DSC 7317 scaled

Tumkur : ನಾಳೆ ದ್ವಿತೀಯ ಪಿ.ಯು.ಸಿ. ಪರೀಕ್ಷೆ: 25,050 ವಿದ್ಯಾರ್ಥಿಗಳು ನೋಂದಣಿ

DISTRICT NEWS ತುಮಕೂರು

Tumkur : ಜೂನ್ 18 ರಂದು ನಡೆಯಲಿರುವ ದ್ವಿತೀಯ ಪಿಯುಸಿಯ ಇಂಗ್ಲೀಷ್ ವಿಷಯ ಪರೀಕ್ಷೆಗೆ 14078 ವಿದ್ಯಾರ್ಥಿನಿಯರು ಹಾಗೂ 10922 ವಿದ್ಯಾರ್ಥಿಗಳು ಸೇರಿದಂತೆ 25,050 ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಗಾಗಿ ಜಿಲ್ಲೆಯಲ್ಲಿ ಒಟ್ಟು 34 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪರೀಕ್ಷಾ ಕೇಂದ್ರದ ಕೊಠಡಿಗಳ ಸ್ಯಾನಿಟೈeóÉೀಷನ್ ಕಾರ್ಯ ಕೈಗೊಳ್ಳಲಾಗಿದೆ

ತುಮಕೂರು (ಕ.ವಾ.) ಜೂ.16: ಜಿಲ್ಲೆಯಲ್ಲಿ ಜೂನ್ 18 ರಂದು ನಡೆಯಲಿರುವ ದ್ವಿತೀಯ ಪಿಯುಸಿಯ ಇಂಗ್ಲೀಷ್ ವಿಷಯ ಪರೀಕ್ಷೆಗೆ 14078 ವಿದ್ಯಾರ್ಥಿನಿಯರು ಹಾಗೂ 10922 ವಿದ್ಯಾರ್ಥಿಗಳು ಸೇರಿದಂತೆ 25,050 ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ ಈ ಪೈಕಿ 23492 ಹೊಸ, 980 ಖಾಸಗಿ ಹಾಗೂ 578 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಲಲಿತಾ ಕುಮಾರಿ ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆಗಾಗಿ ಜಿಲ್ಲೆಯಲ್ಲಿ ಒಟ್ಟು 34 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪರೀಕ್ಷಾ ಕೇಂದ್ರದ ಕೊಠಡಿಗಳ ಸ್ಯಾನಿಟೈeóÉೀಷನ್ ಕಾರ್ಯ ಕೈಗೊಳ್ಳಲಾಗಿದೆ. ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕಾಗಿರುವುದರಿಂದ ಪ್ರತಿ ಪರೀಕ್ಷಾ ಕೊಠಡಿಗಳಲ್ಲಿ 12 ಹಾಗೂ ದೊಡ್ಡ ಕೊಠಡಿಗಳಾದಲ್ಲಿ 24 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು  ಹಂಚಿಕೆ ಮಾಡಲಾಗಿದೆ.

ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಪ್ರಸ್ತುತ ಬೇರೆ ಜಿಲ್ಲೆಯಲ್ಲಿ ವಾಸವಿರುವ 332 ವಿದ್ಯಾರ್ಥಿಗಳು ಆಯಾ ಜಿಲ್ಲೆಯಲ್ಲಿಯೇ ಪರೀಕ್ಷೆ ಬರೆಯಲಿದ್ದಾರೆ.  ಅದೇರೀತಿ ಬೇರೆ ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಪ್ರಸ್ತುತ ತುಮಕೂರು ಜಿಲ್ಲೆಯಲ್ಲಿ ವಾಸವಿರುವ 690 ವಿದ್ಯಾರ್ಥಿಗಳು ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವ್ಯಾಸಂಗ ಮಾಡಿ ಪ್ರಸ್ತುತ ಬೇರೆ ಬೇರೆ ರಾಜ್ಯಗಳಲ್ಲಿ ವಾಸವಿರುವ ಹೊರ ರಾಜ್ಯದ 5 ವಿದ್ಯಾರ್ಥಿಗಳಿಗೆ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ಅನುಮತಿ ನೀಡಲಾಗಿದೆ.

