ಮೇಕೆದಾಟು ಯೋಜನೆಯನ್ನು ಶೀಘ್ರವೇ ಆರಂಭಿಸಲಾಗುವುದು- ಬಿಎಸ್ ವೈ
ಬೆಂಗಳೂರು:- ಕರ್ನಾಟಕದ ಪ್ರಕರಣವನ್ನು ಮುಕ್ತಾಯಗೊಳಿಸಿರುವ ಎನ್ಜಿಟಿ ಯೋಜನೆಗೆ ಹಸಿರು ನಿಶಾನೆ ತೋರಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು. ಮೇಕೆದಾಟು ಸ್ಥಳ ಪರಿಶೀಲನೆಗಾಗಿ ಸಮಿತಿ ರಚಿಸಿ ಚನೈ ನ ದಕ್ಷಿಣ ಪೀಠ ನೀಡಿದ್ದ ಆದೇಶ ಪ್ರಶ್ನಿಸಿದ್ದ ಕರ್ನಾಟಕ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಪೀಠ ನಿನ್ನೆ ತೀರ್ಪಿ ಕಾಯ್ದಿರಿಸಿತ್ತು. ಇಂದು ವಿಚಾರಣೆ ಮುಕ್ತಾಯಗೊಳಿಸಿ ಯೋಜನೆ ಆರಂಭಕ್ಕೆ ಅನುಮತಿ ನೀಡಿದ್ದು,ಚೆನ್ನೈನಲ್ಲಿರುವ ದಕ್ಷಿಣ ಪೀಠದ ದೂರನ್ನು ವಜಾಗೊಳಿಸಿ ಆದೇಶ ನೀಡಿದೆ.
ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆ ಸಂಬಂದಿಸಿದಂತೆ ತಮಿಳುನಾಡು ಸರ್ಕಾರ ಈ ಯೋಜನೆ ಗೆ ತಗಾದೆ ತಗೆದು ಎನ್ ಜಿ.ಟಿ ಮುಂದೆ ಯೋಜನೆ ಮಾಡದಂತೆ ತಡೆಯಲು ಅರ್ಜಿ ಸಲ್ಲಿಸಿತ್ತು. ಇಂದು ಎನ್.ಜಿ.ಟಿ ರಾಜ್ಯದ ವಾದವನ್ನು ಮನ್ನಿಸಿ ಅರ್ಜಿಯನ್ನು ಇತ್ಯರ್ಥಪಡಿಸಿದೆ.
ಮುಖ್ಯಮಂತ್ರಿಗಳ ಪ್ರತಿಕ್ರಿಯೆ
ಕರ್ನಾಟಕ ರಾಜ್ಯಕ್ಕೆ ಮಹತ್ವಪೂರ್ಣವಾಗಿರುವ ಮೇಕೆದಾಟು ಯೋಜನೆ ಪ್ರಮುಖವಾಗಿ ಕುಡಿಯುವ ನೀರಿಗೆ ಅನುಕೂಲ ಕಲ್ಪಿಸುವಂಥದ್ದು. ಈ ಯೋಜನೆಗೆ ತಡೆ ಕೋರುವ ಅರ್ಜಿಯ ವಿಚಾರಣೆ ನಡೆಸಿದ ಎನ್.ಜಿ.ಟಿ ಇಂದು ರಾಜ್ಯದ ವಾದವನ್ನು ಮನ್ನಿಸಿ, ಅರ್ಜಿಯನ್ನು ಇತ್ಯರ್ಥಪಡಿಸಿದೆ. ಆದಷ್ಟು ಶೀಘ್ರದಲ್ಲಿ ಎಲ್ಲ ಅನುಮತಿಗಳನ್ನು ಪಡೆದು ಯೋಜನೆ ಪ್ರಾರಂಭಿಸಲಾಗುವುದು.
ಬಸವರಾಜ್ ಬೊಮ್ಮಾಯಿ- ಕಾನೂನು ಸಚಿವರ ಪ್ರತಿಕ್ರಿಯೆ
ರಾಜ್ಯದ ಯಾವುದೇ ರೀತಿಯ ನೆಲ-ಜಲ ಹಾಗೂ ಅಂತರಾಜ್ಯ ನೆಲ-ಜಲದ ವಿಷಯ ಬಂದಾಗ ನಮ್ಮ ಸರ್ಕಾರ ಅದನ್ನು ಗಂಭೀರವಾಗಿ ತೆಗೆದುಕೊಂಡು ರಾಜ್ಯದ ಹಿತಾಸಕ್ತಿಯನ್ನು ಕಾಪಾಡಿಕೊಂಡು ಬಂದಿದೆ. ಅದೇ ರೀತಿ ಚೆನೈನಲ್ಲಿರುವ ಎನ್ ಜಿ ಟಿ (ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ) ಮೇಕೆದಾಟು ಯೋಜನೆಗೆ ಸಂಬಂಧಪಟ್ಟಂತೆ ಸೋ ಮೋಟೊ ಪ್ರಕರಣ ದಾಖಲಿಸಿಕೊಂಡು ಇದರ ಬಗ್ಗೆ ನಮ್ಮ ಕಾನೂನು ಇಲಾಖೆ , ಅಡ್ವೋಕೇಟ್ ಜನರಲ್ ಹಾಗೂ ಕಾನೂನು ತಜ್ಞರ ತಂಡ ಕೂಲಂಕುಶ ಚರ್ಚೆ ಮಾಡಿತ್ತು. ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಇದನ್ನು ನವದೆಹಲಿಯ ಎನ್ ಜಿ ಟಿ ಮುಂದೆ ಹೋಗಿ ಕರ್ನಾಟಕದ ಮೇಕೆದಾಟು ಯೋಜನೆಯಲ್ಲಿ ಯಾವುದೇ ರೀತಿಯ ಕಾನೂನು ಉಲ್ಲಂಘನೆ ಮಾಡಿಲ್ಲ ಹಾಗೂ ಪರಿಸರಕ್ಕೆ ಯಾವುದೇ ರೀತಿಯ ಹಾನಿ ಮಾಡಿಲ್ಲವೆಂದು ಎನ್ ಜಿ ಟಿ ಗೆ ಮನವರಿಕೆ ಮಾಡಿಕೊಡಲಾಯಿತು.
ಅದರಂತೆ ಇಂದು ಟ್ರಿಬ್ಯೂನಲ್ ಆದೇಶವು ರಾಜ್ಯದ ಪರವಾಗಿ ಬಂದಿದೆ. ಈ ವಿಷಯದ ಕುರಿತು ಒಂದು ಮುಖ್ಯ ಪ್ರಕರಣ ಸುಪ್ರೀಂ ಕೋರ್ಟಿನಲ್ಲಿದೆ. ಅಲ್ಲಿ ಕೂಡ ಕರ್ನಾಟಕದ ಹಿತಾಸಕ್ತಿ ಕಾಪಾಡುವ ಎಲ್ಲಾ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