IMG 20210630 195901

ಬೆಂಗಳೂರನ್ನು ವಿಶ್ವದರ್ಜೆಯ ಹಸಿರು ನಗರವಾಗಿ ರೂಪಿಸಲು ನಮ್ಮ ಸರ್ಕಾರ ಬದ್ಧ…!

Genaral STATE ಬೆಂಗಳೂರು

 

ಬೆಂಗಳೂರನ್ನು ವಿಶ್ವದರ್ಜೆಯ ಹಸಿರು ನಗರವಾಗಿ ರೂಪಿಸಲು ನಮ್ಮ ಸರ್ಕಾರ ಬದ್ಧ- ಬಿ.ಎಸ್ ವೈ

ಬೆಂಗಳೂರು, ಜೂನ್ 30 (ಕರ್ನಾಟಕ ವಾರ್ತೆ)ಬೆಂಗಳೂರಿನ ಜನರ ಜೀವನ ಮಟ್ಟದಲ್ಲಿ ಎಲ್ಲ ರೀತಿಯ ರೀತಿಯಲ್ಲಿಯೂ ಉತ್ಕøಷ್ಟತೆಯನ್ನು ಸಾಧಿಸುವ ಮೂಲಕ ಬೆಂಗಳೂರನ್ನು ವಿಶ್ವದರ್ಜೆಯ ನಗರವಾಗಿ ರೂಪಿಸುವುದರ, ಜೊತೆಗೆ ಹಸಿರು ಬೆಂಗಳೂರು ಎಂಬ ಹೆಗ್ಗಳಿಕೆಯನ್ನು ಕಾಪಾಡಿಕೊಳ್ಳಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಇಂದು “ಕಾಡುಗೋಡಿ ವೃಕ್ಷೋದ್ಯಾನ” , ಕನ್ನಮಂಗಲ “ಸಸ್ಯಶಾಸ್ತ್ರೀಯ ತೋಟ” ,ಕನ್ನಮಂಗಲ ಕೆರೆ ಉದ್ಘಾಟನಾ ಕಾರ್ಯಕ್ರಮ ಹಾಗೂ “ಎಲೆ ಮಲ್ಲಪ್ಪ ಶೆಟ್ಟಿ ಕೆರೆ” ಪರಿವೀಕ್ಷಣೆ-ಜನಪದರು ರಂಗ ಮಂದಿರ ಉದ್ಘಾಟನೆ ಸಮಾರಂಭಗಳಲ್ಲಿ ಪಾಲ್ಗೊಂಡ ಅವರು ನಂತರ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ ದರು.

ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಆದ್ಯತೆ ನೀಡಿದ್ದು, ಮೂಲಸೌಕರ್ಯ ಅಭಿವೃದ್ಧಿ, ಪರಿಸರ ಸಂರಕ್ಷಣೆ ಹಾಗೂ ಹಸರೀಕರಣ, ಸ್ವಚ್ಚತೆ ಹಾಗೂ ಸುಗಮ ಸೇವಾ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸಲಾಗುವುದು ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.IMG 20210630 195844

ಪರಿಸರ ಸಂರಕ್ಷಣೆ, ಹಸಿರೀಕರಣಗಳ ಕಡೆ ಇಂದು ಬೆಂಗಳೂರು ಮತ್ತೊಂದು ದೊಡ್ಡ ಹೆಜ್ಜೆ ಇಟ್ಟಿದೆ ಎಂದರೆ ಅತಿಶಯೋಕ್ತಿಯಾಗಲಾರದು. ಕಾಡುಗೋಡಿಯ ಟ್ರೀ-ಪಾರ್ಕ್, ಕನ್ನಮಂಗಲದ ಸಸ್ಯೋದ್ಯಾನ, ಅಭಿವೃದ್ಧಿ ಪಡಿಸಲಾದ ಕನ್ನಮಂಗಲ ಕೆರೆ, ನಿಂಬೆಕಾಯಿಪುರದ ಗ್ರಾಮದ “ಜನಪದರು” ರಂಗಮಂದಿರವನ್ನು ಅತ್ಯಂತ ಸಂತೋಷದಿಂದ ಉದ್ಘಾಟಿಸಿದ್ದೇನೆ.
ಕಾಡುಗೋಡಿಯಲ್ಲಿ ಅರಣ್ಯ ಇಲಾಖೆಯ ವತಿಯಿಂದ 22 ಎಕರೆಯಲ್ಲಿ ನಿರ್ಮಾಣವಾಗಿರುವ ಟ್ರೀ ಪಾರ್ಕ್ ಹಸಿರು ಬೆಂಗಳೂರು ನಿರ್ಮಾಣಕ್ಕೆ ಪೂರಕವಾಗಿದೆ ಎಂದರು.

