IMG 20211008 WA0031

ಬಿಜೆಪಿ ಈಗ ಎಲ್ಲಾ ವರ್ಗದವರ ಪಕ್ಷ….!

NATIONAL National - ಕನ್ನಡ

ಬಿಜೆಪಿ ಈಗ ಎಲ್ಲಾ ವರ್ಗದವರ ಪಕ್ಷ

ಉತ್ತಮ ಆಡಳಿತ ನೀಡಿ ಮತ್ತೊಮ್ಮೆ ಬಿಜೆಪಿಯನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವುದೇ ನನ್ನ ಗುರಿ

ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ‌

ನವದೆಹಲಿ: ಭಾರತೀಯ ಜನತಾಪಕ್ಷ ಈಗ ಕರ್ನಾಟಕದಲ್ಲಿ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಅದು ಸಮಾಜದ ಎಲ್ಲ ವರ್ಗದವರಿಗೂ ತಲುಪಿ ಅವರ ಬೆಂಬಲವನ್ನು ಗಳಿಸಿರುವ ಪಕ್ಷವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಶುಕ್ರವಾರ ನವದೆಹಲಿಯಲ್ಲಿ ನಡೆದ ಇಂಡಿಯಾ ಟುಡೇ ಕಾನ್ಕಲೇವ್ ನಲ್ಲಿ ಅವರು ಮಾತನಾಡಿದರು.IMG 20211008 WA0033

ಉತ್ತರ ಕರ್ನಾಟಕ ಭಾಗದಿಂದ ಹಲವಾರು ಜನ ಲಿಂಗಾಯತ ಸಮುದಾಯದವರು ಭಾರತೀಯ ಜನತಾ ಪಕ್ಷದಿಂದ ಶಾಸಕರು ಮತ್ತು ಸಂಸದರಾಗಿದ್ದಾರೆ. ಆದರೆ ಒಂದು ಸರ್ಕಾರ ಅಧಿಕಾರಕ್ಕೆ ಬರಬೇಕೆಂದರೆ ಎಸ್ಸಿ, ಎಸ್ಟಿ, ಒಕ್ಕಲಿಗ, ಹಿಂದುಳಿದ ವರ್ಗದವರ ಬೆಂಬಲ‌ಬೇಕು. ಈ ವರ್ಗದವರು ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸಿದ್ದಾರೆ. ಹೀಗಾಗಿ ಬಿಜೆಪಿ ಈಗ ಕರ್ನಾಟಕದಲ್ಲಿ ಸಮಾಜದ ಎಲ್ಲ ವರ್ಗದವರ ಪಕ್ಷವಾಗಿದೆ ಎಂದು ಅವರು ಹೇಳಿದರು.

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು, ಅವರು ಮುಂದಿನ ಜನಾಂಗಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಅವರೊಬ್ಬ ಪ್ರಬಲ ನಾಯಕ ಎಂದು ಅವರು ಹೇಳಿದರು.

IMG 20211008 WA0032

ನೀಟ್ ಪರೀಕ್ಷೆಗೆ ತಮಿಳುನಾಡು ವಿರೋಧ ಮಾಡುತ್ತಿರುವುದು ಸರಿಯಲ್ಲ ಎಂದು ಬೊಮ್ಮಾಯಿ ಹೇಳಿದರು.‌

ನನ್ನ ನೇತೃತ್ವದಲ್ಲಿ ಚುನಾವಣೆ

2023 ಚುನಾವಣೆ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಮಾರ್ಗದರ್ಶನದಲ್ಲಿ ನನ್ನ ನೇತೃತ್ವಲ್ಲಿ ನಡೆಯಲಿದೆ. ಎಷ್ಟು ಅವಧಿಗೆ ಮುಖ್ಯಮಂತ್ರಿಯಾಗಿರುತ್ತೇನೆ ಎಂಬುದು ಮುಖ್ಯವಲ್ಲ. ಈ ಅವಧಿಯಲ್ಲಿ ಏನು ಮಾಡುತ್ತೇನೆ ಎಂಬುದು ಮುಖ್ಯ. ಸಿಕ್ಕಿರುವ ಈ ಅವಧಿಯಲ್ಲಿ ಉತ್ತಮ ಆಡಳಿತ ನೀಡುವುದರ ಜೊತೆಗೆ ಮತ್ತೊಂದು‌ ಅವಧಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇನೆ ಎಂದು ಸಿಎಂ ಬೊಮ್ಮಾಯಿ‌ ವಿಶ್ವಾಸ ವ್ಯಕ್ತಪಡಿಸಿದರು. ‌