7f6622b1 228c 46db 8111 250d86da82e7

covid 19: ಗಂಭೀರ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ…!

DISTRICT NEWS

covid 19:  ಕೊರೋನಾ ಸೋಂಕಿತರ ಸಂಖ್ಯೆ ಪ್ರತಿದಿನ ಹೆಚ್ಚುತ್ತಲೆ ಇದೆ, ಇಂದು 308 ಸೋಂಕಿತ ಪ್ರಕರಣಗಳು ಪತ್ತೆ ಯಾಗುವುದರ ಮೂಲಕ ರಾಜ್ಯದಲ್ಲಿ 6824 ಸೋಂಕಿತ ಪ್ರಕರಣಗಳಾಗಿವೆ. ಇನ್ನು ಯಾದಗಿರಿಯಲ್ಲಿ ಮಾತನಾಡಿದ ಸಚಿವ ಸುಧಾಕರ್ : ಗಂಭೀರ  ಪರಿಸ್ಥಿತಿ ಎದುರಿಸಲು ಸಿದ್ಧರಾಗಿ ಎಂದಿದ್ದಾರೆ 

ಯಾದಗಿರಿ : ಕೊರೋನಾ ಹರಡುವಿಕೆ ಮುಂದಿನ ದಿನಗಳಲ್ಲಿ ಗಂಭೀರ ಸ್ವರೂಪ ಪಡೆಯಬಹುದು ಎಂದು ಭಾವಿಸಿ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಡಳಿತಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಕೋವಿಡ್ – 19 ಪರಿಶೀಲನಾ ಸಭೆಯಲ್ಲಿ ಶನಿವಾರ ಅವರು ಮಾತನಾಡಿದರು.
ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು. ಜ್ವರದ ಸೋಂಕು ಕಾಣಿಸಿಕೊಂಡ ಮತ್ತು ಬೇರೆ ಕಾಯಿಲೆಗಳಿಂದ ಬಳಲುತ್ತಿರುವ ಹಿರಿಯ ನಾಗರಿಕರ ಟೆಸ್ಟ್ ಮಾಡಬೇಕು ಮತ್ತು ಅವರ ಮೇಲೆ ನಿರಂತರ ನಿಗಾವಹಿಸಬೇಕು ಎಂದು ಸೂಚನೆ ನೀಡಿದರು.
ಇದು ಜಿಲ್ಲೆಗೆ ಮೊದಲ ಭೇಟಿ. ಯಾದಗಿರಿ ಮತ್ತು ಉಡುಪಿ ಹೆಚ್ಚು ಸೋಂಕಿತರು ಇದ್ದಾರೆ ಎಂದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. 735 ಸೋಂಕಿತರು ಜಿಲ್ಲೆಯಲ್ಲಿದ್ದಾರೆ. ಮೇ ವರೆಗೆ ಯಾವ ಪ್ರಕರಣ ಇರಲಿಲ್ಲ. ಮಹಾರಾಷ್ಟ್ರ ದಿಂದ ಬಂದವರಿಂದ ಸೋಂಕು ಹರಡಿದೆ ಎಂದರು.
ಜಿಲ್ಲಾಡಳಿತದ ಪರಿಶ್ರಮದಿಂದ ಗ್ರಾಮ ಮಟ್ಟದಲ್ಲಿ ಅರಿವು ಚೆನ್ನಾಗಿದೆ. ಹೀಗಾಗಿ ಆತಂಕದ ಸ್ಥಿತಿಇಲ್ಲ. ಯಾರಲ್ಲೂ ರೋಗದ ಲಕ್ಷಣ ಇಲ್ಲ. ಪ್ರಥಮ ಮತ್ತು ದ್ವೀತಿಯ ಸಂಪರ್ಕಿತರ ಮೇಲೂ ನಿಗಾ ಇರಿಸಲಾಗಿದೆ ಎಂದರು.