DSC 7293

ಪರೀಕ್ಷಾ ದಿನದಂದು ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಥರ್ಮಲ್ ಸ್ಕ್ರೀನಿಂಗ್, ಮಾಸ್ಕ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದ್ದು, ವಿದ್ಯಾರ್ಥಿಗಳು  ಪರೀಕ್ಷೆಯನ್ನು ಧೈರ್ಯವಾಗಿ ಎದುರಿಸಬೇಕು. ಪರೀಕ್ಷಾ ಕೇಂದ್ರ ಬದಲಾವಣೆಗೊಂಡ ವಿದ್ಯಾರ್ಥಿಗಳು ತಮ್ಮ ಮೂಲ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಬಯಸಿದರೆ ಹಳೆಯ ಪ್ರವೇಶ ಪತ್ರಗಳನ್ನು ಹಾಜರುಪಡಿಸಿದರೆ ಅಲ್ಲಿಯೇ ಅವಕಾಶ ಮಾಡಿಕೊಡಲಾಗುವುದು. ಬದಲಾವಣೆಗೊಂಡ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವವರು ಇಲಾಖಾ ವೆಬ್‍ಸೈಟ್‍ನಿಂದ ಪ್ರವೇಶ ಪತ್ರವನ್ನು ಡೌನ್ ಲೌಡ್ ಮಾಡಿಕೊಂಡು ಪರೀಕ್ಷೆ ಬರೆಯಬಹುದು.

ವಾಹನ ಸೌಲಭ್ಯವಿಲ್ಲದೆ ಹೋಬಳಿ ಕೇಂದ್ರ  ಹಾಗೂ ತಾಲ್ಲೂಕು ಕೇಂದ್ರಗಳಿಂದ ಬರುವ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಸೀಲ್ ಡೌನ್ ವಲಯದಿಂದ ಬರುವ ವಿದ್ಯಾರ್ಥಿಗಳಿಗಾಗಿ  ಪ್ರತಿ ಪರೀಕ್ಷಾ ಕೆಂದ್ರದಲ್ಲಿ 2 ಕೊಠಡಿಗಳನ್ನು ಪ್ರತ್ಯೇಕವಾಗಿ ಕಾಯ್ದಿರಿಸಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲಾಗಿದೆ. ಅಂಧ ವಿದ್ಯಾರ್ಥಿಗಳು ಹಾಗೂ ವಿಕಲ ಚೇತನ ಮಕ್ಕಳಿದ್ದಲ್ಲಿ ಮೊದಲೇ ವರದಿ ಮಾಡಿಕೊಂಡು ಸಹಾಯಕ ಬರಹಗಾರರಿಗೆ ಪರೀಕ್ಷೆ ಬರೆಯಲು ಅನುಮತಿ ನೀಡಲಾಗಿದೆ.

DSC 7304

ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ ಸಾಮಾಜಿಕ ಅಂತರ ಕಾಪಾಡಿಕೊಂಡು ಕಡ್ಡಾಯವಾಗಿ ಗುರುತಿನ ಚೀಟಿ ಮತ್ತು ಪ್ರವೇಶ ಪತ್ರಗಳೊಡನೆ ಪರೀಕ್ಷಾ ಕೊಠಡಿಗೆ ಹಾಜರಾಗಬೇಕು. ಪೋಷಕರು ಆಂತಕ ಪಡದೆ ಧೈರ್ಯದಿಂದ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿ  ಪರೀಕ್ಷೆ ಬರೆಯಲು ಕಳುಹಿಸಿಕೊಡಬೇಕು.  ಯಾವುದೇ ಸಮಸ್ಯೆಗಳಿದ್ದರೆ ಪರೀಕ್ಷಾ ಸಹಾಯವಾಣಿ ಸಂಖ್ಯೆ:0816-2275213ನ್ನು ಸಂಪರ್ಕಿಸಬೇಕೆಂದು ಅವರು ಮನವಿ ಮಾಡಿದ್ದಾರೆ.