ಕೋವಿಡ್ ಪಾಸಿಟಿವಿಟಿ ಪ್ರಮಾಣ ಇಳಿಕೆ: ಲಾಕ್ ಡೌನ್ ಸಡಿಲಿಕೆ- ಜಿಲ್ಲಾಧಿಕಾರಿಗಳು
ತುಮಕೂರು,ಜೂ.20(ಕ.ವಾ):ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣದಲ್ಲಿ ಇಳಿಕೆಯಾಗಿರುವುದರಿಂದ ಸರ್ಕಾರದ ಮಾರ್ಗಸೂಚಿಗಳಿಗೊಳಪಟ್ಟು ಕೆಲವು ಲಾಕ್ ಡೌನ್ ನಿಯಮಗಳನ್ನು ಸಡಿಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ. 5% ಕ್ಕಿಂತ ಕಡಿಮೆ ಇದ್ದರೂ ಸಹ ಸಾಂಕ್ರಾಮಿಕ ರೋಗವನ್ನು ಉದಾಸೀನ ಮಾಡುವಂತಿಲ್ಲ. ಈ ನಿಟ್ಟಿನಲ್ಲಿ ಸರ್ಕಾರವು ಜಿಲ್ಲೆಗೆ ಅನ್ವಯಿಸುವಂತೆ ಪರಿಷ್ಕೃತ ಮಾರ್ಗಸೂಚಿಯನ್ನು ಜಾರಿ ಮಾಡಿದ್ದು ಸಾರ್ವಜನಿಕರು ಈ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಕೋವಿಡ್ 19 ಸರಪಳಿಯನ್ನು ಮುರಿಯಬೇಕೆಂದು ಅವರು ಮನವಿ ಮಾಡಿದ್ದಾರೆ.
ಪರಿಷ್ಕೃತ ಮಾರ್ಗಸೂಚಿಗಳು ಜೂನ್ 21ರ ಬೆಳಿಗ್ಗೆ 6 ರಿಂದ ಜುಲೈ 5ರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಮಾರ್ಗಸೂಚಿಯನ್ವಯ ಕೋವಿಡ್ ನಿಯಮಗಳನ್ನು ಅನುಸರಿಸುವುದರೊಂದಿಗೆ ಎಲ್ಲಾ ಉತ್ಪಾದನಾ ಘಟಕ / ಕೈಗಾರಿಕಾ ಸ್ಥಾಪನೆ / ಕೈಗಾರಿಕೆಗಳು ಅವರ 50% ಸಿಬ್ಬಂದಿಗಳನ್ನು ಹಾಗೂ ಉಡುಪು ಉತ್ಪಾದನೆ(ಗಾಮೆರ್ಂಟ್ಸ್)ಯಲ್ಲಿ ತೊಡಗಿರುವ ಘಟಕ / ಕೈಗಾರಿಕಾ ಸಂಸ್ಥೆ / ಕೈಗಾರಿಕೆಗಳಲ್ಲಿ ಉತ್ಪಾದನೆಯನ್ನು ಅವರ 30% ಸಿಬ್ಬಂದಿ ಸಾಮಥ್ರ್ಯದೊಂದಿಗೆ ಮಾತ್ರ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.
