ನಾಡಪ್ರಭು ಕೆಂಪೇಗೌಡರ 512ನೇ ಜಯಂತಿ :
ರಾಜ್ಯ ಸರ್ಕಾರವು ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಪ್ರತಿ ವರ್ಷ ಜೂನ್ 27 ರಂದು ಆಚರಿಸಲಾಗುತ್ತಿದೆ. ಅದರಂತೆ 512ನೇ ನಾಡ ಪ್ರಭು ಕೆಂಪೇಗೌಡರ ಜಯಂತಿಯ ಅಂಗವಾಗಿ ಕೋವಿಡ್ ಹಿನ್ನಲೆಯಲ್ಲಿ ಸರಳವಾಗಿ ಬಿಬಿಎಂಪಿಯ ಕೇಂದ್ರ ಕಛೇರಿಯ ಮುಂಭಾಗದಲ್ಲಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಹಾಗೂ ಕೆಂಪೇಗೌಡರ ಸೊಸೆ ಮಹಾತ್ಯಾಗಿ ಲಕ್ಷೀದೇವಿ ಪ್ರತಿಮೆಗೆ ಇಂದು ಮಾನ್ಯ ಆಡಳಿತಗಾರರು ಶ್ರೀ ರಾಕೇಶ್ ಸಿಂಗ್ ಹಾಗೂ ಮಾನ್ಯ ಮುಖ್ಯ ಆಯುಕ್ತರು ಶ್ರೀ ಗೌರವ್ ಗುಪ್ತ ರವರು ಮಾಲಾರ್ಪಣೆ ಹಾಗೂ ಪುಷ್ಪಾರ್ಪಣೆ ನೆರವೇರಿಸಿದರು.
ತದನಂತರ ನಾಡಪ್ರಭು ಕೆಂಪೇಗೌಡರ ಸೊಸೆ ಮಹಾತ್ಯಾಗಿ ಲಕ್ಷ್ಮೀದೇವಿ ರವರ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಪುಷ್ಪಾರ್ಪಣೆ ನೆರವೇರಿಸಿದರು.
ಈ ವೇಳೆ ವಿಶೇಷ ಆಯುಕ್ತರುಗಳಾದ ಶ್ರೀಮತಿ ತುಳಸಿ ಮದ್ದಿನೇನಿ, ಶ್ರೀ ಡಿ.ರಂದೀಪ್, ಶ್ರೀ ದಯಾನಂದ್, ಡಾ. ಹರೀಶ್ ಕುಮಾರ್, ಶ್ರೀ ಮನೋಜ್ ಜೈನ್, ಶ್ರೀ ಬಸವರಾಜು, ಶ್ರೀ ರವೀಂದ್ರ, ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀ ಜೆ.ಮಂಜುನಾಥ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.