ಚಿತ್ರದುರ್ಗ ನಗರದ ಸರೋಜ ಭಾಯಿ ಕಲ್ಯಾಣ ಮಂಟಪದ ಬಳಿ ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನೂತನವಾಗಿ ನಿರ್ಮಿಸಿದ ಕಿರು ಉದ್ಯಾನವನ್ನು ನಗರಾಭಿವೃದ್ಧಿ ಸಚಿವರಾದ ಶ್ರೀ ಬಿ.ಎ.ಬಸವರಾಜ ಸಸಿ ನೆಡುವ ಮೂಲಕ ಉದ್ಘಾಟಿಸಿದರು. ನಂತರ ನಗರದಲ್ಲಿ ಹಿರಿಯ ನಾಗರಿಕರಿಗೆ ಕೋವಿಡ್-19 ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಸಚಿವರು ಚಾಲನೆ ನೀಡಿದರು.
ಸಚಿವರ ಪ್ರತಿಕ್ರಿಯೆ..
ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಕುರ್ಚಿ ಕಿತ್ತಾಟ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು ಸಿದ್ದರಾಮಯ್ಯ , ಡಿಕೆಶಿ ಯಾರು ಬೇಕಾದರೂ ಸಿಎಂ ಆಗಲಿ ಅದು ಅವ್ರ ಪಕ್ಷದ ಆಂತರಿಕ ವಿಚಾರ ಅವರ ಪಕ್ಷದ ವಿಚಾರ ನಾನು ಮಾತಾಡಲ್ಲ ಎಂದರು.
ನಮ್ಮ ಮುಖ್ಯಮಂತ್ರಿ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ, ನಾನು ರಾಜ್ಯಾದ್ಯಂತ ಎರಡು ಮೂರು ಬಾರಿ ಪ್ರವಾಸ ಮಾಡಿದ್ದೇನೆ. ನಮ್ಮ ಪಕ್ಷದ ಸಂಘಟನೆ, ಸಿಎಂ, ಅಧ್ಯಕ್ಷರು ನೀಡಿದ ಜವಾಬ್ದಾರಿಗೆ ಬದ್ಧನಾಗಿರುತ್ತೇನೆ. ಮುಂದಿನ ಚುನಾವಣೆಯನ್ನು ನಾವೆಲ್ಲಾ ಒಗ್ಗಟ್ಟಾಗಿ ಕೆಲಸ ಮಾಡ್ತೇವೆ ಎಂದರು.
ಚಿತ್ರದುರ್ಗ ರಿಂಗ್ ರೋಡ್ ಅಭಿವೃದ್ಧಿಗೆ ಕ್ರಮವಹಿಸಲಅಗುವುದು,ಯೂಜಿಡಿ ಕಾಮಗಾರಿ ಸಂಪೂರ್ಣಗೊಳಿಸಲು ನಿರ್ಧಾರ ಮಾಡಲಾಗಿದೆ ಅಕ್ರಮ ಲೇಔಟ್ ನಿರ್ಮಾಣ ದಾಖಲೆ ಸಿಕ್ಕರೆ ದಂಧೆಕೋರರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲು ಅನುಕೂಲವಾಗುತ್ತದೆ ಎಂದು ಸಚಿವರು ಹೇಳಿದರು.
ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಗರದಲ್ಲಿ ನಡೆದಿರುವುದು ಕಾಮಗಾರಿ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ನಗರಾಭಿವೃದ್ಧಿ ಸಚಿವರಾದ ಶ್ರೀ ಬಿ.ಎ.ಬಸವರಾಜ ಅವರು ಇಂದು ನಡೆಸಿದರು.
ಚಿತ್ರದುರ್ಗದ ಶಾಸಕರಾದ ಶ್ರೀ ಜಿ.ಎಚ್. ತಿಪ್ಪಾರೆಡ್ಡಿ, ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ, ಪೋಲೀಸ್ ವರಿಷ್ಟಾಧಿಕಾರಿ ಜಿ.ರಾಧಿಕಾ, ಜಿಲ್ಲಾ ಪಂಚಾಯತ ಸಿಇಒ ನಂದಿನಿ ದೇವಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಬದರಿನಾಥ, ಅಯುಕ್ತರಾದ ಸುರೇಶ್ ಸೇರಿದಂತೆ ಜಿಲ್ಲೆಯ ಹಲ ಜನಪ್ರತಿನಿಧಿಗಳು ಇದೇ ವೇಳೆ ಉಪಸ್ಥಿತರಿದ್ದರು.