*ಎಸ್.ಎಸ್.ಎಸ್.ಎಲ್.ಸಿ ಅಂಕಗಳನ್ನೂ ಪರಿಗಣಿಸಿ ದ್ವಿತೀಯ ಪಿಯು ಫಲಿತಾಂಶ ಘೋಷಣೆ-ಎಸ್.ಸುರೇಶ್ ಕುಮಾರ್*
ಇಂದಿನ ಸಂದರ್ಭದಲ್ಲಿ, ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವು ಇನ್ನಷ್ಟು ಸಮಗ್ರವಾಗಲು, ಹಾಗೂ ಹೆಚ್ಚು ನ್ಯಾಯಯುತವಾಗಲು ಈ ವಿದ್ಯಾರ್ಥಿಗಳ ಎಸ್.ಎಸ್.ಎಲ್.ಸಿ ಫಲಿತಾಂಶಗಳನ್ನೂ ಅವಲೋಕಿಸಿ, ಸೂಕ್ತ ಮೌಲ್ಯವನ್ನು ಕಲ್ಪಿಸುವ ಮೂಲಕ ಫಲಿತಾಂಶ ಘೋಷಣೆ ಮಾಡಬೇಕೆಂದು ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಕರ್ನಾಟಕ ಪ್ರೌಢ ಶಿಕ್ಷಣಪರೀಕ್ಷಾ ಮಂಡಳಿಯ ವತಿಯಿಂದ ಅಂಕಿ ಅಂಶಗಳನ್ನು ಪಡೆದು, ಪ್ರಥಮ ಪಿಯು ಅಂಕಗಳೊಂದಿಗೆ ಸೂಕ್ತ ರೀತಿಯಲ್ಲಿ ಹೊಂದಿಸಿ ಜೂನ್ ಮಾಸಾಂತ್ಯಕ್ಕೆ ಗ್ರೇಡಿಂಗ್ ಫಲಿತಾಂಶಗಳನ್ನು ಘೋಷಿಸುವ ವ್ಯವಸ್ಥೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.