ಬೆಂಗಳೂರು, ಮೇ 26: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಕೋವಿಡ್ ೧೯ ಹಿನ್ನೆಲೆಯಲ್ಲಿ ತರಗತಿಗಳ ಮೂಲಕ ಪಠ್ಯಕ್ರಮವನ್ನು ಪೂರ್ಣಗೊಳಿಸಿ, ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಯಾವುದೇ ಸಮಸ್ಯೆಯಾಗದಂತೆ ಎಚ್ಚರವಹಿಸಲು ಸಿಎಂ ಅಧಿಕಾರಿಗಳಿಗೆ ಸೂಚಿಸಿದರು
ಪ್ರಗತಿ ಪರಿಶೀಲನಾ ಸಭೆಯ ಪ್ರಮುಖಾಂಶಗಳು
ಉಪಮುಖ್ಯಮಂತ್ರಿಗಳು ಮತ್ತು ಉನ್ನತ ಶಿಕ್ಷಣ ಸಚಿವ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಅಪರ ಮುಖ್ಯ ಕಾರ್ಯದರ್ಶಿ ಡಾ: ಇ.ವಿ. ರಮಣರೆಡ್ಡಿ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಉಪಸ್ಥಿತರಿದ್ದರು.