53bd7253 1a88 47a1 a4bd 75629de1e940         68eacdb7 2b49 4f6a b16a eec18d8db555
ಮುಖ್ಯ ವಾಗಿ ಒಂದು ವಾರದಲ್ಲಿ ಪ್ರಯೋಗಾಲಯ ಕಾರ್ಯಾಚರಣೆ ಮಾಡಲಿದೆ. ಮೆಡಿಕಲ್ ಕಾಲೇಜು ಆರಂಭಿಸಲು ಈಗಾಗಲೇ ಟೆಂಡರ್ ಪ್ರಕ್ರಿಯೆ ಆರಂಭಿಸಲಾಗಿದೆ. 435 ಕೋಟಿ ವೆಚ್ಚದ ಕಾಮಗಾರಿಗೆ ಕೆಲ ದಿನಗಳಲ್ಲಿ ಮುಖ್ಯಮಂತ್ರಿ ಅವರಿಂದ ಭೂಮಿ ಪೂಜೆ ಮಾಡಲಾಗುವುದು ಎಂದು ಪ್ರಕಟಿಸಿದರು.
ಆಸ್ಪತ್ರೆಗೆ ಬೇಕಾದ ಉಪಕರಣಗಳನ್ನು ಖರೀದಿಗೆ ಸೂಚಿಸಲಾಗಿದೆ. 150 ಬೋಧಕ ಸಿಬ್ಬಂದಿ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗುವುದು. ಚಿಕ್ಕಬಳ್ಳಾಪುರ ಮತ್ತು ಯಾದಗಿರಿಗಳಲ್ಲಿ 30 ತಿಂಗಳಿಗೆ ಮುಂಚಿತವಾಗಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.
ಎರಡು ಲಕ್ಷ ಕುಟುಂಬಗಳ ಸಮೀಕ್ಷೆ ನಡೆಸಿರುವುದು ಮೆಚ್ಚುಗೆ ಸಂಗತಿ. ಟಾಸ್ಕ್ ಫೋರ್ಸ್ ಸಮಿತಿಗಳ ಮೂಲಕ ಹಿರಿಯ ನಾಗರಿಕರು ಮತ್ತು ಇತರ ರೋಗಿಗಳಿರುವವರ ಮೇಲೆ ಸತತ ನಿಗಾವಹಿಸಲಾಗಿದೆ. ಜಿಲ್ಲಾಡಳಿತದ ಕಾರ್ಯ ವೈಖರಿ ನನ್ನ ಆತಂಕವನ್ನು ನಿವಾರಿಸಿದೆ. ಗ್ರಾಮ ಮಟ್ಟದಲ್ಲಿ ಜನರ ಸಹಕಾರ ಉತ್ತಮ ಮಟ್ಟದಲ್ಲಿ ಇರುವುದು ಶ್ಲಾಘನೀಯ ಎಂದರು.
ಇನ್ನೂ ಕೆಲ ಫೀವರ್ ಕ್ಲಿನಿಕ್ ತೆರೆಯಲು ಸೂಚಿಸಲಾಗಿದೆ. ಹೊರಗಿಂದ ಬಂದವರ ಮೇಲೆ ನಿಗಾ ವ್ಯವಸ್ಥೆ ಇದೇ ರೀತಿ ಮುಂದುವರಿದರೆ, ಕೊರೋನಾ ನಿಗ್ರಹ ಸಾಧ್ಯವಿದೆ. ಆದಷ್ಟು ಶೀಘ್ರ ಮೆಡಿಕಲ್ ಕಾಲೇಜು ಆಭಿಸಲಾಗುವುದು ಎಂದರು. ಶಾಸಕರಾದ ವೆಂಟರೆಡ್ಡಿ, ದರ್ಶನಾಪುರ್, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ ಮುಖ್ಯಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಸಭೆಯಲ್ಲಿ ಹಾಜರಿದ್ದರು.