ನವದೆಹಲಿ:- ಜಮ್ಮು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ್ದಾರೆ ಎಂದು ಜಮ್ಮು-ಕಾಶ್ಮೀರ ರಾಜಕೀಯ ಪಕ್ಷಗಳ ನಾಯಕು ತಿಳಿಸಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆದ ಮಹತ್ವದ ಸಭೆಯಲ್ಲಿ ಜಮ್ಮು-ಕಾಶ್ಮೀರದ ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಭಾಗವಹಿಸುತ್ತಿದ್ದರು. ಮೋದಿಯವರೊಂದಿಗೆ ನಡೆದ ಸುದೀರ್ಘ ಚರ್ಚೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಈ ನಾಯಕರು ರಾಜ್ಯದ ಸ್ಥಾನ ಮಾನವನ್ನು ನೀಡುತ್ತೇವೆ ಎಂದು ಸಂಸತ್ತಿನಲ್ಲಿ ಭರವಸೆ ನೀಡಿದ್ದೆವು ಆಮಾತಿಗೆ ಕಟಿಬದ್ಧರಾಗಿದ್ದೇವೆ ಎಂದು ಪ್ರಧಾನಿ ತಿಳಿಸಿದ್ದಾರೆ ಎಂದರು.
ಇಂದಿನ ಸಭೆಯಲ್ಲಿ ಯಾವೆಲ್ಲಾ ಅಂಶಗಳು ಚರ್ಚೆಗೆ ಬರಲಿವೆ, ಯಾವ ಅಜೆಂಡಾ ನಿಗದಿ ಮಾಡಿರಲಿಲ್ಲ ಆದರೆ ನಮ್ಮ ಬೇಡಿಕೆಗಳಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಜಮ್ಮು-ಕಾಶ್ಮೀರ ಮತ್ತು ಗುಪ್ಕಾರ್ ಕೂಟದ ನಾಯಕರು ಹೇಳಿದ್ದಾರೆ
ಕೇಂದ್ರ ಸರ್ಕಾರ 2019ರ ಆಗಸ್ಟ್ 5ರಂದು ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ತೆಗೆದುಹಾಕಿ ಎರಡು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಘೋಷಿಸಿದ ನಂತರ ಕೇಂದ್ರ ಸರ್ಕಾರ ಮತ್ತು ಜಮ್ಮು-ಕಾಶ್ಮೀರದ ನಾಯಕರ ನಡುವೆ ನಡೆಯುತ್ತಿರುವ ಮೊದಲ ಉನ್ನತ ಮಟ್ಟದ ಮಾತುಕತೆ ಇದಾಗಿತ್ತು.
ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಗೃಹ ಕಾರ್ಯದರ್ಶಿ ಕೂಡ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕರೆದ ಸರ್ವಪಕ್ಷ ಸಭೆಯಲ್ಲಿ ಪಾಲ್ಗೊಳ್ಳಲು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥ ಮೆಹಬೂಬಾ ಮುಫ್ತಿ ಮತ್ತು ಬಿಜೆಪಿ ಮುಖಂಡರಾದ ರವೀಂದರ್ ರೈನಾ ಮತ್ತು ಕವಿಂದರ್ ಗುಪ್ತಾ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ರಾಜಕೀಯ ಮುಖಂಡರು ಭಾಗವಹಿಸಿದ್ದರು.