ಜುಲೈ ೧೩ ರಿಂದ ಆರಂಭವಾಗಲಿರುವ ಶ್ರೀಲಂಕ ವಿರುದ್ಧದ ಕ್ರಿಕೆಟ್ ಸರಣಿಗೆ ಟೀಂ ಇಂಡಿಯಾ ಆಟಗಾರರ ಪಟ್ಟಿ ಬಿಡುಗಡೆ ಮಾಡಿದೆ. ಅನುಭವಿ ಎಡಗೈ ಆರಂಭಿಕ ಬ್ಯಾಟ್ಸ್ಮನ್ ಶಿಖರ್ ಧವನ್ ಅವರು ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ವೇಗಿ ಭುವನೇಶ್ವರ್ ಕುಮಾರ್ ಅವರನ್ನು ತಂಡದ ಉಪನಾಯಕನನ್ನಾಗಿ ಆಯ್ಕೆ ಮಾಡಿದ್ದಾರೆ.
ಟೀಂ ಇಂಡಿಯಾ ಮತ್ತು ಶ್ರೀಲಂಕಾ ವಿರುದ್ಧ ಮೂರು ಏಕದಿನ ಪಂದ್ಯ ಮತ್ತು ಮೂರು ಟಿ20 ಪಂದ್ಯ ನಡೆಯಲಿದೆ. ಜುಲೈ 13ಕ್ಕೆ ಪಂದ್ಯ ಪ್ರಾರಂಭವಾಗಲಿದ್ದು, ಜುಲೈ 25ಕ್ಕೆ ಕೊನೆಗೊಳ್ಳಲಿದೆ. ಕೊಲಂಬೋದಲ್ಲಿರುವ ಆರ್ ಪ್ರೇಮದಾಸ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಪಂದ್ಯ ಜರುಗಲಿದೆ.
ಶ್ರೀಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟಿಸಿರುವ ತಂಡ ಹೀಗಿದೆ:
ಶಿಖರ್ ಧವನ್ (ಕ್ಯಾಪ್ಟನ್), ಪೃಥ್ವಿ ಶಾ, ದೇವದತ್ ಪಡಿಕ್ಕಲ್, ಋತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ನಿತೀಶ್ ರಾಣಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್) ಯುಜುವೇಂದ್ರ ಚಾಹಲ್, ರಾಹುಲ್ ಚಾಹರ್, ಕೆ ಗೌತಮ್, ಕೃನಾಲ್ ಪಾಂಡ್ಯ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಭುವನೇಶ್ವರ್ ಕುಮಾರ್ (ಉಪನಾಯಕ), ದೀಪಕ್ ಚಾಹರ್, ನವದೀಪ್ ಸೈನಿ, ಚೇತನ್ ಸಕರಿಯಾ.
ಬೌಲರ್‌ಗಳು: ಇಶಾನ್ ಪೊರೆಲ್, ಸಂದೀಪ್ ವಾರಿಯರ್, ಅರ್ಷ್‌ದೀಪ್ ಸಿಂಗ್, ಸಾಯಿ ಕಿಶೋರ್, ಸಿಮಾರ್ಜೀತ್ ಸಿಂಗ್.
ಟೀಂ ಇಂಡಿಯಾದ ಮಾಜಿ ನಾಯಕ, ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥರಾಗಿರುವ ರಾಹುಲ್ ದ್ರಾವಿಡ್ ಶ್ರೀಲಂಕಾ ಪ್ರವಾಸದಲ್ಲಿರುವ ಭಾರತೀಯ ತಂಡದ ಕೋಚ್ ಆಗಿ ತಂಡವನ್ನು ಮುನ್ನೆಡಸಲಿದ್ದಾರೆ.