IMG 20210916 WA0047

ಗ್ರಾಮ ಪಂಚಾಯ್ತಿ ತಿದ್ದುಪಡಿ ಮಸೂದೆ ಅಂಗೀಕಾರ…!

Genaral STATE

ಬೆಂಗಳೂರು: ಕಾಂಗ್ರೆಸ್ ನ ತೀವ್ರ ವಿರೋಧದ ನಡುವೆ ವಿಧಾನಸಭೆಯಲ್ಲಿ ಗ್ರಾಮ ಸ್ವರಾಜ್ ಮತ್ತು ಗ್ರಾಮ ಪಂಚಾಯ್ತಿ ತಿದ್ದುಪಡಿ ಮಸೂದೆಗೆ ಅಂಗೀಕಾರ ಸಿಕ್ಕಿದೆ.

ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರ ವಿರೋಧದ ನಡುವೆಯೂ ವಿವಾದಿತ ಕರ್ನಾಟಕ ಗ್ರಾಮ‌ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ ವಿಧಾನಸಭೆಯಲ್ಲಿ ಗುರುವಾರ ಅಂಗೀಕಾರಗೊಂಡಿತು.‌ ವಿಧೇಯಕವನ್ನು ವಿರೋಧಿಸಿ ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದರು..

ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಪುನರ್ವಿಂಗಡನೆ ಸಂಬಂಧ ಕರ್ನಾಟಕ ಪಂಚಾಯತ್ ರಾಜ್ ಕ್ಷೇತ್ರ ಪುನರ್ವಿಂಗಡನೆ ಆಯೋಗ (ಡಿಲಿಮಿಟೇಷನ್ ಕಮಿಷನ್) ರಚಿಸುವ ಉದ್ದೇಶದಿಂದ ತಿದ್ದುಪಡಿ ವಿಧೇಯಕ ಜಾರಿಗೊಂಡಿದೆ.‌IMG 20210916 WA0042

ಈ ಆಯೋಗದ ಮೂಲಕ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಪುನರ್ವಿಂಗಡನೆ ಮಾಡಲಾಗುತ್ತದೆ. ಈ ಹಿಂದೆ ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಮಾಡಿದ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಸೀಮಾ ನಿರ್ಣಯ (ಕ್ಷೇತ್ರ ಪುನರ್ವಿಂಗಡನೆ) ಅವೈಜ್ಞಾನಿಕ ಹಾಗೂ ಕಾನೂನು ಬಾಹಿರವಾಗಿದೆ ಎಂದು ಆಕ್ಷೇಪಿಸಿ ಹೈಕೋರ್ಟ್‌ನಲ್ಲಿ ಹಲವಾರು ಅರ್ಜಿಗಳು ಸಲ್ಲಿಕೆಯಾಗಿವೆ. ಈ ಹಿನ್ನೆಲೆಯಲ್ಲಿ ಕ್ಷೇತ್ರ ಪುನರ್ವಿಂಗಡನೆ ಆಯೋಗ ರಚನೆಗಾಗಿ ವಿಧೇಯಕವನ್ನು ತರಲಾಗಿದೆ.

ಈ  ವಿಧೇಯಕ ಜಾರಿಯಾದ ತಕ್ಷಣ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಎಲ್ಲಾ ಕ್ಷೇತ್ರ ಪುನರ್ವಿಂಗಡನೆ ಅಧಿಸೂಚನೆ ರದ್ದಾಗಲಿದೆ. ಜೊತೆಗೆ ಪ್ರಸ್ತುತವಿರುವ ಕ್ಷೇತ್ರ ಪುನರ್ವಿಂಗಡನೆ ಆಧಾರದಲ್ಲಿ ಜಾರಿಯಲ್ಲಿರುವ ತಾ.ಪಂ ಹಾಗೂ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಿರಿಸುವ ಎಲ್ಲಾ ಅಧಿಸೂಚನೆಗಳು ಕೂಡಲೇ ರದ್ದಾಗಲಿವೆ.IMG 20210916 WA0049

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ ಚುನಾವಣೆ ಮುಂದೂಡುವ ಉದ್ದೇಶದಿಂದ ತರಲಾಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ಬಿಜೆಪಿ ಮೀಸಲಾತಿ ವಿರುದ್ಧವಾಗಿದೆ.‌ ಈ ತಿದ್ದುಪಡಿ ದುರುದ್ದೇಶದಿಂದ ಕೂಡಿದೆ, ಇದೊಂದು ಸಂವಿಧಾನ ವಿರೋಧಿ ಹಾಗೂ ಕರಾಳ ವಿಧೇಯಕ ಎಂದು ಅವರು ಕಿಡಿಕಾರಿದರು.

ಕಾಂಗ್ರೆಸ್‌ನ  ಹಿರಿಯ ನಾಯಕ ಎಚ್‌.ಕೆ. ಪಾಟೀಲ್ ಮಾತನಾಡಿ, ತಿದ್ದುಪಡಿ ಮೂಲಕ ಪ್ರಗತಿಪರವಾದ ಕಾನೂನನ್ನು ಪ್ರತಿಗಾಮಿಯಾಗಿ ಮಾಡಿದೆ. ಇದು ಕರಾಳ ಕಾನೂನು ಎಂದು ವಾಗ್ದಾಳಿ ನಡೆಸಿದರು.

ಇನ್ನು ಇಂದು ವಿಧಾನಸಭೆಯಲ್ಲಿ ವಿಧೇಯಕ ಅಂಗೀಕಾರವಾಗುತ್ತಿದ್ದಂತೆ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.