ಮೋದಿ ಸರ್ಕಾರದ ವಿರುದ್ಧ ಯೂತ್ ಕಾಂಗ್ರೆಸ್ ಪ್ರತಿಭಟನೆ….!
ನವದೆಹಲಿ: ಮೋದಿ ಸರ್ಕಾರದಿಂದ ನಿರಂತರ ಪೆಟ್ರೋಲ್ , ಡೀಸೆಲ್ ಬೆಲೆ ಏರಿಕೆ ಹಾಗೂ ಕೃಷಿ ಮಸೂದೆ ಹಿಂದಕ್ಕೆ ಪಡೆಯಲು ಆಗ್ರಹಿಸಿ ಅಖಿಲ ಭಾರತ ಯೂತ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ರಾಹುಲ್ ಗಾಂಧಿ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ಯಲ್ಲಿ ಪಾಲ್ಗೊಂಡಿದ್ದರು.
ನವದೆಹಲಿ ಯ ಜಂತರ್ ಮಂತರ್ ನಲ್ಲಿ ಮುಷ್ಕರ ನಡೆಸುತ್ತಿದ್ದ ಕಾಂಗ್ರೆಸ್ ನ ಇಬ್ಬರು ಎಂಪಿ, ಹಾಗೂ ಸೇರಿದಂತೆ 589 ಯೂತ್ ಕಾಂಗ್ರೆಸ್ ಕಾರ್ಯಕರ್ತರನ್ನು ಪೋಲಿಸರು ವಶಕ್ಕೆ ಪಡೆದರು
ಪ್ರತಿಭಟನೆ ಗೆ ಅನುಮತಿ ನೀಡಿಲ್ಲ ಎಂಬ ಕಾರಣದಿಂದ ಪ್ರತಿಭಟನಾಕರರನ್ನು ವಶಕ್ಜೆ ಪಡೆಯಲಾಗಿದೆ ಎಂದು ಪೊಲೀಸ್ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.