ಪಾವಗಡ: ಖಾಸಗಿ ರಸಗೊಬ್ಬರದ ಅಂಗಡಿಯಲ್ಲಿ ಖರೀದಿಸುವ ಗ್ರಾಮೀಣ ಪ್ರದೇಶದ ರೈತರಿಂದ ಅತಿ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಕೃಷಿ ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿ 4 ಅಂಗಡಿ ಮಾಲೀಕರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿ ಅಂಗಡಿ ಪರವಾನಗಿ ರದ್ದುಪಡಿಸುವ ಎಚ್ಚರಿಕೆ ನೀಡಿದರು
ತಾಲೂಕಿನ ವ್ಯಾಪ್ತಿಯಲ್ಲಿ ಖಾಸಗಿ ರಸಗೊಬ್ಬರ ಅಂಗಡಿಯಲ್ಲಿ ರಸಗೊಬ್ಬರ ಬೆಲೆಯ ನಾಮಫಲಕ, ರೈತರು ಖರೀದಿಸುವ ರಸೀದಿ ಮತ್ತು ನಿಗದಿತ ಬೆಲೆಗಿಂತ ಹೆಚ್ಚಿನ ಹಣ ರೈತರಿಂದ ವಸೂಲಿ ಮಾಡುತ್ತೀದ್ದಾರೆ ಎಂದು ರೈತಾಪಿವರ್ಗ ಕೃಷಿ ಇಲಾಖೆಗೆ ದೂರು ನೀಡಿದ ತಕ್ಷಣ ಎಚ್ಚೆತ್ತ ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿ ಅಂಗಡಿಯ ದಾಸ್ತಾನು ಮತ್ತು ಮಾರಾಟ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ರೈತ ಸಂಘದ ಅಧ್ಯಕ್ಷ ನರಸಿಂಹ ರೆಡ್ಡಿ.
ಸಹಾಯಕ ಕೃಷಿ ಅಧಿಕಾರಿಗಳಾದ ವೇಣುಗೋಪಾಲ್ ಮತ್ತು ತಾಂತ್ರಿಕ ಅಧಿಕಾರಿಗಳಾದ ಪ್ರವೀಣ್ ನೇತೃತ್ವದ ಅಧಿಕಾರಿಗಳ ತಂಡ ಖಾಸಗಿ ಅಂಗಡಿಗಳಿಗೆ ದಿಢೀರ್ ದಾಳಿ ನಡೆಸಿ ರಸಗೊಬ್ಬರದ ಅಂಗಡಿ ಮಾಲೀಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ರಸಗೊಬ್ಬರ ದಾಸ್ತಾನು ಇದ್ದರೂ ಖಾಲಿಯಾಗಿದೆ ಅಂಗಡಿಯಲ್ಲಿ ನಿಗದಿತ ಬೆಲೆಗಿಂತ ಹೆಚ್ಚಿನ ಹಣವನ್ನು ರೈತರಿಂದ ಪಡೆದರೇ ಮುಲಾಜಿಲ್ಲದೇ ಅಂಗಡಿಯ ಪರವಾನಗಿ ರದ್ದುಪಡಿಸಿ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಸೂಚಿಸಿದ್ದಾರೆ
ವರದಿ- ಬುಲೆಟ್ ವೀರಸೇನಯಾದವ್