IMG 20211006 WA0022

ಮೂರು ದಿನಗಳ ಭೇಟಿಗೆ ರಾಜ್ಯಕ್ಕೆ ಆಗಮಿಸಿದ ರಾಷ್ಟ್ರಪತಿ ಶ್ರೀ ರಾಮನಾಥ್ ಕೋವಿಂದ್…

Genaral STATE

ಮೂರು ದಿನಗಳ ಭೇಟಿಗೆ ರಾಜ್ಯಕ್ಕೆ ಆಗಮಿಸಿದ ರಾಷ್ಟ್ರಪತಿ ಶ್ರೀ ರಾಮನಾಥ್ ಕೋವಿಂದ್

ಬೆಂಗಳೂರು:-   ಮೂರು ದಿನಗಳ ಭೇಟಿಗೆ ರಾಜ್ಯಕ್ಕೆ ಆಗಮಿಸಿದ ರಾಷ್ಟ್ರಪತಿ ಶ್ರೀ ರಾಮನಾಥ್ ಕೋವಿಂದ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಎಚ್ ಎಎಲ್ ವಿಮಾನನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರಾಷ್ಟ್ರಪತಿಗಳಿಗೆ ಶಾಲು ಹೊದಿಸಿ ಸರ್ಕಾರದ ಪರವಾಗಿ ಸನ್ಮಾನಿಸಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ರಾಜಭವನದಲ್ಲಿ ರಾಷ್ಟ್ರಪತಿಗಳ ಚಹಕೂಟ, ರಾಜ್ಯಪಾಲರು ಭಾಗಿ
IMG 20211006 WA0028

ಇಂದು ಸಂಜೆ ರಾಜಭವನದಲ್ಲಿ ಆಯೋಜಿಸಲಾಗಿದ್ದ ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀ ರಾಮನಾಥ್ ಕೋವಿಂದ್ ಮತ್ತು ಪ್ರಥಮ ಮಹಿಳೆ ಸವಿತಾ ಕೋವಿಂದ್, ಅವರೊಂದಿಗಿನ ಚಹಾಕೂಟದಲ್ಲಿ ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಅವರು ಭಾಗಿಯಾಗಿದ್ದರು.

ಚಹಾಕೂಟದಲ್ಲಿ ಭಾಗವಹಿಸಿದ ನ್ಯಾಯಾಧೀಶರು ಮತ್ತು ಅವರ ಕುಟುಂಬದವರೊಂದಿಗೆ ರಾಷ್ಟ್ರಪತಿಗಳು ಹಾಗೂ ರಾಜ್ಯಪಾಲರು ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಸೇರಿದಂತೆ ಇತರೆ ನ್ಯಾಯಾಧೀಶರುಗಳು ಅವರ ಕುಟುಂಬಸ್ಥರೊಂದಿಗೆ ಭಾಗವಹಿಸಿದ್ದರು.