IMG 20210914 WA0027

ರಾಜ್ಯದಲ್ಲಿ ಕೋವಿಡ್ 3ನೇ ಅಲೆ ತಡೆಗಟ್ಟಲು ಸಕಲ ಸಿದ್ಧತೆ…!

Genaral STATE
ರಾಜ್ಯದಲ್ಲಿ ಕೋವಿಡ್ 3ನೇ ಅಲೆ ತಡೆಗಟ್ಟಲು ಸಕಲ ಸಿದ್ಧತೆhi : ಡಾ.ಕೆ.ಸುಧಾಕರ್
ಬೆಂಗಳೂರು, ಸೆಪ್ಟೆಂಬರ್ 23 (ಕರ್ನಾಟಕ ವಾರ್ತೆ):
ರಾಜ್ಯದಲ್ಲಿ ಮೂರನೇ ಅಲೆಯನ್ನು ತಡೆಗಟ್ಟಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಸಚಿವರಾದ ಡಾ. ಕೆ.ಸುಧಾಕರ್ ಅವರು ತಿಳಿಸಿದರು.
ಇಂದು ವಿಧಾನಸಭಾ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಎಂ. ಕೃಷ್ಣಪ್ಪ ಅವರ ಪ್ರಶ್ನಗೆ ಉತ್ತರ ನೀಡಿದ ಸಚಿವರು, ಕೋವಿಡ್-19ರ ಮೂರನೇ ಅಲೆಯು ಮಕ್ಕಳ ಮೇಲೆ ಹೆಚ್ಚು ಅಪಾಯ ಬೀರಬಹುದು ಎಂದು ತಾಂತ್ರಿಕ ಸಲಹಾ ಸಮಿತಿಯು ನೀಡಿರುವ ಸೂಚನೆಯಂತೆ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಆಕ್ಸಿಜನ್  ಬೆಂಬಲಿತ 25,870 ಹಾಸಿಗೆಗಳನ್ನು, 502 ಮಕ್ಕಳ ವೆಂಟಿಲೇಟರ್ ಸಿದ್ಧಪಡಿಸಲಾಗಿದೆ. 285 ಮಕ್ಕಳ ತಜ್ಞರು, 1,200 ವೈದ್ಯಾಧಿಕಾರಿಗಳು ಹಾಗೂ 1,202 ಶುಷ್ರೂಷಕರಿಗೆ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ವಿಶೇಷ ತರಬೇತಿಯನ್ನು ನೀಡಲಾಗಿದೆ ಹಾಗೂ ಶೇಕಡ 20 ರಷ್ಟು ಹಾಸಿಗೆಗಳನ್ನು ಮಕ್ಕಳಿಗೆ ವಿಶೇಷವಾಗಿ ಮೀಸಲಿಡಲಾಗಿದೆ ಎಂದು ಸದನಕ್ಕೆ ಮಾಹಿತಿ ನೀಡಿದರು.

ಸುಸಜ್ಜಿತ ಡಯಾಲಿಸಿಸ್ ವ್ಯವಸ್ಥೆ 

  ರಾಜ್ಯದಲ್ಲಿ ಸುಸಜ್ಜಿತ ಡಯಾಲಿಸಿಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಸಚಿವರಾದ ಡಾ. ಕೆ.ಸುಧಾಕರ್ ಅವರು ತಿಳಿಸಿದರು.
ಇಂದು ವಿಧಾನಸಭಾ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಡಿ.ಎಸ್. ಸುರೇಶ್ ಅವರ ಪ್ರಶ್ನಗೆ ಉತ್ತರ ನೀಡಿದ ಸಚಿವರು, ಡಯಾಲಿಸಿಸ್  ರೋಗಿಗಳ ಸೇವೆ ಬಹಳ ಮುಖ್ಯವಾದ ಸೇವೆಯಾಗಿದೆ ಎಂದು  ಸರ್ಕಾರÀವು ಗಮನದಲ್ಲಿಟ್ಟುಕೊಂಡು ನಿರಂತರ ಸೇವೆ ಒದಗಿಸುತ್ತಿದೆ.
ಡಯಾಲಿಸಿಸ್ ರೋಗಿಗಳಿಗೆ ಸೇವೆ ನೀಡುತ್ತಿದ್ದ ಬಿ.ಆರ್.ಶೆಟ್ಟಿ ಸಂಸ್ಥೆಯು ಆರ್ಥಿಕ ನಷ್ಟದಿಂದ ಸೇವೆಯನ್ನು ಸ್ಥಗಿತಗೊಳಿಸಿರುವುದರಿಂದ  ಸರ್ಕಾರವು ಇನ್ನೊಂದು ತಿಂಗಳಲ್ಲಿ ಬೇರೆ ಪರ್ಯಾಯ ವ್ಯವಸ್ಥೆ ಮಾಡಲಿದೆ ಎಂದು ಸರ್ಕಾರಕ್ಕೆ ಮಾಹಿತಿ ನೀಡಿದರು.