E4pTatIVoAgfSrL Copy

Defence minister: ಕಾರವಾರ ಕದಂಬ ನೌಕಾನೆಲೆಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಭೇಟಿ

Genaral STATE

ಕಾರವಾರ :- ಏಷ್ಯಾದ ಅತಿದೊಡ್ಡ ನೌಕಾನೆಲೆಯಾಗಿರುವ ಕಾರೌಾರದ ಐಎನ್‌ ಎಸ್‌ ಕದಂಬಕ್ಕೆ ಇಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಭೇಟಿ ನೀಡಿದ್ದರು.‌ ರಾಜನಾಥ್ ಸಿಂಗ್ ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್‌ ಜೊತೆ ಗೋವಾದಿಂದ ಹೆಲಿಕಾಪ್ಟರ್ ಮೂಲಕ ಐಎನ್‌ಎಸ್ ಕದಂಬ ನೌಕಾನೆಲೆಯ ಹೆಲಿಪ್ಯಾಡ್‌ಗೆ ಆಗಮಿಸಿದರು

ನೌಕಾನೆಲೆಯ ಸೀಬರ್ಡ್‌ ಯೋಜನೆಯ ಎರಡನೇ ಹಂತದ ಪ್ರಗತಿಯನ್ನು ಹಾಗೂ ಕದಂಬ ನೌಕಾನೆಲೆಯ ಮೂಲಸೌಕರ್ಯ ಅಭಿವೃದ್ಧಿಯನ್ನು ವೀಕ್ಷಿಸಿದರು. ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಕದಂಬ ಹೆಲಿಪ್ಯಾಡ್‌ ಗೆ ಬರುವ ಮುನ್ನಾ ಮೊದಲು ಪ್ರಾಜಕ್ಟ್‌ ಏರಿಯಾ ಮತ್ತು ಸೈಟ್‌ ಗಳ ವೈಮಾನಿಕ ಸಮೀಕ್ಷೆ ನಡೆಸಿದರು. ಸಚಿವರನ್ನು ಆಫೀಸರ್‌ ಕಮಾಡಿಂಗ್‌ ವೈಸ್‌ ಅಡ್ಮಿರಲ್‌ ಆರ್‌ ಹರಿಕುಮಾರ್‌ ಮತ್ತು ಕರ್ನಾಟಕ ನೌಕಾ ಪ್ರದೇಶದ ಫ್ಲಾಗ್‌ ಆಫೀಸರ್‌ ರಿಯಲ್‌ ಅಡ್ಮಿರಲ್‌ ಮಹೇಶ್‌ ಸಿಂಗ್‌ ಅವರು ರಕ್ಷಣಾ ಸಚಿವರನ್ನು ಭರಮಾಡಿಕೊಂಡರು.

ಬಳಿಕ ನೌಕಾಪ್ರದೇಶದ ಸರ್ವೇಕ್ಷಣೆ ನಡೆಸಿದ ಸಚಿವ ರಾಜನಾಥ ಸಿಂಗ್‌ಗೆ ಅಧಿಕಾರಿಗಳು ಎರಡನೇಯ ಹಂತದ ಕಾಮಗಾರಿ ಕುರಿತು ಮಾಹಿತಿ ನೀಡಿದರು. ಇದೇ ವೇಳೆ ಹಡಗುಗಳ ರಿಪೇರಿ ಕಾರ್ಯ ಕೈಗೊಳ್ಳುವ ಲಿಫ್ಟಿಂಗ್ ಯಂತ್ರಗಳ ಸಾಮರ್ಥ್ಯವನ್ನು ಪ್ರದರ್ಶಿಸಲಾಯಿತು‌. ಜೊತೆಗೆ ನೌಕಾ ಜಟ್ಟಿಯಲ್ಲಿನ ಅಭಿವೃದ್ಧಿ ಕಾರ್ಯಗಳನ್ನ ಪರಿಶೀಲಿಸಿದರು.

ನಂತರ ನೌಕಾನೆಲೆ ಸಿಬ್ಬಂದಿಗಾಗಿ ನೂತನವಾಗಿ ನಿರ್ಮಿಸಲಾದ ವಸತಿಗೃಹಕ್ಕೆ ಸಚಿವ ರಾಜನಾಥ ಸಿಂಗ್ ಭೇಟಿ ನೀಡಿದ್ದು ಅಲ್ಲಿನ ಮೂಲಭೂತ ಸೌಕರ್ಯಗಳು, ಇಂಧನ ದಕ್ಷತೆ, ತ್ಯಾಜ್ಯ ನಿರ್ವಹಣೆ ಹಾಗೂ ಪರಿಸರ ಸ್ನೇಹಿ ವ್ಯವಸ್ಥೆಗಳನ್ನು ವೀಕ್ಷಿಸಿದರು. ಈ ವೇಳೆ ನೌಕಾನೆಲೆಯ ಎರಡನೇಯ ಹಂತದ ಕಾಮಗಾರಿಯ ಕಾಂಟ್ರ್ಯಾಕ್ಟರ್, ಎಂಜಿನಿಯರ್, ಅಧಿಕಾರಿಗಳು ಹಾಗೂ ನೌಕಾನೆಲೆ ಸಿಬ್ಬಂದಿಯೊಂದಿಗೂ ಮಾತುಕತೆ ನಡೆಸಿದರು.