IMG 20210808 WA0012

ದೇಶದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವ ಪ್ರಧಾನಿ ಮೋದಿ….!

POLATICAL STATE

ದೇಶದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವ ಪ್ರಧಾನಿ
ಶ್ರೀ ನರೇಂದ್ರ ಮೋದಿ: ಜಮಾಲ್ ಸಿದ್ದೀಖ್

ಬೆಂಗಳೂರು: ಭಾರತೀಯ ಜನತಾ ಪಾರ್ಟಿಯು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಶ್ರೇಷ್ಠ ನಾಯಕತ್ವದಲ್ಲಿ ದೇಶದ ಎಲ್ಲರ ಒಳಿತು ಹಾಗೂ ಅಭಿವೃದ್ಧಿಗೆ ಕಾರ್ಯ ನಿರ್ವಹಿಸುತ್ತಿದೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಚಿಂತನೆಯನ್ನು ಸಾಕಾರಗೊಳಿಸಲು ಅದು ಶ್ರಮಿಸುತ್ತಿದೆ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜಮಾಲ್ ಸಿದ್ದೀಖ್ ಅವರು ತಿಳಿಸಿದರು.
ನಗರದ “ಪರಾಗ್” ಹೋಟೆಲ್‍ನಲ್ಲಿ ಇಂದು ನಡೆದ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಸಮಾಜದ ವಿಕಾಸಕ್ಕಾಗಿ ನಾವು ಶ್ರಮಿಸಬೇಕು. ಸರಕಾರದ ಉತ್ತಮ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ಮನವಿ ಮಾಡಿದರು.

ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಬಿಜೆಪಿ ಗರಿಷ್ಠ ಪ್ರಮಾಣದಲ್ಲಿ ಶ್ರಮಿಸುತ್ತಿದೆ. ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಇತರ ಪಕ್ಷಗಳು ಅಲ್ಪಸಂಖ್ಯಾತರ ಅಭಿವೃದ್ಧಿಗೆ ಶ್ರಮಿಸುತ್ತಿಲ್ಲ. ಕೇವಲ ಕೌಟುಂಬಿಕ ರಾಜಕಾರಣ ಮಾಡುತ್ತಿವೆ ಎಂದು ಅವರು ತಿಳಿಸಿದರು.
ಮನಸ್ಸಿನಲ್ಲಿ ಮನಸ್ಸಿಟ್ಟು ಕೆಲಸ ಮಾಡಿದ ಕಟ್ಟ ಕಡೆಯ ಕಾರ್ಯಕರ್ತನಿಗೆ ಬಿಜೆಪಿಯಲ್ಲಿ ನಾಯಕರಾಗಲು ಮತ್ತು ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಗುತ್ತದೆ. ಇದು ಬಿಜೆಪಿಯಲ್ಲಿ ಮಾತ್ರ ಸಾಧ್ಯವಿದೆ ಎಂದು ವಿವರಿಸಿದರು. ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರು ದೂರದೃಷ್ಟಿಯ ನಾಯಕ ಎಂಬುದನ್ನು ಜಗತ್ತು ಒಪ್ಪಿಕೊಂಡಿದೆ ಎಂದರು.
ರಾಜ್ಯದ ಉನ್ನತ ಶಿಕ್ಷಣ, ಐಟಿ, ಬಿಟಿ ಖಾತೆ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಮಾತನಾಡಿ, ವಿರೋಧ ಪಕ್ಷಗಳು ಅಧಿಕಾರಕ್ಕಾಗಿ ಪರಸ್ಪರರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿವೆ. ಬಿಜೆಪಿ ಅಲ್ಪಸಂಖ್ಯಾತರ ವಿರುದ್ಧ ಇದೆ ಎಂಬ ಅಪಪ್ರಚಾರದಲ್ಲಿ ತೊಡಗಿವೆ. ಬಿಜೆಪಿ ಸರಕಾರಗಳು ಅಲ್ಪಸಂಖ್ಯಾತರಿಗಾಗಿ ಕೈಗೊಂಡ ಕಾರ್ಯಕ್ರಮಗಳು, ಅನುಷ್ಠಾನಗೊಳಿಸಿರುವ ಯೋಜನೆಗಳ ಕುರಿತು ತಿಳಿಸಿ, ಅಲ್ಪಸಂಖ್ಯಾತರಲ್ಲಿರುವ ಗೊಂದಲವನ್ನು ನಿವಾರಿಸಬೇಕು ಎಂದು ತಿಳಿಸಿದರು.
ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಮ್ಮಲ್ಲಿನ ಪ್ರತಿಭೆ ಕುರಿತ ಸಂದೇಶ ವಿಶ್ವಕ್ಕೇ ಲಭಿಸಿದೆ. ವಿಶ್ವದ ಉತ್ಕøಷ್ಟ ನಾಯಕರಾಗಿ ಶ್ರೀ ನರೇಂದ್ರ ಮೋದಿ ಅವರು ಹೊರಹೊಮ್ಮಿದ್ದಾರೆ. ಶಿಕ್ಷಣಕ್ಕೆ ಸಂಬಂಧಿಸಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅವರು ರೂಪಿಸಿದ್ದಾರೆ. ನಮ್ಮ ಸಮಸ್ಯೆಗೆ ಈ ಶಿಕ್ಷಣ ನೀತಿಯಿಂದ ಶಾಶ್ವತ ಪರಿಹಾರ ಲಭಿಸುತ್ತದೆ ಎಂದು ಮೆಚ್ಚುಗೆ ಸೂಚಿಸಿದರು. ಜ್ಞಾನ, ಶಿಕ್ಷಣ, ಕೌಶಲ್ಯದಿಂದ ದೇಶವು ಶಕ್ತಿ ಪಡೆಯಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ನಮ್ಮೆಲ್ಲರ ಪ್ರಯತ್ನ ಸಾಗಬೇಕು ಎಂದು ಅವರು ಆಶಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ಅವಕಾಶವಿದೆ. ಅಭಿವೃದ್ಧಿಗೆ ಬದ್ಧತೆ, ಸ್ಪಷ್ಟತೆ ನಮ್ಮಲ್ಲಿರಲಿ. ಹಿಂದೂ- ಮುಸ್ಲಿಮರು, ಕ್ರಿಶ್ಚಿಯನ್ನರ ನಡುವೆ ಸ್ಪರ್ಧೆ ಬೇಡ. ನಮ್ಮ ದೇಶವು ಅಮೆರಿಕ, ಜಪಾನ್‍ನಂಥ ದೇಶಗಳ ಜೊತೆ ನಾವು ಸ್ಪರ್ಧಿಸುವ ಕಾಲ ಈಗ ಬಂದಿದೆ ಎಂದರು.
ಅಲ್ಪಸಂಖ್ಯಾತ ಮೋರ್ಚಾದ ರಾಷ್ಟ್ರೀಯ ಕಾರ್ಯದರ್ಶಿಗಳಾದ ಶ್ರೀ ಸೈಯದ್ ಇಬ್ರಾಹಿಂ ಅವರು ಮಾತನಾಡಿ, ಸ್ವಾವಲಂಬಿ ಸಾಧನೆ ಮತ್ತು ಆತ್ಮನಿರ್ಭರ ಭಾರತದ ಪರಿಕಲ್ಪನೆಯನ್ನು ಸಾಕಾರಗೊಳಿಸಲು ನಮ್ಮ ನೆಚ್ಚಿನ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರು ಹಗಲಿರುಳೆನ್ನದೆ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.
ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬ ಘೋಷಣೆಯೊಂದಿಗೆ ಕೇಂದ್ರ ಸರಕಾರ ಕಾರ್ಯ ನಿರ್ವಹಿಸುತ್ತಿದೆ. ಮುಸ್ಲಿಂ, ಕ್ರಿಶ್ಚಿಯನ್, ಹಿಂದೂಗಳ ನಡುವೆ ಭೇದಭಾವ ಇಲ್ಲದೆ ಅದು ಕಾರ್ಯವೆಸಗುತ್ತಿದೆ ಎಂದು ಅವರು ಮೆಚ್ಚುಗೆ ಸೂಚಿಸಿದರು.
ಮುಸ್ಲಿಮರು, ಕ್ರಿಶ್ಚಿಯನ್ನರು ಸೇರಿದಂತೆ ಅಲ್ಪಸಂಖ್ಯಾತÀ ಮೋರ್ಚಾದ ಕಾರ್ಯಕರ್ತರು ಕೇಂದ್ರ ಸರಕಾರ ಮಾಡಿರುವ ಉತ್ತಮ ಕಾರ್ಯಕ್ರಮಗಳ ಕುರಿತು ತಿಳಿಸಬೇಕು. ರಾಜಕೀಯವಾಗಿ ಸ್ಪರ್ಧಿಸಿ ಜನಪ್ರತಿನಿಧಿಗಳಾಗಿ ಸೇವೆ ಸಲ್ಲಿಸುವ ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ತಿಳಿಸಿದರು.
ರಾಷ್ಟ್ರಪತಿಗಳಾಗಿದ್ದ ಶ್ರೀ ಎ.ಪಿ.ಜೆ. ಅಬ್ದುಲ್ ಕಲಾಂ ಅವರು ದೇಶಭಕ್ತರಾಗಿದ್ದರು. ದೇಶದ ಪ್ರಗತಿಗಾಗಿ ಅವರು ತಮ್ಮನ್ನು ತೊಡಗಿಸಿಕೊಂಡಿದ್ದರು. ಉತ್ತಮವಾಗಿ ಕೆಲಸ ಮಾಡುವುದಾದರೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವನ್ನು ಪಕ್ಷ ನೀಡಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಮೈನಾರಿಟಿ ಮೋರ್ಚಾದ ಪ್ರಭಾರಿಗಳಾದ ಶ್ರೀ ಎನ್. ರವಿಕುಮಾರ್, ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಜಗದೀಶ್ ಹಿರೇಮನಿ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಮುಖ್ತಾರ್ ಪಠಾಣ್, ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಅಧ್ಯಕ್ಷರಾದ ಶ್ರೀ ಮುಜಾಮಿಲ್ ಅಹ್ಮದ್ ಬಾಬು, ಹಜ್ ಸಮಿತಿ ಅಧ್ಯಕ್ಷರಾದ ಶ್ರೀ ರವೂಫುದ್ದೀನ್ ಕಚೇರಿವಾಲೆ, ಮೋರ್ಚಾದ ಪದಾಧಿಕಾರಿಗಳು, ಆಹ್ವಾನಿತರು ಪಾಲ್ಗೊಂಡಿದ್ದರು.
ಶ್ರೀ ಮೊಹ್ಸಿನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಬಿಜೆಪಿ ಮುಸ್ಲಿಮರ ವಿರೋಧಿಯಲ್ಲ. ಅದು ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹಲವಾರು ಮಹತ್ವಪೂರ್ಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ ಎಂದು ತಿಳಿಸುವ ಅಗತ್ಯವಿದೆ ಎಂದರು