ಬೆಂಗಳೂರು ಮಿಷನ್-2022ರಲ್ಲಿ ಬೆಂಗಳೂರು ನಾಗರಿಕರಿಗೆ ಉತ್ತಮ ಹಸಿರು ಪರಿಸರವನ್ನು ಒದಗಿಸುವ ನಮ್ಮ ವಚನಕ್ಕೆ ಬದ್ಧರಾಗಿರುವುದಕ್ಕೆ ಈ ವೃಕ್ಷೋದ್ಯಾನ ಸಾಕ್ಷಿಯಾಗಿದೆ. ಈ ವೃಕ್ಷೋದ್ಯಾನದಲ್ಲಿ ರಾಶಿವನ, ನಕ್ಷತ್ರವನ, ಹಾಗೂ ಔಷಧಿಯ ಸಸಿಗಳನ್ನು ನೆಡಲಾಗಿದ್ದು, ಸಾರ್ವಜನಿಕರ ವಿಹಾರಕ್ಕೆ ಅನುಕೂಲತೆಗಳು ಹಿರಿಯ ನಾಗರಿಕರಿಗೆ ಒಪನ್-ಜಿಮ್, ಮಕ್ಕಳಿಗೆ ಆಟದ ಅಂಗಳ ಹಾಗೂ ನೈಸರ್ಗಿಕ ಪಥಗಳ ನಿರ್ಮಾಣವಾಗಿರುವುದು ಈ ಭಾಗದ ಸಾವಿರಾರು ನಾಗರಿಕರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಬೆಂಗಳೂರು ಪೂರ್ವದ ಕನ್ನಮಂಗಲದಲ್ಲಿ ತೋಟಗಾರಿಕೆ ಇಲಾಖೆಯ ವತಿಯಿಂದ ನಿರ್ಮಿಸಿರುವ 70ಎಕರೆ ಸಸ್ಯಶಾಸ್ತ್ರೀಯ ತೋಟ (ಮಿನಿ ಲಾಲ್‍ಬಾಗ್) ಇನ್ನು ಮುಂದೆ ಮಾಜಿ ಪ್ರದಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಯವರ ಸ್ಮರಣಾರ್ಥ *ಅಟಲ್ ಬಿಹಾರಿ ಸಸ್ಯಶಾಸ್ತ್ರೀಯ ತೋಟ* ಎಂದು ಕರೆಯಲ್ಪಡುತ್ತದೆ ಎಂದು ಮುಖ್ಯಮಂತ್ರಿಗಳು ಘೋಷಿಸಿದರು.

ಉತ್ಕøಷ್ಟ ತಳಿಯ ಹಲವು ಹಣ್ಣುಗಳ ಔಷಧಿಗಳ ಗಿಡಗಳು, ಅಲಂಕಾರಿಕಾ ಹಾಗೂ ಸುಗಂಧಿತ ಸಸ್ಯಗಳನ್ನು ಒಳಗೊಂಡ ಈ ಸಸ್ಯ ತೋಟವು ಜೀವ ವೈವಿಧ್ಯತೆಯ ತಾಣವಾಗಿದೆ ಎಂದು ಅವರು ಹೇಳಿದರು.

