IMG 20210720 WA0013

ನವದೆಹಲಿ: ಕಾಂಗ್ರೆಸ್ ಸಾಮೂಹಿಕ ನಾಯಕತ್ವ ಜಪ….

NATIONAL National - ಕನ್ನಡ

ದೆಹಲಿ: ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೇ ಬಿರುಕು, ಭಿನ್ನಾಭಿಪ್ರಾಯ ಇಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪಕ್ಷದಲ್ಲಿ ಒಡಕು ಇದೆ ಎಂಬ ಮಾತುಗಳು ಸತ್ಯಕ್ಜೆ ದೂರ ಎಂದರು.

ನಾವೀಗ ಪ್ರತಿಪಕ್ಷದಲ್ಲಿ ಇದ್ದೇವೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಲಿದೆ. ಹೀಗಿರುವಾಗ ಒಡಕಿನ ಮಾತೇಕೆ ಬರುತ್ತದೆ ಎಂದರು.

ರಾಜ್ಯ ಕಾಂಗ್ರೆಸ್ ಪ್ರಸ್ತುತ ಬಿಜೆಪಿಯ ದುರಾಡಳಿತ, ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಿದೆ.

ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ. ಈ ಸರ್ಕಾರವನ್ನು ಕಿತ್ತೊಗೆಯಲು ಎಲ್ಲರೂ ಸೇರಿ ಹೋರಾಟ ಮಾಡುತ್ತಿದ್ದೇವೆ.

ಮುಂದಿನ ಮುಖ್ಯಮಂತ್ರಿ ವಿಷಯದ ಬಗ್ಗೆ ಚರ್ಚೆ ಅಪ್ರಸ್ತುತ. ಚುನಾವಣೆ ಬಳಿಕ‌ ಶಾಸಕರ ಅಭಿಪ್ರಾಯ ಪಡೆದು ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ವರಿಷ್ಠರ ತೀರ್ಮಾನವೇ ಅಂತಿಮ. ಅವರ ನಿರ್ಧಾರಕ್ಕೆ ಎಲ್ಲರೂ ಬದ್ಧ.

ಇಂದು ಸಂಜೆ ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿಯವರನ್ನು ಭೇಟಿಯಾಗಲಿದ್ದೇನೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು

ನವದೆಹಲಿ ಸುದ್ಧಿ ಗೋಷ್ಠಿ

.