DSC 5623 e1624889719232

Tumkur: ಬೆಳೆ ವಿವರ ದಾಖಲಿಸಲು ಬೆಳೆ ಸಮೀಕ್ಷೆ ಆ್ಯಪ್ ಬಿಡುಗಡೆ

DISTRICT NEWS ತುಮಕೂರು

ಬೆಳೆ ವಿವರ ದಾಖಲಿಸಲು ಬೆಳೆ ಸಮೀಕ್ಷೆ ಆ್ಯಪ್ ಬಿಡುಗಡೆ

ತುಮಕೂರು (ಕವಾ)ಜೂ.28: ಜಿಲ್ಲೆಯ ತಿಪಟೂರು, ಚಿಕ್ಕನಾಯಕನಹಳ್ಳಿ ತುರುವೇಕೆರೆ ಮತ್ತು ಕುಣಿಗಲ್ ತಾಲ್ಲೂಕುಗಳ ರೈತರು ಪೂರ್ವ ಮುಂಗಾರು ಹಂಗಾಮಿನಲ್ಲಿ ಬೆಳೆದ ತಮ್ಮ ಜಮೀನಿನ ಬೆಳೆ ವಿವರಗಳನ್ನು ದಾಖಲಿಸಲು ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಬಿಡುಗಡೆ ಮಾಡಲಾಗಿದೆÀ ಎಂದು ಜಂಟಿ ಕೃಷಿ ನಿರ್ದೇಶಕಿ ರಾಜಸುಲೋಚನಾ ತಿಳಿಸಿದ್ದಾರೆ.
ಬೆಳೆ ಸಾಲ, ಬೆಳೆ ವಿಮೆ, ಬೆಂಬಲ ಬೆಲೆ ಖರೀದಿ ಮತ್ತು ಬೆಳೆ ಪರಿಹಾರ ಹಾಗೂ ಸರ್ಕಾರದ ಮತ್ತಿತರ ಯೋಜನೆಯ ಸವಲತ್ತುಗಳನ್ನು ಪಡೆಯಲು ಬೆಳೆ ಸಮೀಕ್ಷೆಯ ಮಾಹಿತಿಯೇ ಮಾನದಂಡವಾಗಿರುವುದರಿಂದ ಜಮೀನಿನಲ್ಲಿ ಬೆಳೆದ ಬೆಳೆಗಳ ವಿವರವನ್ನು ರೈತರೇ ರೈತರ ಮೊಬೈಲ್ ಆಪ್ ಮೂಲಕ ದಾಖಲಿಸಿ ಬೆಳೆ ಸಮೀಕ್ಷೆ ಮಾಡಬೇಕೆಂದು ಮನವಿ ಮಾಡಿದ್ದಾರೆ. ರೈತರ ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್ ಬಳಸಲು ಆಯಾ ಗ್ರಾಮಕ್ಕೆ ನೇಮಕವಾದ ಖಾಸಗಿ ನಿವಾಸಿಗಳ ಸಹಾಯ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.
ಆ್ಯಪ್ ಬಳಸುವ ವಿಧಾನ: ರೈತರು ಪ್ಲೇ ಸ್ಟೋರ್‍ನಲ್ಲಿ ಪೂರ್ವ ಮುಂಗಾರು ರೈತರ ಬೆಳೆ ಸಮೀಕ್ಷೆ 2021-22 ಆ್ಯಪ್ ಡೌನ್‍ಲೋಡ್ ಮಾಡಿಕೊಂಡು, ಆರ್ಥಿಕ ವರ್ಷ ಹಾಗೂ ಋತು ದಾಖಲಿಸಬೇಕು. ರೈತರು ತಮ್ಮ ಹೆಸರು, ಮೊಬೈಲ್ ಸಂಖ್ಯೆ ನಮೂದಿಸಿ ಸಕ್ರಿಯಗೊಳಿಸಿದಾಗ ನಮೂದಿಸಿದ ಮೊಬೈಲ್ ಸಂಖ್ಯೆಗೆ ಔಖಿP ಬರುತ್ತದೆ. ನಂತರ  ದಾಖಲಿಸಿ ಸಲ್ಲಿಸಬೇಕು ಹಾಗೂ ಮಾಸ್ಟರ್ ವಿವರ, ಪಹಣಿ ಮತ್ತು ಮಾಲೀಕರ ವಿವರ, ಪಾಲಿಗಾನ್ ಹಾಗೂ ಜಿ.ಐ.ಎಸ್. ಮ್ಯಾಪ್ ಡೌನ್‍ಲೋಡ್ ಮಾಡಿಕೊಳ್ಳಬೇಕು. ನಂತರ ಬೆಳೆ ಸರ್ವೆ ಪ್ರಾರಂಭಿಸಿ ಕ್ಲಿಕ್ ಮಾಡಿ ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿ, ಸರ್ವೆ ನಂಬರ್ ನಮೂದಿಸಬೇಕು. ಹಿಸ್ಸಾ ಇದ್ದರೆ ಅದನ್ನು ಆಯ್ಕೆ ಮಾಡಬೇಕು. ನಂತರ ಮಾಲೀಕರ ಹೆಸರು ಆಯ್ಕೆ ಮಾಡಿ ಕ್ಷೇತ್ರವನ್ನು ನಮೂದಿಸಬೇಕು. ಮಾಲೀಕರ ಪರವಾಗಿ ಇನ್ನೊಬ್ಬರು ಬೆಳೆ ದಾಖಲೆ ಮಾಡುತ್ತಿದ್ದರೆ, ರೈತರ ಪರವಾಗಿ ಬೆಳೆ ಮಾಹಿತಿಯನ್ನು ದಾಖಲಿಸುತ್ತಿದ್ದೇನೆಂದು ಆಯ್ಕೆ ಮಾಡಬೇಕು. ರೈತರ ಪರವಾಗಿ ದಾಖಲಿಸುತ್ತಿದ್ದರೆ ಸದರಿ ರೈತರ ಮೊಬೈಲ್ ನಂಬರ್ ದಾಖಲಿಸಿ ಮಾಹಿತಿಯನ್ನು ಡೌನ್‍ಲೋಡ್ ಮಾಡಬೇಕು. ಸದರಿ ರೈತರ ಹೊಲಕ್ಕೆ ಹೋಗಿ ಸರ್ವೆ ನಂಬರ್, ಗಡಿ ರೇಖೆಯೊಳಗೆ ನಿಂತು ವಿವರವನ್ನು ದಾಖಲಿಸಿ, ಫೋಟೋ ತೆಗೆದು ಮಾಹಿತಿಯನ್ನು ಸೇರಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆ ಮತ್ತು ಸಾಂಖ್ಯಿಕ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬೇಕೆಂದು ಮನವಿ ಮಾಡಿದ್ದಾರೆ.