ಅಗತ್ಯ ಮತ್ತು ಅಗತ್ಯವಿಲ್ಲದ ಸರಕು / ಸೇವೆಗಳನ್ನು ನೀಡುವ ಎಲ್ಲಾ ಅಂಗಡಿಗಳನ್ನು ಬೆಳಿಗ್ಗೆ 6 ರಿಂದ ಸಂಜೆ 5 ರವರೆಗೆ ತೆರೆಯಲು ಅನುಮತಿಸಲಾಗಿದೆ. ಆದರೆ ಹವಾನಿಯಂತ್ರಿತ ಅಂಗಡಿ, ಶಾಪಿಂಗ್ ಸಂಕೀರ್ಣ, ಮಾಲ್‍ಗಳು ಕಾರ್ಯನಿರ್ವಹಿಸಲು ಅನುಮತಿ ಇರುವುದಿಲ್ಲ. ಮನೆಯ ಹೊರಗೆ ವ್ಯಕ್ತಿಗಳ ಚಲನೆಯನ್ನು ಕಡಿಮೆ ಮಾಡಲು ಮನೆಯ ಎಲ್ಲ ವಸ್ತುಗಳ ವಿತರಣೆಗಾಗಿ 24×7(ಮನೆ ವಿತರಣೆ)ಹೋಮ್ ಡೆಲಿವರಿ ಸೇವೆ ನೀಡಲು ಅವಕಾಶವಿದೆ. ಎಲ್ಲಾ ಹೋಟೆಲ್, ರೆಸ್ಟೋರೆಂಟ್, ತಿನಿಸು, ಬಾರ್ ಮತ್ತು ಕ್ಲಬ್‍ಗಳಲ್ಲಿ ಬೆಳಿಗ್ಗೆ 6 ರಿಂದ ಸಂಜೆ 5ರವರೆಗೆ ಶೇ.50ರಷ್ಟು ಗ್ರಾಹಕರಿಗೆ ಊಟ ಬಡಿಸಲು ಅನುಮತಿಸಲಾಗಿದೆ. ಆದರೆ ಹವಾನಿಯಂತ್ರಣದೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ಇರುವುದಿಲ್ಲ.
ಹೋಟೆಲ್ ಗಳಿಂದ 24×7 ಡೋರ್ ಡೆಲಿವರಿಗೆ ಅನುಮತಿಸಲಾಗಿದೆ.
ಪಬ್‍ಗಳು ಕಾರ್ಯನಿರ್ವಹಿಸಲು ಅನುಮತಿಸಲಾಗುವುದಿಲ್ಲ ಹಾಗೂ ಬಾರ್ ಗಳಲ್ಲಿ ಸರ್ವೀಸ್ ಗೆ ಅವಕಾಶವಿಲ್ಲ. ಆತಿಥ್ಯ ಸೇವೆ ಒದಗಿಸುವ ವಸತಿ, ರೆಸಾರ್ಟ್‍ಗಳು, ಇತ್ಯಾದಿಗಳು ಅದರ ಶೇ 50% ರಷ್ಟು ವಸತಿಗಳಲ್ಲಿ ಮಾತ್ರ ಸೇವೆ ಒದಗಿಸಲು ಅನುಮತಿಸಲಾಗಿದೆ. ಹೊರಾಂಗಣ ಚಲನಚಿತ್ರ / ದೂರದರ್ಶನ-ಸರಣಿ ಸಂಬಂಧಿತ ಚಿತ್ರೀಕರಣಕ್ಕೆ ಮಾತ್ರ ಅನುಮತಿ ಇದೆ.
ಎಲ್ಲಾ ನಿರ್ಮಾಣ ಚಟುವಟಿಕೆ / ನಾಗರಿಕ ದುರಸ್ತಿ ಕಾರ್ಯಗಳು ನಿರ್ಮಾಣ ಸಾಮಗ್ರಿಗಳೊಂದಿಗೆ ವ್ಯವಹರಿಸುವ ಅಂಗಡಿ/ ಸಂಸ್ಥೆಗಳಿಗೆ ಅನುಮತಿಸಲಾಗಿದೆ. ವಾಕಿಂಗ್ ಮತ್ತು ಜಾಗಿಂಗ್‍ಗಾಗಿ ಬೆಳಿಗ್ಗೆ 5 ರಿಂದ ಸಂಜೆ 6 ಗಂಟೆವರೆಗೆ ಉದ್ಯಾನವನಗಳನ್ನು ತೆರೆಯಲು ಅನುಮತಿ ಇದೆ. ಆದರೆ ಗುಂಪು ಚಟುವಟಿಕೆಗಳಿಗೆ ಅವಕಾಶವಿಲ್ಲ. ಹವಾನಿಯಂತ್ರಿತವಲ್ಲದ ಜಿಮ್ನಾಷಿಯಂಗಳು ಶೇ 50 ಸಾಮಥ್ರ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಸಾರಿಗೆ ಬಸ್ಸುಗಳಲ್ಲಿ ಶೇ.50 ರಷ್ಟು ಆಸನ ಸಾಮಥ್ರ್ಯದೊಂದಿಗೆ ಸಂಚಾರಿ ಕಾರ್ಯನಿರ್ವಹಿಸಲು ಅನುಮತಿ ಇದೆ. ಆದರೆ ಪ್ರಯಾಣಿಕರು ನಿಂತು ಮಾಡುವ ಯಾವುದೇ ಪ್ರಯಾಣವನ್ನು ಅನುಮತಿಸಲಾಗುವುದಿಲ್ಲ. ಟ್ಯಾಕ್ಸಿ ಮತ್ತು ಆಟೋ ರಿಕ್ಷಾಗಳ ಓಡಾಟಕ್ಕೆ ಅನುಮತಿ ಇದ್ದು ಗರಿಷ್ಠ ಇಬ್ಬರು ಪ್ರಯಾಣಿಕರನ್ನು ಮಾತ್ರ ಕರೆದೊಯ್ಯಬಹುದಾಗಿದೆ. ಪ್ರೇಕ್ಷಕರು ಇಲ್ಲದ ಎಲ್ಲಾ ಹೊರಾಂಗಣ ಕ್ರೀಡಾ ಚಟುವಟಿಕೆಗಳಿಗೆ ಅನುಮತಿಸಲಾಗಿದೆ.
