E4eMXoLVIAI3B1n

ಚಲನಚಿತ್ರ, ಕಿರುತೆರೆ ರಂಗದವರಿಗೆ ಆರ್ಥಿಕ ನೆರವು: ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಆಹ್ವಾನ

FILM NEWS Genaral STATE

ಚಲನಚಿತ್ರ, ಕಿರುತೆರೆ ರಂಗದವರಿಗೆ ಆರ್ಥಿಕ ನೆರವು: ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಆಹ್ವಾನ

ಬೆಂಗಳೂರು, ಜೂನ್ 22 (ಕರ್ನಾಟಕ ವಾರ್ತೆ) : ಕೋವಿಡ್ -19 ನ ಎರಡನೇ ಅಲೆ ಹಿನ್ನೆಲೆಯಲ್ಲಿ ಜಾರಿಯಾಗಿದ್ದ ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಚಲನಚಿತ್ರ ಮತ್ತು ಕಿರುತೆರೆ ಕಲಾವಿದರು ಮತ್ತು ತಂತ್ರಜ್ಞರು ಹಾಗೂ ಚಲನಚಿತ್ರ ಮಂದಿರದ ಕಾರ್ಮಿಕರಿಗೆ ಮುಖ್ಯಮಂತ್ರಿ ಯವರು ಘೋಷಿಸಿದ್ದ ಮೂರು ಸಾವಿರ ರೂ. ಮೊತ್ತದ ವಿಶೇಷ ಆರ್ಥಿಕ ಪ್ಯಾಕೇಜ್ನ ನೆರವಿಗಾಗಿ ಸೇವಾಸಿಂಧು ಪೋರ್ಟಲ್ ಮೂಲಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆನ್ಲೈನ್ ಅರ್ಜಿ ಆಹ್ವಾನಿಸಿದೆ.

ರಾಜ್ಯದಲ್ಲಿ ಎರಡನೇ ಅಲೆಯ ವೇಳೆ ಸರ್ಕಾರ ವಿಧಿಸಿದ್ದ ನಿರ್ಬಂಧದಿಂದಾಗಿ ಬಾಧಿತರಾಗಿದ್ದ ಸಮಾಜ ವಿವಿಧ ವರ್ಗದವರಿಗೆ ಮುಖ್ಯಮಂತ್ರಿ ಯವರು 2021ರ ಜೂನ್ 3 ರಂದು ವಿಶೇಷ ಪರಿಹಾರದ ಎರಡನೇ ಪ್ಯಾಕೇಜ್ ಅನ್ನು ಘೋಷಣೆ ಮಾಡಿದ್ದರು. ಇದರಲ್ಲಿ ಚಲನಚಿತ್ರೋದ್ಯಮ ಹಾಗೂ ಕಿರುತೆರೆ ಮಾಧ್ಯೇಮದಲ್ಲಿ ತೊಡಗಿಕೊಂಡಿರುವ ನೋಂದಾಯಿತ ಅಸಂಘಟಿತ ಕಾರ್ಮಿಕರಿಗೆ ತಲಾ ಮೂರು ಸಾವಿರ ರೂ. ಪರಿಹಾರ ನೀಡಲು ಸರ್ಕಾರವು ನಿರ್ಧರಿಸಿತ್ತು. ಸರ್ಕಾರದ ಈ ನಿರ್ಧಾರದಿಂದಾಗಿ ಇಪ್ಪತ್ತೆರಡು (22) ಸಾವಿರ ನೋಂದಾಯಿತ ಕಾರ್ಮಿಕರಿಗೆ ಅನುಕೂಲವಾಗಲಿದೆ. ಇದಕ್ಕಾಗಿ ಅಂದಾಜು ಆರು ಕೋಟಿ ಅರವತ್ತು ಲಕ್ಷ ರೂ. ಮೀಸಲಿರಿಸಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ. ಪಿ.ಎಸ್. ಹರ್ಷ ಅವರು ತಿಳಿಸಿದ್ದಾರೆ.E4eP j7VkAEfpUt

ಚಲನಚಿತ್ರ ರಂಗದವರು ಮತ್ತು ಕಿರುತೆರೆ ರಂಗದವರಿಗೆ ಆರ್ಥಿಕ ನೆರವನ್ನು ಆಧಾರ್ ಕಾರ್ಡ್ ಸಂಖ್ಯೆಯನ್ನು ಆಧರಿಸಿ ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲು ಅನುವಾಗುವಂತೆ ಸೇವಾಸಿಂಧು ವೆಬ್ಪೋರ್ಟಲ್ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ನಮೂನೆ ಮತ್ತು ಇನ್ನಿತರ ಷರತ್ತುಗಳಿಗಾಗಿ www.sevasindhu.karnataka.gov.in ಗೆ ಭೇಟಿ ನೀಡಿ ಪಡೆದುಕೊಳ್ಳಬಹುದು.

ಒಬ್ಬರಿಗೆ ಒಂದು ಅರ್ಜಿಯನ್ನು ಮಾತ್ರ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಸುವವರು ಸಂಬಂಧಿತ ಸಂಘಗಳಲ್ಲಿ ಸದಸ್ಯತ್ವ ಹೊಂದಿರಬೇಕು ಮತ್ತು ಅಲ್ಲಿಂದ ಕಡ್ಡಾಯವಾಗಿ ಶಿಫಾರಸ್ಸು ಪತ್ರ ಪಡೆದು ಅದನ್ನು ಸೇವಾಸಿಂಧು ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಬೇಕಾಗಿದೆ. ಹಾಗೆಯೇ, ಚಲನಚಿತ್ರ ಮಂದಿರಗಳಲ್ಲಿ ಕೆಲಸ ಮಾಡುವವರು ಭವಿಷ್ಯ ನಿಧಿ (ಪ್ರಾವಿಡೆಂಟ್ ಫಂಡ್) ಸಂಖ್ಯೆಯೊಂದಿಗೆ ಚಲನಚಿತ್ರ ಮಂದಿರದ ಮಾಲೀಕರ ಪತ್ರದೊಂದಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಆನ್ಲೈನ್ ಅರ್ಜಿಯು 2021ರ ಜುಲೈ 9ರ ವರೆಗೆ ಸೇವಾಸಿಂಧು ಪೋರ್ಟಲ್ನಲ್ಲಿ ಲಭ್ಯವಿದೆ. ಆರ್ಥಿಕ ನೆರವಿನ ಅರ್ಜಿ ಇಲ್ಲವೇ ಶಿಫಾರಸ್ಸು ಪತ್ರಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಯಾವುದೇ ಕಚೇರಿಗಳಲ್ಲಿ ಸ್ವೀಕರಿಸಲಾಗುವುದಿಲ್ಲ.

ಆರ್ಥಿಕ ನೆರವಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಮತ್ತು ಆನ್ಲೈನ್ನಲ್ಲಿ ಅರ್ಜಿಯನ್ನು ಭರ್ತಿ ಮಾಡಲು, ತಾಂತ್ರಿಕ ಮಾರ್ಗದರ್ಶನದ ಅಗತ್ಯವಿದ್ದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿಯಲ್ಲಿ ಸ್ಥಾಪಿಸಿರುವ ಸಹಾಯವಾಣಿಯ ಮೊಬೈಲ್ ಸಂಖ್ಯೆ 8904645529 ಅನ್ನು ಸಂಪರ್ಕಿಸಬಹುದು ಇಲ್ಲವೆ [email protected] ಗೆ ಇಮೇಲ್ ಮೂಲಕ ಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.