಳಿಸಲು ಮುಖ್ಯಮಂತ್ರಿಗಳು ಸೂಚಿಸಿದರು.
ನೋಂದಣಿ ಮತ್ತು ಮುದ್ರಾಂಕ ಇಲಾಖೆ:
• ಕೋವಿಡ್ 19 ಹಿನ್ನೆಲೆಯಲ್ಲಿ 2020-21 ನೇ ಸಾಲಿನಲ್ಲಿ 3524 ಕೋಟಿ ರೂ.ಗಳಷ್ಟು ಕಡಿಮೆ ರಾಜಸ್ವ ಸಂಗ್ರಹವಾಗಬಹುದೆಂದು ಅಂದಾಜಿಸಲಾಗಿದೆ.
• ಕೈಗೆಟಕುವ ದರಗಳ ಮನೆಗಳನ್ನು ಪ್ರೋತ್ಸಾಹಿಸಲು ರೂ.20 ಲಕ್ಷ ಮೌಲ್ಯದ ಅಪಾರ್ಟ್‍ಮೆಂಟ್‍ಗಳ ಮೊದಲ ನೊಂದಣಿಗೆ ಮುದ್ರಾಂಕ ಶುಲ್ಕವನ್ನು ಶೇ 5 ರಿಂದ 2 ಕ್ಕೆ ಇಳಿಸಲು ಹಾಗೂ ರೂ.35 ಲಕ್ಷ ಮೌಲ್ಯದವರೆಗಿನ ನೊಂದಣಿಗೆ ಶೇ 5 ರಿಂದ ಶೇ. 3 ಕ್ಕೆ ಇಳಿಸಲು ಮುಖ್ಯಮಂತ್ರಿಗಳು ಸೂಚಿಸಿದರು.
ಕಂದಾಯ ಸಚಿವ ಆರ್.ಅಶೋಕ್, ಮೀನುಗಾರಿಕೆ, ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಎಸ್.ಆರ್.ವಿಶ್ವನಾಥ್, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು