ಉಡುಪಿ: ಎಲ್ಲಾ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ,ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ. ರಾಜ್ಯದಲ್ಲಿ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ಪ್ರಕರಣ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರೋಪಿಗಳಿಗೆ ಜಾಮೀನು ಕೊಡಬಾರದೆಂಬ ವಿಚಾರ ಇದೆ. ಕೇಂದ್ರ ರಾಜ್ಯದ ಸುಗ್ರೀವಾಜ್ಞೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುತ್ತೇವೆ ಎಂದರು.
ಸದ್ಯ ಅಟ್ಯಾಕ್ ಮಾಡುವುದು, ನಿರ್ಬಂಧಕ್ಕೆ ಅಡಚಣೆ ಮಾಡಿದರು ಸಹಿಸಲ್ಲ, ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ. ಯಾರೇ ಎಷ್ಟೇ ದೊಡ್ಡವರಾದ್ರೂ ಕಠಿಣ ಕ್ರಮ ತೆಗದುಕೊಳ್ತೇವೆ, ಪ್ರಕರಣದಲ್ಲಿ ರಾಜಿಗೆ ಅವಕಾಶ ಇಲ್ಲ ಎಂದು ಉಡುಪಿಯಲ್ಲಿ ಗೃಹಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು.