ಡಾ.ಸಿದ್ದಲಿಂಗಯ್ಯ ಅವರಿಗೆ ಶ್ರದ್ದಾಂಜಲಿ
ಪಾವಗಡ: ತಾಲ್ಲೂಕಿನ ದಲಿತ ಪರ ಸಂಘಟನೆಗಳ ಮುಖಂಡರು ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಅಗಲಿದ ಮಹಾನ್ ಚೇತನ, ಸ್ವಾಭಿಮಾನಿ ಕವಿ, ಬಂಡಾಯ ಸಾಹಿತಿ ಡಾ.ಸಿದ್ದಲಿಂಗಯ್ಯ ಅವರಿಗೆ ಭಾವಪೂರ್ಣ ಶ್ರದ್ದಾಂಜಲಿ ಮೌನಾಚರಣೆ ಸಲ್ಲಿಸಿದರು.
ಈ ವೇಳೆ ಮಾಜಿ ಶಾಸಕ ಕೆ.ಎಂ. ತಿಮ್ಮರಾಯಪ್ಪ, ಮಾತನಾಡಿ ಕರ್ನಾಟಕ ಕಂಡ ಸಂವೇದನಾಶೀಲ ಕವಿ, ಸಂಶೋಧಕ, ಅಧ್ಯಾಪಕ, ಜನಪರ ಒಲವಿನ ಚೇತನ ಸಿದ್ದಲಿಂಗಯ್ಯ ಅವರ ನಿಧನದಿಂದ ಕನ್ನಡ ಸಾಹಿತ್ಯ ಮತ್ತು ಜನಪರ ಚಳವಳಿಗಳಿಗೆ ತುಂಬಲಾರದ ನಷ್ಟವಾಗಿದೆ ಎಂದರುು.
ಸಿದ್ದಲಿಂಗಯ್ಯ ಅವರು ಮಾಗಡಿ ತಾಲೂಕಿನ ಮಂಚನಬೆಲೆ ಗ್ರಾಮದಲ್ಲಿ 1954ರಲ್ಲಿ ಜನಿಸಿದರು ವಿದ್ಯಾರ್ಥಿ ದೆಸೆಯಲ್ಲಿಯೇ ಭಾಷಣಕಾರರಾಗಿ ಗುರುತಿಸಿಕೊಂಡಿದ್ದರು. ಡಾ. ಅಂಬೇಡ್ಕರ್, ಪೆರಿಯಾರ್ ವಿಚಾರಧಾರೆಗಳಿಂದ ಆಕರ್ಷಿತರಾಗಿದ್ದರು ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚಿಸಿದ್ದರು.
ಎರಡು ಬಾರಿ ವಿಧಾನಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. 2014 ರಲ್ಲಿ ಶ್ರವಣಬೆಳಗೊಳದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು ಅವರ ಸಾಹಿತ್ಯ ಕ್ಷೇತ್ರದ ಅಪಾರ ಕೊಡುಗೆಗೆ ಹತ್ತು ಹಲವು ಪ್ರಶಸ್ತಿಗಳು ತಂದಿವೆ. ಅವರ ಅಗಲಿಕೆ ದಲಿತ ಹೋರಾಟ ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಎಂದು ತಿಳಿಸಿದರು
. ಈ ಸಂದರ್ಭದಲ್ಲಿ ಮಾತನಾಡಿದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಬಸವಲಿಂಗಪ್ಪ,. ಮಾತನಾಡಿ. ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿದವರು. ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದವರು. ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿದ್ದರು. ಅಧ್ಯಾಪನ-ಬರವಣಿಗೆಗಳಲ್ಲಿ ತೊಡಗಿಕೊಂಡಿರುವವರು.
ಮಾಗಡಿ ತಾಲ್ಲೂಕಿನ ಮಂಚನಬೆಲೆ ಗ್ರಾಮದಲ್ಲಿ ಜನಿಸಿದ ಸಿದ್ದಲಿಂಗಯ್ಯನವರು ಕವಿ ಡಾ.ಸಿದ್ದಲಿಂಗಯ್ಯ ಅವರು ಶ್ರವಣಬೆಳಗೊಳದಲ್ಲಿ ನಡೆದ 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾಗಿ 1988-94, 1995-2001 ರವರೆಗೆ ಎರಡುಬಾರಿ ನಾಮಕರಣಗೊಂಡಿರುವುದರ ಜೊತೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದಲ್ಲಿ 2006-08 ಅವಧಿಯಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಸಿದ್ಧಲಿಂಗಯ್ಯನವರು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದರು
ಈ ಸಂದರ್ಭದಲ್ಲಿ ಮಾಜಿ ಪುರಸಭೆ ಸದಸ್ಯ ವಸಂತ್ ಕುಮಾರ್, ಮುಖಂಡರಾದ ಟಿ.ಎನ್.ಪೇಟೆ ರಮೇಶ್, ಕಡಪಲಕೆರೆ ನರಸಿಂಹಪ್ಪ, ವಕೀಲ ಅಂಬರೀಷ್, ಶ್ರೀನಿವಾಸ್, ಮಂಜುನಾಥ್ ಮತ್ತಿತರರು ಇದ್ದರು.
ವರದಿ ಬುಲೆಟ್ ವೀರಸೇನಯಾದವ್