ಈಗಾಗಲೇ ಇರುವ ಸಸ್ಯ ಸಂಪತ್ತಿನ ಜೊತೆ, ನಾಗರಿಕರ ಅನುಕೂಲಕ್ಕಾಗಿ ಹಲವಾರು ಸೌಕರ್ಯಗಳನ್ನು ಅಭಿವ್ರದ್ಧಿ ಪಡಿಸಲಾಗಿದೆ. ವಾಯುವಿಹಾರಿಗಳ ಪಥ, ಕುಡಿಯುವ ನೀರಿನ ಘಟಕ, ಶೌಚಾಲಯಗಳು ಒಳಗೊಂಡಂತೆ ಹಲವು ಅಭಿವೃದ್ಧಿ ಕಾರ್ಯಗಳು ಹಮ್ಮಿಕೊಳ್ಳಲಾಗಿದೆ.

ಮುಂದಿನ ದಿನಗಳಲ್ಲಿ ಈ ಸಸ್ಯಶಾಸ್ತ್ರೀಯ ತೋಟವು ಸಸ್ಯಕಾಶಿಯಾಗಿ ಸಾರ್ವಜನಿಕರಿಗೆ ಶುದ್ದ ಹವೆ, ಆರೋಗ್ಯವಾದ ಬದುಕು ನೀಡಲು ಸಹಾಯವಾಗುತ್ತದೆ ಎಂದು ತಿಳಿಸಿದರು.

ಮಹದೇವಪುರದ ಬಿದರಹಳ್ಳಿ ಹೋಬಳಿಯಲ್ಲಿರುವ ಕನ್ನಮಂಗಲ ಕೆರೆಯನ್ನು ಉದ್ಘಾಟನೆ ಮಾಡಿರುವುದು ನನಗೆ ಸಂತೋಷ ತಂದಿದೆ ಎಂದ ಅವರು ಹದಿನೆಂಟು ಎಕರೆ ಪ್ರದೇಶದಲ್ಲಿರುವ ಕನ್ನಮಂಗಲ ಕೆರೆಯು ಸುಂದರವಾಗಿ ರೂಪುಗೊಂಡಿದೆ, ಸಚಿವರು ಅರವಿಂದ ಲಿಂಬಾವಳಿಯವರ ನೇತೃತ್ವದಲ್ಲಿ ಸ್ಥಳೀಯ ಸ್ವಯಂ ಸೇವಕ ನಿವಾಸಿಗಳ ಗುಂಪಿನ ಸಹಕಾರದೊಂದಿಗೆ ಹೊಸ ರೂಪ ಹೊಂದಿದೆ. ಸ್ಥಳೀಯ ನಿವಾಸಿಗಳು ಹಾಗೂ ಹಲವು ಸಂಸ್ಥೆಗಳು ಇಡೀ ಕೆರೆಯನ್ನು ಸ್ವಚ್ಚಗೊಳಿಸಿ ಅತಿಕ್ರಮಣವನ್ನು ನಿವಾರಿಸಿ ಅಂತರ್ಜಲ ಮಟ್ಟವನ್ನು ಏರಿಸಲು ಕ್ರಮ ಕೈಗೊಂಡಿರುವುದು ಶ್ಲಾಘನೀಯ ಎಂದು ಅವರು ಹೇಳಿದರು.
ಹಳ್ಳಿಗಳಿಗೆ ಅಂತರ್ಜಲದ ಮರುಪೂರಣವನ್ನು ಹೆಚ್ಚಸಲು ಈ ಕೆರೆ ನೆರವಾಗಲಿದೆ ಎಂದರು.IMG 20210630 195907