ಎಲ್ಲಾ ಸರ್ಕಾರಿ ಮತ್ತು ಖಾಸಗಿ ಕಚೇರಿಗಳು ಶೇ. 50 ಸಿಬ್ಬಂದಿ ಸಾಮಥ್ರ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ಇದೆ. ಆದಾಗ್ಯೂ, ಅಗತ್ಯ ಮತ್ತು ತುರ್ತು ಪರಿಸ್ಥಿತಿಯನ್ನು ನಿರ್ವಹಿಸುವ ಕಚೇರಿಗಳು ಸೇವೆಗಳಿಗೆ ಅವುಗಳ ಅಗತ್ಯಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಲು ಅನುಮತಿ ಇದ್ದು, ಸಾಧ್ಯವಾದಷ್ಟು ಮನೆಯಿಂದ ಕೆಲಸ ಮಾಡುವುದನ್ನು ಪ್ರೋತ್ಸಾಹಿಸಬೇಕು. ಘನತ್ಯಾಜ್ಯ ಸೇರಿದಂತೆ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಕೌಶಲ್ಯ ತರಬೇತಿ ನಿರ್ವಹಣೆಗೆ ಅನುಮತಿ ನೀಡಲಾಗಿದೆ. ಮಾರ್ಗಸೂಚಿಯನ್ವಯರಾತ್ರಿ ಕಫ್ರ್ಯೂ ಸಂಜೆ 7 ರಿಂದ ಬೆಳಿಗ್ಗೆ 5 ಗಂಟೆವರೆಗೆ ಹಾಗೂ ವಾರಾಂತ್ಯದ ಕಫ್ರ್ಯೂ ಪ್ರತಿ ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿಯಲ್ಲಿರುತ್ತದೆ. ರಾತ್ರಿ ಕಫ್ರ್ಯೂ ಅವಧಿಯಲ್ಲಿ ಅಗತ್ಯ ಮತ್ತು ತುರ್ತು ಹೊರತುಪಡಿಸಿ, ವ್ಯಕ್ತಿಗಳ ಚಲನೆಯನ್ನು ಕಟ್ಟುನಿಟ್ಟಾಗಿ ನಿμÉೀಧಿಸಲಾಗಿದೆ. ರೋಗಿಗಳು ಮತ್ತು ಅವರ ಪರಿಚಾರಕರು / ತುರ್ತು ಅಗತ್ಯವಿರುವ ವ್ಯಕ್ತಿಗಳು, ವ್ಯಾಕ್ಸಿನೇಷನ್ ತೆಗೆದುಕೊಳ್ಳುವವರಿಗೆ ಅನುಮತಿಸಲಾಗುವುದು. ಅಗತ್ಯ ಸೇವೆ ಮತ್ತು ಕರ್ತವ್ಯಗಳನ್ನು ನಿರ್ವಹಿಸುವ ಅಧಿಕಾರಿಗಳು / ಸಿಬ್ಬಂದಿಗಳ ಓಡಾಟಕ್ಕೆ ನಿಬರ್ಂಧ ಇರುವುದಿಲ್ಲ. ತುರ್ತು ಮತ್ತು ಅಗತ್ಯ ಸೇವೆಗಾಗಿ 24/7 ಕಾರ್ಯಾಚರಣೆ ಮಾಡುವ ಎಲ್ಲಾ ಕೈಗಾರಿಕೆಗಳು / ಕಂಪನಿಗಳು / ಸಂಸ್ಥೆಗಳು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗುವುದು. ಇಂತಹ ಸಂಸ್ಥೆಗಳಿಂದ ನೀಡಲಾದ ಗುರುತಿನ ಚೀಟಿ ಹೊಂದಿರುವ ನೌಕರರ ಚಲನೆಗೆ ಅನುಮತಿಸಲಾಗುವುದು. ಅಧಿಕೃತ ಗುರುತಿನ ಚೀಟಿ ಹೊಂದಿರುವ ಟೆಲಿಕಾಂ ಮತ್ತು ಇಂಟರ್ನೆಟ್ ಸೇವಾ ಪೂರೈಕೆದಾರರ ನೌಕರರು ಮತ್ತು ವಾಹನಗಳ ಓಡಾಟಕ್ಕೂ ಅನುಮತಿ ನೀಡಲಾಗುವುದು. ಐಟಿ ಮತ್ತು ಐಟಿಇಎಸ್ ಕಂಪನಿಗಳು / ಸಂಸ್ಥೆಗಳ ಅಗತ್ಯವಿರುವ ಸಿಬ್ಬಂದಿ ಹಾಗೂ ನೌಕರರು ಮಾತ್ರ ಕಚೇರಿಯಿಂದ ಕೆಲಸ ಮಾಡತಕ್ಕದ್ದು. ಉಳಿದವರು ಮನೆಯಿಂದಲೇ ಕೆಲಸ ಮಾಡಬೇಕೆಂದು ಸೂಚಿಸಲಾಗಿದೆ.
ವೈದ್ಯಕೀಯ/ತುರ್ತು/ಔಷಧಿ ಮಳಿಗೆ ಇನ್ನಿತರೆ ಅಗತ್ಯ ಸೇವೆ ಒದಗಿಸಲು ಅನುಮತಿಯಿದೆ ಆದರೆ ಯಾವುದೇ ವಾಣಿಜ್ಯ ಸೇವೆಗೆ ಅವಕಾಶವಿಲ್ಲ. ಎಲ್ಲ ತರಹದ ಸರಕು ವಾಹನ/ಖಾಲಿ ವಾಹನಗಳ ಸಂಚಾರಕ್ಕೆ ಅನುಮತಿಯಿಲ್ಲ. ಆದರೆ ಹೋಮ್ ಡೆಲಿವರಿ ವಾಹನಗಳಿಗೆ ಅನುಮತಿಯಿದೆ. ಪ್ರಯಾಣಿಕರ ಪ್ರಯಾಣಕ್ಕೆ ಅನುವಾಗುವಂತೆ ಎಲ್ಲ ರೀತಿಯ ಸಾರಿಗೆ ವಾಹನ ಸಂಚಾರಕ್ಕೆ ಅವಕಾಶವಿದೆ ಹಾಗೂ ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ ಮತ್ತು ಬಸ್ ಟರ್ಮಿನಲ್ / ನಿಲ್ದಾಣಗಳಿಗೆ ಹೋಗಲು/ಬರಲು ಸಾರಿಗೆ/ಖಾಸಗಿ ವಾಹನ/ ಟ್ಯಾಕ್ಸಿಗಳಿಗೆ ಅನುಮತಿಸಲಾಗಿದೆ. ಪ್ರಯಾಣಿಕರು ತಮ್ಮ ಪ್ರಯಾಣದ ದಾಖಲೆ / ಟಿಕೆಟ್ ಅನ್ನು ಕಟ್ಟುನಿಟ್ಟಾಗಿ ಹಾಜರುಪಡಿಸಬೇಕು. ವಾರಾಂತ್ಯ ಕಫ್ರ್ಯೂ ಅವಧಿಯಲ್ಲಿ ಶುಕ್ರವಾರ ಸಂಜೆ 7 ರಿಂದಲೇ ವ್ಯಕ್ತಿಗಳ ಚಲನೆಯನ್ನು ಕಟ್ಟುನಿಟ್ಟಾಗಿ ನಿμÉೀಧಿಸಲಾಗಿದೆ. ಅಗತ್ಯ ಮತ್ತು ತುರ್ತು ಚಟುವಟಿಕೆಗಳನ್ನು ಹೊರತುಪಡಿಸಿ ಸೋಮವಾರ ಬೆಳಿಗ್ಗೆ 5 ಗಂಟೆವರೆಗೆ ಎಲ್ಲಾ ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಚೇರಿಗಳು ಮತ್ತು ಅವುಗಳ ಸ್ವಾಯತ್ತತೆ ಸಂಸ್ಥೆ, ನಿಗಮ, ಇತ್ಯಾದಿ, ತುರ್ತು, ಅಗತ್ಯ ಸೇವೆಗಳನ್ನು ಒದಗಿಸುವ ಅಧಿಕಾರಿಗಳು / ಸಿಬ್ಬಂದಿ ಓಡಾಟಕ್ಕೆ ಅನುಮತಿಸಲಾಗುವುದು. ತುರ್ತು ಮತ್ತು ಅಗತ್ಯ ಸೇವೆಗಾಗಿ 24/7 ಕಾರ್ಯಾಚರಣೆ ಮಾಡುವ ಎಲ್ಲಾ ಕೈಗಾರಿಕೆಗಳು / ಕಂಪನಿಗಳು / ಸಂಸ್ಥೆಗಳು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗುವುದು. ಇಂತಹ ಸಂಸ್ಥೆಗಳಿಂದ ನೀಡಲಾದ ಗುರುತಿನ ಚೀಟಿ ಹೊಂದಿರುವ ನೌಕರರ ಚಲನೆಗೆ ಅನುಮತಿಸಲಾಗುವುದು. ಆದಾಗ್ಯೂ, ಸಾಧ್ಯವಾದಷ್ಟು ಮಟ್ಟಿಗೆ, ನೌಕರರು ಮನೆಯಿಂದ ಕೆಲಸ ಮಾಡಲು ಪ್ರೋತ್ಸಾಹಿಸಬೇಕು. ಅಧಿಕೃತ ಗುರುತಿನ ಚೀಟಿ ಹೊಂದಿರುವ ಟೆಲಿಕಾಂ ಮತ್ತು ಇಂಟರ್ನೆಟ್ ಸೇವಾ ಪೂರೈಕೆದಾರರ ನೌಕರರು ಮತ್ತು ವಾಹನಗಳ ಓಡಾಟಕ್ಕೂ ಅನುಮತಿ ನೀಡಲಾಗುವುದು. ಐಟಿ ಮತ್ತು ಐಟಿಇಎಸ್ ಕಂಪನಿಗಳು / ಸಂಸ್ಥೆಗಳ ಅಗತ್ಯವಿರುವ ಸಿಬ್ಬಂದಿ ಹಾಗೂ ನೌಕರರು ಮಾತ್ರ ಕಚೇರಿಯಿಂದ ಕೆಲಸ ಮಾಡತಕ್ಕದ್ದು. ಉಳಿದವರು ಮನೆಯಿಂದಲೇ ಕೆಲಸ ಮಾಡಬೇಕೆಂದು ಸೂಚಿಸಲಾಗಿದೆ.
ರೋಗಿಗಳು ಅವರ ಪರಿಚಾರಕರು / ತುರ್ತು ಅಗತ್ಯವಿರುವ ವ್ಯಕ್ತಿಗಳು, ವ್ಯಾಕ್ಸಿನೇಷನ್ ತೆಗೆದುಕೊಳ್ಳುವವರಿಗೆ ಅನುಮತಿಸಲಾಗುವುದು. ಅಗತ್ಯ ಸೇವೆ ಮತ್ತು ಕರ್ತವ್ಯಗಳನ್ನು ನಿರ್ವಹಿಸುವ ಅಧಿಕಾರಿಗಳು / ಸಿಬ್ಬಂದಿಗಳ ಓಡಾಟಕ್ಕೆ ನಿಬರ್ಂಧ ಇರುವುದಿಲ್ಲ. ತುರ್ತುಮತ್ತು ಅಗತ್ಯ ಸೇವೆಗಾಗಿ 24/7 ಕಾರ್ಯಾಚರಣೆ ಮಾಡುವ ಎಲ್ಲಾ ಕೈಗಾರಿಕೆಗಳು / ಕಂಪನಿಗಳು / ಸಂಸ್ಥೆಗಳು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗುವುದು.ಇಂತಹ ಸಂಸ್ಥೆಗಳಿಂದ ನೀಡಲಾದ ಗುರುತಿನ ಚೀಟಿ ಹೊಂದಿರುವ ನೌಕರರ ಚಲನೆಗೆ ಅನುಮತಿಸಲಾಗುವುದು.
ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಮಾಂಸ ಮತ್ತು ವ್ಯವಹರಿಸುವ ಅಂಗಡಿಗಳು ಮೀನು, ಡೈರಿ ಮತ್ತು ಹಾಲಿನ ಬೂತ್‍ಗಳು ಮತ್ತು ಪ್ರಾಣಿಗಳ ಮೇವು ಮಾರಾಟಕ್ಕೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಅನುಮತಿಸಲಾಗುವುದು. ಬೀದಿ ಬದಿ ಮಾರಾಟ, ಮದ್ಯ ಮಾರಾಟ, ಸಾರ್ವಜನಿಕ ವಿತರಣೆಗೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆವರೆಗೆ ಅವಕಾಶವಿದೆ. ರೆಸ್ಟೋರೆಂಟ್ ಮತ್ತು ತಿನಿಸುಗಳನ್ನು ತೆಗೆದುಕೊಂಡು ಹೋಗಲು ಹಾಗೂ ಡೋರ್ ಡೆಲಿವರಿಗೆ ಮಾತ್ರ ಅನುಮತಿಸಲಾಗುತ್ತದೆ. ಪ್ರಯಾಣಿಕರ ಪ್ರಯಾಣಕ್ಕೆ ಅನುವಾಗುವಂತೆ ಎಲ್ಲ ರೀತಿಯ ಸಾರಿಗೆ ವಾಹನ ಸಂಚಾರಕ್ಕೆ ಅವಕಾಶವಿದೆ ಹಾಗೂ ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ ಮತ್ತು ಬಸ್ ಟರ್ಮಿನಲ್ / ನಿಲ್ದಾಣಗಳಿಗೆ ಹೋಗಲು/ಬರಲು ಸಾರಿಗೆ/ಖಾಸಗಿ ವಾಹನ/ ಟ್ಯಾಕ್ಸಿಗಳಿಗೆ ಅನುಮತಿಸಲಾಗಿದೆ. ಪ್ರಯಾಣಿಕರು ತಮ್ಮ ಪ್ರಯಾಣದ ದಾಖಲೆ / ಟಿಕೆಟ್ ಅನ್ನು ಕಟ್ಟುನಿಟ್ಟಾಗಿ ಹಾಜರುಪಡಿಸಬೇಕು. ಈಗಾಗಲೇ ನಿಗದಿಯಾಗಿರುವ ವಿವಾಹಗಳನ್ನು ರಾಜ್ಯ ಸರ್ಕಾರ ಹೊರಡಿಸಿದ ಕೋವಿಡ್ 19 ಸೂಕ್ತ ನಡವಳಿಕೆ ಮತ್ತು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ತಮ್ಮ ಮನೆಯಲ್ಲಿಯೇ 40 ಜನರವರೆಗಿನ ನಿಕಟ ಕುಟುಂಬ ಸಂಬಂಧಿಗಳು ಮಾತ್ರ ಒಳಗೊಂಡಂತೆ ನೆರವೇರಿಸಬೇಕು. ಶವಸಂಸ್ಕಾರ / ಅಂತ್ಯಕ್ರಿಯೆಗಳನ್ನು ಗರಿಷ್ಠ 5 ಜನರೊಂದಿಗೆ ಮಾತ್ರ ನೆರವೇರಿಸಲು ಅನುಮತಿಸಲಾಗುವುದು ಎಂದು ಅವರು ನಿರ್ದೇಶನ ನೀಡಿದ್ದಾರೆ.
ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಕೋವಿಡ್ ನಿಯಂತ್ರಣದಲ್ಲಿ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕೆಂದು ಸಾರ್ವಜನಿಕರಲ್ಲಿ ಅವರು ಮನವಿ ಮಾಡಿದ್ದಾರೆ.