ಕೊರೋನಾ ; ಲಾಕ್ ಡೌನ್ ನಿಂದ ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ದು,ಮೆಕ್ಕೆ ಜೋಳ, ಹೂವು ಬೆಳೆದ ರೈತರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪರಿಹಾರ ಘೋಷಿಸಿದ್ದರು, ಇಂದು ಮೆಕ್ಕೆ ಜೋಳ ಹಾಗೂ ಹೂವು ಬೆಳೆ ಗಾರರಿಗೆ ಪರಿಹಾರ ಮೊತ್ತ ಬಿಡುಗಡೆ ಮಾಡಿದರು.
ಬೆಂಗಳೂರು, ಜೂನ್ 02: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳ ಪ್ರಗತಿ ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ ಪರಿಹಾರ ಮೊತ್ತ ಬಿಡುಗಡೆ ಮಾಡಿದರು.
ಮೆಕ್ಕೆ ಜೋಳ, ಹೂವು ಬೆಳೆದ ರೈತರಿಗೆ ಪರಿಹಾರ ಬಿಡುಗಡೆ
ಮೆಕ್ಕೆ ಜೋಳ ಹಾಗೂ ಹೂವು ಬೆಳೆ ಗಾರರಿಗೆ 666 ಕೋಟಿ ರೂ.ಗಳ ಪರಿಹಾರ ಮೊತ್ತವನ್ನು ರೈತರ ಖಾತೆಗೆ ಆನ್ ಲೈನ್ ಮೂಲಕ ಬಿಡುಗಡೆ ಮಾಡಿ, ರೈತರಿಗೆ ಕರೆ ಮಾಡಿ ಹಣ ವರ್ಗಾವಣೆ ಆಗಿರುವುದನ್ನು ಖಾತ್ರಿಪಡಿಸಿಕೊಂಡರು
ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳ 100 ದಿನಗಳ ಪ್ರಗತಿಯ ವರದಿಯನ್ನು ಬಿಡುಗಡೆ ಮಾಡಿದರು.
ಕೃಷಿ ಸಚಿವ ಬಿ.ಸಿ.ಪಾಟೀಲ್, ತೋಟಗಾರಿಕೆ ಹಾಗೂ ರೇಷ್ಮೆ ಸಚಿವ ಕೆ.ನಾರಾಯಣ ಸ್ವಾಮಿ, ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಉಪಸ್ಥಿತರಿದ್ದರು.