ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ಆಟೋ ಚಾಲಕರಿಗೆ ದಿನಸಿ ಕಿಟ್ ವಿತರಣೆ
ಪಾವಗಡ : ಲಾಕ್ ಡೌನ್ ಸಂಕಷ್ಟ ಸಮಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಆಟೋ ಚಾಲಕರಿಗೆ ದಿನಸಿ ಕಿಟ್ ವಿತರಿಸುತ್ತಿರುವುದು ಶ್ಲಾಘನೀಯ ಎಂದು ಪತ್ರಕರ್ತ ಬುಲೆಟ್ ವೀರಸೇನ ಯಾದವ್ ತಿಳಿಸಿದರು.
ಇಂದು ಪಟ್ಟಣದ ಗುರುಭವನ ಮೈದಾನದಲ್ಲಿ ಆಟೋ ಚಾಲಕರಿಗೆ ದಿನಸಿ ಕಿಟ್ ವಿತರಿಸಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಗಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಯೋಜನಾಧಿಕಾರಿಗಳು ನಂಜುಂಡಿ ರವರು ಮಾತನಾಡುತ್ತ ಶ್ರೀ ಕ್ಷೇತ್ರದ ಪೂಜ್ಯ ಶ್ರೀ ವೀರೇಂದ್ರ ಹೆಗ್ಡೆ ಸ್ವಾಮಿಗಳ ಮಾರ್ಗದರ್ಶನದಂತೆ ಲಾಕ್ ಡೌನ್ ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದ ಆಟೋ ಚಾಲಕರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಇಂದು ದಿನಸಿ ಕಿಟ್ ಗಳನ್ನು ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಶ್ರೀ ಕ್ಷೇತ್ರದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಲ್ಲಿ ಸದಸ್ಯರಾದ ಚಾಲನಾ ಪರವಾನಗಿ ಹೊಂದಿರುವ ಆಟೋ ಚಾಲಕರಿಗೆ ಹೊಸ ಆಟೋ ರಿಕ್ಷಾ ಖರೀದಿಸಲು ನೆರವನ್ನು ನೀಡಲಾಗುವುದೆಂದು ಈ ವೇಳೆಯಲ್ಲಿ ಚಾಲಕರಿಗೆ ಮನೋದೈರ್ಯ ತುಂಬಿದರು.ಈ ಸಂದರ್ಭದಲ್ಲಿ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿ ಕಿರಣ್. ಚಿನ್ಮಯ ಸಂಸ್ಥೆ ಹಾಗೂ ಪತ್ರಕರ್ತ ಸತ್ಯ ಲೋಕೇಶ್, ಆಟೋ ಚಾಲಕರ ಸಂಘದ ಅಧ್ಯಕ್ಷ ನಾಗರಾಜ್, ಪತ್ರಕರ್ತ ಬುಲೆಟ್ ವೀರ ಸೇನ ಯಾದವ್, ಹಾಗೂ ಸಂಸ್ಥೆಯ ಸಿಬ್ಬಂದಿ ಉಪಸ್ಥಿತರಿದ್ದರು