coronavirus 2019

ದೊಡ್ಡಬಳ್ಳಾಪುರ: ಇಬ್ಬರಲ್ಲಿ ಕೊರೋನಾ ಸೋಂಕು ದೃಢ

DISTRICT NEWS ಬೆಂಗಳೂರು

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 27  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇಬ್ಬರಲ್ಲಿ ಇಂದು ಕೊರೋನಾ ವೈರಾಣು ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.

   ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹಳ್ಳಿ ತಾಂಡದ ಮೂಲ ನಿವಾಸಿಯಾದ 45 ವರ್ಷದ ವ್ಯಕ್ತಿ (P-2331), ಕಳೆದ ಐದು ವರ್ಷದಿಂದ ಮುಂಬೈನಲ್ಲಿ ನೆಲೆಸಿದ್ದು, (P-1606, P-1607, P-1608) ಸಂಪರ್ಕ ಹೊಂದಿದ್ದು, ಲಾಕ್ ಡೌನ್ ಸಡಿಲಿಕೆ ಹಿನ್ನೆಲೆ, ಗ್ರಾಮಕ್ಕೆ ಹಿಂದಿರುಗುವ ಮಾರ್ಗದ ವೇಳೆ ಆರೋಗ್ಯ ತಪಾಸಣೆ ನಡೆಸಿದಾಗ ಕೋವಿಡ್-19 ಸೋಂಕು ದೃಢಪಟ್ಟಿದೆ.

  ಮತ್ತೊಬ್ಬರು ದೊಡ್ಡಬಳ್ಳಾಪುರ ತಾಲ್ಲೂಕಿನ ಭಕ್ತರಹಳ್ಳಿ ನಿವಾಸಿಯಾದ 27 ವರ್ಷದ  ಪೊಲೀಸ್ ಪೇದೆ (P-2332), ಹಾಸನ ಜಿಲ್ಲೆಯ ಕಂಟೈನ್ಮೆಂಟ್ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಳೆ (P-1993)ರ ಸಂಪರ್ಕ ಹೊಂದಿದ್ದ ಹಿನ್ನೆಲೆ, ಆರೋಗ್ಯ ತಪಾಸಣೆ ನಡೆಸಿದಾಗ ಕೋವಿಡ್-19 ಸೋಂಕು ದೃಢಪಟ್ಟಿದೆ.

  ಇಬ್ಬರು ಕೊರೋನಾ ಸೋಂಕಿತರು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.