Black Fungus in Covid patients

Covid 19: ದೇಶಾದ್ಯಂತ ಸೋಂಕು ಇಳಿಕೆ..!

NATIONAL National - ಕನ್ನಡ

ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 60,753 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ನವದೆಹಲಿ: ಕೊರೊನಾ ಸೋಂಕಿನ ವಿರುದ್ಧ ನಿರಂತರ ಹೋರಾಟ ನಡೆಸುತ್ತಾ ಬಂದಿರುವ ಭಾರತ ಸರ್ಕಾರ, ಇದೀಗ ಸೋಂಕಿನ ಪ್ರಮಾಣವನ್ನು ಗಣನೀಯವಾಗಿ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗುತ್ತಿದೆ. ದೇಶಾದ್ಯಂತ ಕೊರೊನಾ ಸಕ್ರಿಯ ಪ್ರಕರಣಗಳ ಪ್ರಮಾಣ ಇದೀಗ 8 ಲಕ್ಷ ಮಟ್ಟಕ್ಕಿಂತ ಕೆಳಕ್ಕೆ ತಗ್ಗಿದ್ದು, ಅದೀಗ 74 ದಿನಗಳ ನಂತರ 7,60,019ಕ್ಕೆ ಇಳಿಕೆ ಕಂಡಿದೆ.

ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 60,753 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ದೇಶದಲ್ಲಿ ಇಲ್ಲಿಯ ತನಕ 2,86,78,390 ಸೋಂಕಿತರು ಗುಣಮುಖರಾಗಿದ್ದಾರೆ.

ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 97,743 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಸತತ 37ನೇ ದಿನದಲ್ಲಿ ದೈನಂದಿನ ಚೇತರಿಕೆ ಪ್ರಕರಣಗಳು ದಿನನಿತ್ಯ ಕಾಣಿಸಿಕೊಳ್ಳುತ್ತಿರುವ ಹೊಸ ಪ್ರಕರಣಗಳನ್ನು ಹಿಂದಿಕ್ಕುತ್ತಿವೆ.

ಚೇತರಿಕೆ ಪ್ರಮಾಣ ಇದೀಗ 96.16%ಗೆ ಸುಧಾರಣೆ ಕಂಡಿದೆ.

ವಾರದ ಪಾಸಿಟಿವಿಟಿ ದರ 5% ಒಳಗಿದ್ದು, ಅದೀಗ 3.58%ಗೆ ತಗ್ಗಿದೆ.

ದೈನಂದಿನ ಪಾಸಿಟಿವಿಟಿ ದರವೂ ಸತತ 12ನೇ ದಿನದಲ್ಲಿ 5%ಗಿಂತ ಕೆಳಗಿನ ಮಟ್ಟದಲ್ಲಿದ್ದು, ಅದೀಗ 2.98% ಇದೆ.

ಗಂಟಲು ಮತ್ತು ಮೂಗಿನ ದ್ರವ ಪರೀಕ್ಷೆ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಇದುವರೆಗೆ 38.92 ಕೋಟಿ ಜನರ ಪರೀಕ್ಷೆ ನಡೆಸಲಾಗಿದೆ.

ದೇಶವ್ಯಾಪಿ ಹಮ್ಮಿಕೊಂಡಿರುವ ಬೃಹತ್ ಕೋವಿಡ್-19 ಲಸಿಕಾ ಆಂದೋಲನ ಭರದಿಂದ ಸಾಗಿದ್ದು, ಇಲ್ಲಿಯ ತನಕ 27.23 ಕೋಟಿ ಲಸಿಕಾ ಡೋಸ್ ನೀಡಲಾಗಿದೆ.