ಕೋವಿಡ್-19 ಎರಡನೇ ಅಲೆಯ ಸಂದರ್ಭದಲ್ಲಿ ಅರವಿಂದ ಲಿಂಬಾವಳಿಯವರ ಕಾರ್ಯದ ಬಗ್ಗೆ ಪ್ರಸ್ತಾಪಿಸಿದ ಅವರು, ಸಚಿವ ಲಿಂಬಾವಳಿ ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಟ್ರೈಯಾಜ್ ಸೆಂಟರ್‍ಗಳು ಸ್ಥಾಪನೆ ಮಾಡಲು ವಹಿಸಿರುವ ಶ್ರಮ ಮತ್ತು ಜನರಿಗೆ ಕೋವಿಡ್ ಲಸಿಕೆ ಹಾಕಿಸುವ ಕಾರ್ಯದಲ್ಲಿ ತೋರಿರುವ ಬದ್ಧತೆ ಮತ್ತು ಈ ಭಾಗದ ಬಡ ಜನರಿಗೆ ಆಹಾರ ದಿನಸಿ/ ಕಿಟ್‍ಗಳನ್ನು ವಿತರಿಸುವಲ್ಲಿ ಹೆಚ್ಚಿನ ಆಸಕ್ತಿ ವಹಿಸಿ ಶ್ರಮಿಸಿದ್ದಾರೆ. ಇದಕ್ಕಾಗಿ ಸಚಿವರನ್ನು ಹಾಗೂ ಇದರಲ್ಲಿ ಕೈಜೋಡಿಸಿದ ಎಲ್ಲಾ ಸಂಘ ಸಂಸ್ಥೆಗಳನ್ನು ನಾನು ಅಭಿನಂದಿಸುತ್ತೇನೆ ಎಂದ ಮುಖ್ಯ ಮಂತ್ರಿಗಳು *ಇತರ ಜನಪ್ರತಿನಿಧಿ ಗಳಿಗೆ ಸಚಿವ ಅರವಿಂದ ಲಿಂಬಾವಳಿ ಅವರ ಅಭಿವೃದ್ಧಿ ಕಾರ್ಯಕ್ರಮಗಳು ಮಾದರಿಯಾಗಿದೆ* ಎಂದು ಸಚಿವ ಲಿಂಬಾವಳಿ ಅವರ ಕಾರ್ಯವನ್ನು ಮುಕ್ತಕಂಠದಿಂದ ಪ್ರಶಂಸಿಸಿದರು .

