78718489 a25f 4b49 8f5b c27b2e001006

ರಿಕ್ಷಾ ಟ್ಯಾಕ್ಸಿ ಚಾಲಕರ ಪರಿಹಾರ ಧನ ವಿತರಣೆಯಲ್ಲಿ ವಿಳಂಬವಾಗಬಾರದು : ಬಿ.ಎಸ್.ವೈ

STATE

ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ರಿಕ್ಷಾ ಟ್ಯಾಕ್ಸಿ ಚಾಲಕರ ಪರಿಹಾರ ಧನ ವಿತರಣೆಯಲ್ಲಿ ವಿಳಂಬವಾಗಬಾರದು ಎಂದು ತಿಳಿಸಿದ್ದಾರೆ.

ಬೆಂಗಳೂರು, ಜೂನ್ 03: ಆಟೋ ರಿಕ್ಷಾ ಮತ್ತು ಟ್ಯಾಕ್ಷಿ ವಾಹನ ಚಾಲಕರಿಗೆ 5,000 ರೂ.ಗಳ ಪರಿಹಾರ ಧನ ಒದಗಿಸಲು ಅಗತ್ಯವಿರುವ ಎಲ್ಲ  ಕ್ರಮ ವಹಿಸಬೇಕು ಹಾಗೂ  ಪರಿಹಾರ ಧನ ವಿತರಣೆಯಲ್ಲಿ ಯಾವುದೇ ವಿಳಂಬವಾಗಬಾರದು ಎಂದು  ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಅವರು ತಿಳಿಸಿದರು.

ಅವರು ಇಂದು ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿದ್ದರು.

9bca1482 b5db 4fbb 8792 4bd4472f5e38

ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಂದ ಪರಿಹಾರ ಧನಕ್ಕೆ ಈಗಾಗಲೇ ಒಟ್ಟು 198929 ಅರ್ಜಿಗಳು ಸ್ವೀಕೃತವಾಗಿದ್ದು,  ಈಗಾಗಲೇ ವಾಹನ ಚಾಲಕರ ಬ್ಯಾಂಕ್ ಖಾತೆಗೆ ಪರಿಹಾರ ಮೊತ್ತ ಜಮಾ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದರು.

ಕೋವಿಡ್ ಹಿನ್ನೆಲೆಯಲ್ಲಿ ಪ್ರಯಾಣಿಕರು ಸಾರಿಗೆ ಸಂಸ್ಥೆ ಬಸ್ಸುಗಳನ್ನು ಬಳಸಲು ಹಿಂಜರಿಯುತ್ತಿದ್ದು, ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಕರ ಸಂಖ್ಯೆಯನ್ನು ಹೆಚ್ಚಿಸಲು  ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಬೇಕು. ಸಾರಿಗೆ ಇಲಾಖೆಯ ವಾಹನಗಳನ್ನು ಸೂಕ್ತ ರೀತಿಯಲ್ಲಿ ಸ್ವಚ್ಛಗೊಳಿಸುವ ಕೆಲಸವೂ ಆಗಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. 

312206b5 063d 4060 9635 acf3a6ad49b7

ಮಹಾರಾಷ್ಟ್ರ ಬಿಟ್ಟು ಅಂತರ ರಾಜ್ಯ ಸಾರಿಗೆ ಸೇವೆಯನ್ನು  ಕಲ್ಪಿಸಲು ಇತರೆ ರಾಜ್ಯಗಳ ಸಾರಿಗೆ ಸಂಸ್ಥೆಗಳೊಂದಿಗೆ ಸಂಪರ್ಕಿಸಿ  ಬಸ್ಸುಗಳ ಸಂಚಾರ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.  ಸಾಮಾಜಿಕ ಅಂತರ ಕಾಪಾಡುವ ನಿರ್ದೇಶನ ಇರುವುದರಿಂದ ಬಸ್ಸುಗಳಲ್ಲಿ ಕಡಿಮೆ ಜನರನ್ನು ಹತ್ತಿಸಿಕೊಳ್ಳುವ ಬಗ್ಗೆ ಪರಿಣಿತರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲು ಅವರು ತಿಳಿಸಿದರು. 

