*ಪದಾಧಿಕಾರಿಗಳ ನೇಮಕಕ್ಕೆ ವೀಕ್ಷಕರ ನೇಮಕ: ಡಿ.ಕೆ. ಶಿವಕುಮಾರ್*
ಬೆಂಗಳೂರು: – ಪಕ್ಷದ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳ ನೇಮಕ ಸಂಬಂಧ ವೀಕ್ಷಕರ ನೇಮಕ ಮಾಡಲಾಗುತ್ತದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್ ಅವರು, ‘ಈ ವಿಚಾರವಾಗಿ ಜಿಲ್ಲಾಧ್ಯಕ್ಷರು, ಶಾಸಕರುಗಳಿಗೆ ಸೂಚನೆ ನೀಡಿದ್ದು, ಅವರ ಅಭಿಪ್ರಾಯ ಪಡೆಯುತ್ತೇವೆ.
ಒಂದೆರಡು ದಿನಗಳಲ್ಲಿ ವೀಕ್ಷಕರ ನೇಮಕ ಮಾಡಲಾಗುತ್ತದೆ. ವೀಕ್ಷಕರುಗಳು ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡಲಿದ್ದಾರೆ. ಕೆಲವು ಕಡೆಗಳಲ್ಲಿ ಒಂದಷ್ಟು ವಿಚಾರಗಳನ್ನು ಇತ್ಯರ್ಥ ಮಾಡಬೇಕಿದೆ. ಅವುಗಳನ್ನು ಪರಿಶೀಲಿಸಿ ಸರಿಪಡಿಸುತ್ತೇನೆ’ ಎಂದರು.
ನಾನು ಕೂಡ ಕೆಲವು ಕಡೆ ಹೋಗುತ್ತೇನೆ. ಅದಕ್ಕೆ ಮೊದಲು ಒಂದಷ್ಟು ವಿಚಾರಗಳನ್ನು ಅಂತಿಮಗೊಳಿಸಲಾಗುವುದು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ನೂತನ ಕಚೇರಿ ಉದ್ಘಾಟಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ನೂತನ ಕಚೇರಿಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಆವರಣದಲ್ಲಿ ಬುಧವಾರ ಉದ್ಘಾಟಿಸಿದರು. ಕೇಂದ್ರದ ಮಾಜಿ ಸಚಿವ, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹಮದ್, ಎಂಎಲ್ಸಿ ಎಸ್. ರವಿ, ಡಿಸಿಸಿ ಅಧ್ಯಕ್ಷ ಮುನಿಶಾಮಣ್ಣ ಮತ್ತಿತರರು ಹಾಜರಿದ್ದರು.