ಈ ಭಾಗದ ಸಂಸ್ಕøತಿಯ ಪ್ರತೀಕವಾಗಿ ಸಿದ್ದಗೊಂಡು ನಿಂತಿರುವ ನಿಂಬೆಕಾಯಿಪುರದ ಗ್ರಾಮದ “ಜನಪದರು” ರಂಗಮಂದಿರವು ಈ ಭಾಗದಲ್ಲಿ ಸಾಹಿತ್ಯ ಮತ್ತು ಸಾಂಸ್ಕøತಿಕ ಚಟುವಟಿಕೆಗಳ ಕೇಂದ್ರವಾಗಿ ಬೆಳೆಯಲಿ ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದೊಂದಿಗೆ ರೂ.3.5 ಕೋಟಿ ವೆಚ್ಚದಲ್ಲಿ ಒಂದು ಎಕರೆ ವಿಶಾಲ ಜಾಗದಲ್ಲಿ ನಿರ್ಮಿಸಿರುವ ಈ ರಂಗಮಂದಿರ ಅತ್ಯಂತ ವಿಶಿಷ್ಟವಾದದ್ದು, ಏಕೆಂದರೆ ಭಾರತೀಯ ರಂಗಭೂಮಿ ಮಟ್ಟಿಗೆ ತಿರುಗು ರಂಗಮಂದಿರವನ್ನು (ರಿವಾಲ್ವಿಂಗ್ ಸ್ಟೇಜ್) ಹೊಂದಿರುವ ಏಕೈಕ ರಂಗಮಂದಿರ ಎಂಬ ಹೆಗ್ಗಳಿಕೆ ಇದರದ್ದಾಗಿದೆ ಎಂದು ಅವರು ರಂಗಮಂದಿರ ನಿರ್ಮಾಣ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸಭಾ ಕಾರ್ಯಕ್ರಮದ ನಂತರ ಮಹದೇವಪುರ ಕ್ಷೇತ್ರದ ಮತ್ತೊಂದು ಹಳೆಯ ಮತ್ತು ಇತಿಹಾಸ ಪ್ರಸಿದ್ದವಾದ “ಎಲೆ ಮಲ್ಲಪ್ಪ ಶೆಟ್ಟಿ ಕೆರೆ” ಪರಿವೀಕ್ಷಣೆ ಮಾಡಿದ ಮುಖ್ಯಮಂತ್ರಿಗಳು 508 ಎಕರೆ ವಿಸ್ತೀರ್ಣದ ಈ ಕೆರೆಯನ್ನು ಬೆಂಗಳೂರು – ಮಿಷನ್-2022 ರ ಅಡಿಯಲ್ಲಿ ಅಭಿವೃದ್ಧಿ ಪಡಿಸುವುದರ ಬಗ್ಗೆ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಈ ಕುರಿತಂತೆ ಸಮಗ್ರವಾದ ಅಭಿವೃದ್ಧಿ ನೀಲ ನಕ್ಷೆ ಸಿದ್ಧಪಡಿಸಿ, ಶೀಘ್ರದಲ್ಲಿಯೇ ಕಾರ್ಯ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.
ಸಚಿವ ಅರವಿಂದ ಲಿಂಬಾವಳಿ ಮಾತನಾಡಿ ಮಹದೇವಪುರ ಕ್ಷೇತ್ರವನ್ನು ಅಭಿವೃದ್ಧಿಯ ಜೊತೆಗೆ ಹಸಿರೀಕರಣ ಮಾಡಲು ನಿರ್ಧಾರ ಮಾಡಿದ್ದೇವೆ ಕನ್ನಮಂಗಲ ಸಸ್ಯ ತೋಟ, ಕಾಡುಗೋಡಿ ವೃಕ್ಷೋದ್ಯಾನ ಹೇಗೆ ಇದಕ್ಕೆ ಪೂರಕವಾಗಿದೆ ಯೊ ಹಾಗೆಯೇ ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ಜನಪದರು ರಂಗಮಂದಿರ ನೆರವಾಗಲಿದೆ ಎಂದರು. ಬೆಂಗಳೂರಿನ ಅತಿ ದೊಡ್ಡ ಕೆರೆಗಳಲ್ಲಿ ಎರಡನೆಯದು ಎಂದು ಹೆಸರು ಪಡೆದ ಎಲ್ಲೇ ಮಲ್ಲಪ್ಪ ಶೆಟ್ಟಿಕೆರೆ ಅಭಿವೃದ್ಧಿಗೆ ಸರ್ಕಾರ ಆರ್ಥಿಕ ನೆರವು ನೀಡಬೇಕೆಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ತೋಟಗಾರಿಕೆ ಇಲಾಖೆ ಸಚಿವ ಆರ್.ಶಂಕರ್, ಸರ್ಕಾರದ ಅಪರ ಮುಖ್ಯಕಾರ್ಯದರ್ಶಿಗಳು ಮತ್ತು ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮಾ , ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್,ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಸಂದೀಪ್ ದವೆ, ಬೆಂಗಳೂರು ನಗರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಶ್ರೀಮತಿ ಮಂಜುಳಾ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಂಜಯ್ ಮೋಹನ್ , ಅಪರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯ್ಕುಮಾರ್ ಗೋಗಿ, ಬಿಬಿಎಂಪಿ ಮುಖ್ಯ ಆಡಳಿತಾಧಿಕಾರಿ ಗೌರವ್ ಗುಪ್ತ, ಬೆಂಗಳೂರು ನಗರ ಜಿಲ್ಲಾಧಿಕಾರಿ ಜೇ. ಮಂಜುನಾಥ್ ಸೇರಿದಂತೆ ಹಲವಾರು ಗಣ್ಯರು ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.