ಜೂನ್ ೨೫ ರಿಂದ ಆರಂಭ ವಾಗಲಿರುವ ಎಸ್.ಎಸ್.ಎಲ್.ಸಿ. ಬರೆಯುವ ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಣೆ
ಪರೀಕ್ಷಾ ಕೇಂದ್ರಗಳನ್ನು ಸ್ವಚ್ಛಗೊಳಿಸಿ, ಶುದ್ಧೀಕರಿಸಲು ಪ್ರತಿಯೊಬ್ಬ ಶಿಕ್ಷಕರೂ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಪಿ.ಡಿ.ಓ.ಗಳನ್ನು ಸಂಪರ್ಕಿಸಬೇಕು.
ಪಾವಗಢ ಜೂನ್ ೨೧ :- ಶ್ರೀರಾಮಕೃಷ್ಣ ಸೇವಾಶ್ರಮದ ಆವರಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಂಯುಕ್ತಾಶ್ರಯದಲ್ಲಿ ಶ್ರೀರಾಮಕೃಷ್ಣ ಸೇವಾಶ್ರಮ ಮತ್ತು ಇನ್ಫೋಸಿಸ್ ಫೌಂಡೇಷನ್ ವತಿಯಿಂದ ದಿನಾಂಕ:25-6-2020ರಿಂದ ಆರಂಭವಾಗುವ ಎಸ್.ಎಸ್.ಎಲ್.ಸಿ. ಪರೀಕ್ಷಾರ್ಥಿಗಳಿಗೆ ಹಾಗೂ ಪರೀಕ್ಷಾ ಕೇಂದ್ರಗಳ ಸಿಬ್ಬಂದಿ ವರ್ಗದವರಿಗೆ ಕೊರೊನಾ ವೈರಸ್ ನಿಯಂತ್ರಣ ಯೋಜನೆಯಡಿಯಲ್ಲಿ ಮಾಸ್ಕ್, ಸ್ಯಾನಿಟೈಸರ್ ಮತ್ತು ಕುಡಿಯುವ ನೀರಿನ ವಿತರಣಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.16 ಪರೀಕ್ಷಾ ಕೇಂದ್ರಗಳ ಸುಮಾರು 70 ಜನ ಮೇಲ್ವಿಚಾರಕರು ಸಭೆಯಲ್ಲಿ ಹಾಜರಿದ್ದರು.
ಪಾವಗಡ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಸಿದ್ದಗಂಗಯ್ಯರವರು ಮಾತನಾಡಿ ಪರೀಕ್ಷಾ ನಿಯಮಗಳನ್ನು ವಿವರಿಸಿದರು. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಹಾಜರಾದಾಗ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವಂತೆ ತಿಳುವಳಿಕೆ ನೀಡಬೇಕು, ಸ್ಯಾನಿಟೈಸರ್ ಉಪಯೋಗಿಸುವುದಕ್ಕೆ ಹಾಗೂ ಥರ್ಮಲ್ ಸ್ಕ್ಯಾನಿಂಗ್‍ಗೆ ಪ್ರತಿಯೊಬ್ಬ ವಿದ್ಯಾರ್ಥಿಯೂ ಒಳಗಾಗಬೇಕೆಂದು ತಿಳಿಸಿದರು. ಪರೀಕ್ಷಾ ಕೇಂದ್ರಗಳನ್ನು ಸ್ವಚ್ಛಗೊಳಿಸಿ, ಶುದ್ಧೀಕರಿಸಲು ಪ್ರತಿಯೊಬ್ಬ ಶಿಕ್ಷಕರೂ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಪಿ.ಡಿ.ಓ.ಗಳನ್ನು ಸಂಪರ್ಕಿಸಬೇಕೆಂದು ತಿಳಿಸಿದರು.
ಪೂಜ್ಯ ಸ್ವಾಮಿ ಜಪಾನಂದಜೀ ರವರು ಮಾತನಾಡಿ ಕೋವಿಡ್19 ಯೋಜನೆಯಡಿ ತಾಲ್ಲೂಕಿನ ಎಲ್ಲ ವಿದ್ಯಾರ್ಥಿ / ವಿದ್ಯಾರ್ಥಿನಿಯರಿಗೆ ಸುಮಾರು 6600 ಮಾಸ್ಕ್ ಹಾಗೂ ಸ್ಯಾನಿಟೈಸರ್ ನೀಡಲಾಗಿದೆ. ಇದರೊಂದಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು 16 ಪರೀಕ್ಷೇ ಕೇಂದ್ರಗಳಲ್ಲಿ ಮಾಡಲಾಗಿದೆ. ದಯಮಾಡಿ ಎಲ್ಲರೂ ಸಹಕರಿಸಿ ಭಾರತದ ಮುಂದಿನ ಪ್ರಜೆಗಳಾದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಧೈರ್ಯ, ಸ್ಥೈರ್ಯ ತುಂಬಬೇಕಾಗಿದೆ ಎಂದು ವಿವರಿಸಿದರು. ಈ ಯೋಜನೆಯು ಇನ್ಫೋಸಿಸ್ ಫೌಂಡೇಷನ್ ಸಹಕಾರದೊಂದಿಗೆ ಕೈಗೆತ್ತಿಕೊಳ್ಳಲಾಗಿದೆ. ಪ್ರತಿಯೊಬ್ಬ ಭಾರತೀಯ ಪ್ರಜೆಯು ಈ ಕೊರೋನಾ ಸಂದರ್ಭದಲ್ಲಿ ದೇಶ, ರಾಜ್ಯ, ನಾಡು ಹಾಗೂ ತಮ್ಮ ತಮ್ಮ ಊರುಗಳಿಗೆ ಸಹಕಾರವಾಗುವಂತೆ ಸರ್ಕಾರವು ನೀಡಿರುವ ಎಲ್ಲ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕಾಗಿ ಎಂದರು
ಎಲ್ಲಾ 16 ಕೇಂದ್ರಗಳ ವ್ಯವಸ್ಥಾಪಕರು ಹಾಗೂ ಸಹಾಯಕರು ಇದೇ ಸಂದರ್ಭದಲ್ಲಿ ತಮ್ಮ ತಮ್ಮ ಕೇಂದ್ರಕ್ಕೆ ನಿಗದಿಪಡಿಸಿರುವ ಮಾಸ್ಕ್ ಹಾಗೂ ಸ್ಯಾನಿಟೈಸರ್‍ಗಳನ್ನು ಸ್ವೀಕರಿಸಿದರು. ಕುಡಿಯುವ ನೀರನ್ನು ಎಲ್ಲಾ ಆರು ದಿವಸಗಳಿಗೆ ತಾ.24-6-2020ರಂದು ಅವರವರ ಕೇಂದ್ರಕ್ಕೆ ತಲುಪಿಸಲಾಗುವುದು ಎಂದು ಸ್ವಾಮೀಜಿ ತಿಳಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಶ್ರೀ ಬಸವರಾಜು ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಅಧಿಕಾರಿ ವರ್ಗದವರು, ಶ್ರೀ ಕಮಲ್‍ಬಾಬು, ಪಾವಗಡ ತಾಲ್ಲೂಕು ಸ್ಕೌಟ್ಸ್ ಮತ್ತು ಗೈಡ್ಸ್ ಅಧ್ಯಕ್ಷರು ಭಾಗವಹಿಸಿದ್ದರು.