ರಸ್ತೆ ಅಭಿವೃದ್ಧಿಗೆ 6.26 ಕೋಟಿ ಮಂಜೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು, ಸೆಪ್ಟೆಂಬರ್ 21 (ಕರ್ನಾಟಕ ವಾರ್ತೆ):
ಬೆಂಗಳೂರು ಬೃಹತ್ ನಗರ ಪಾಲಿಕೆಯ ವಾರ್ಡ್ ಸಂಖ್ಯೆ-191 ವ್ಯಾಪ್ತಿಗೆ ಒಳಪಡುವ ಕೂಡ್ಲು ಪ್ರದೇಶದ ಪ್ರಮುಖ ರಸ್ತೆಗಳ ಅಭಿವೃದ್ಧಿಗೆ 2 ಕೋಟಿ 26 ಲಕ್ಷ ಮಂಜೂರಾಗಿದ್ದು, 1 ಕೋಟಿ 26 ಲಕ್ಷ ವೆಚ್ಚದ ಕಾಮಗಾರಿ ಪ್ರಾರಂಭವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿ

ಇಂದು ವಿಧಾನಸಭಾ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಬಿ.ಶಿವಣ್ಣ ಅವರ ಪ್ರಶ್ನೆಗೆ ಉತ್ತರ ನೀಡಿದ ಮುಖ್ಯಮಂತ್ರಿಗಳು, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯವರು 110 ಹಳ್ಳಿಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಗುಂಡಿಗಳನ್ನು ಅಗೆದಿದ್ದು, ಇದರ ದುರಸ್ತಿ ಹಾಗೂ ಅಭಿವೃದ್ಧಿಗಾಗಿ 2 ಕೋಟಿ 90 ಲಕ್ಷ ಮಂಜೂರಾಗಿದೆ. ಬಾಕಿ ಇರುವ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಸದನಕ್ಕೆ ಮಾಹಿತಿ ನೀಡಿದರು.