ಕೋವಿಡ್ 19 ರ ಹಿನ್ನಲೆಯಲ್ಲಿ ನಾಲ್ಕು ನಿಗಮಗಳಲ್ಲಿ  ನಷ್ಟ ಉಂಟಾಗಿದ್ದು ಮುಂದಿನ ದಿನಗಳಲ್ಲಿ  ಪ್ರಯಾಣಿಕರ  ಓಡಾಟದಿಂದ ಪರಿಸ್ಥಿತಿ ಸುಧಾರಿಸಬಹುದೆಂಬ ನಿರೀಕ್ಷೆ ಇದೆ.  ಬೆಂಗಳೂರು ನಗರ ಪ್ರದೇಶದಿಂದ ರೈಲ್ವೆ ನಿಲ್ದಾಣಕ್ಕೆ ತಲುಪಿಸುವ ವ್ಯವಸ್ಥೆಗೆ ಹಾಗೂ ವಿಮಾನ ನಿಲ್ದಾಣದಿಂದ ನಗರದ ವಿವಿದ ಪ್ರದೇಶಗಳಿಗೆ  ಕಳುಹಿಸಲು ಬಿ.ಎಂ.ಟಿ.ಸಿ ಬಸ್ಸುಗಳನ್ನು  ಬಳಸಿಕೊಳ್ಳಲಾಗಿದೆ. ವಲಸೆ ಕಾರ್ಮಿಕರನ್ನು ಅವರ ಊರಿಗೆ ಕಳುಹಿಸಲು ಸಾರಿಗೆ ಬಸ್‍ಗಳನ್ನು ಕಳುಹಿಸುವ ವ್ಯವಸ್ಥೆ ಮಾಡಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸಾರಿಗೆ ಸಂಪದ ಬಿಡುಗಡೆ

ಕೊವಿಡ್ -19 ಎದುರಿಸುವಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ತೆಗೆದುಕೊಂಡ ತುರ್ತುಕ್ರಮಗಳ ಒಂದು ಸಂಕ್ಷಿಪ್ತ ಚಿತ್ರ ವರದಿಯನ್ನು , ಕೆ ಎಸ್ ಆರ್ ಟಿ ಸಿಯ ಆಂತರಿಕ‌ ನಿಯತಕಾಲಿಕ “ಸಾರಿಗೆ ಸಂಪದ” ವಿಶೇಷ ಸಂಚಿಕೆಯಲ್ಲಿ ದಾಖಲಿಸಿದ್ದು, ಸದರಿ ನಿಯತಕಾಲಿಕ ಮತ್ತು ಈ ಸಂಬಂಧ ತಯಾರಿಸಿರುವ ಸಾಕ್ಷ್ಯಚಿತ್ರ ಅನ್ನು ಮತ್ತು ಬಿಎಂಟಿ‌ಸಿ‌ಯ ಸಾಕ್ಷಚಿತ್ರವನ್ನು ಸನ್ಮಾನ್ಯ ಮುಖ್ಯಮಂತ್ರಿಗಳು ಇಂದು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಶ್ರೀ.ಲಕ್ಷ್ಮಣ ಸಂ.ಸವದಿ, ಮಾನ್ಯ ಉಪಮುಖ್ಯಮಂತ್ರಿಗಳು, ಸಾರಿಗೆ ಇಲಾಖೆ,
ಶ್ರೀ.ನಂದೀಶ್ ರೆಡ್ಡಿ ,ಮಾನ್ಯ ಅಧ್ಯಕ್ಷರು , ಬಿಎಂಟಿ‌ಸಿ‌, ಶ್ರೀ. ವಿ.ಎಸ್.ಪಾಟೀಲ್, ‌ಅಧ್ಯಕ್ಷರು,‌ವಾಕರಾಸಂಸ್ಥೆ ಉಪಸ್ಥಿತರಿದ್ದರು.

3bd47d3a 773d 45c7 856a e44f7b65025f