IMG 20211020 WA0007

ಭೂ ಒಡೆತನ ಯೋಜನೆ ಹೆಚ್ಚು ಜನರಿಗೆ ತಲುಪಿಸಲು ಕ್ರಮ….!

Genaral STATE

ಭೂ ಒಡೆತನ ಯೋಜನೆ ಹೆಚ್ಚು ಜನರಿಗೆ ತಲುಪಿಸಲು ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಅ 20-ಭೂ ಒಡೆತನ ಯೋಜನೆಯನ್ನು ಇನ್ನೂ ಹೆಚ್ಚು ಜನರಿಗೆ ತಲುಪಿಸಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಿಳಿಸಿದರು.

ಅವರು ಇಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡುತ್ತಿದ್ದರು.

ಭೂಮಿ ನೀಡಲು ಇರುವ ಅಡೆತಡೆಗಳನ್ನು ನಿವಾರಿಸಿ, ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಎಜುಕೇಷನ್, ಎಂಪ್ಲಾಯ್ ಮೆಂಟ್, ಎಂಪವರ್ ಮೆಂಟ್ (ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣ) – ಈ ಮೂರು ‘ಇ’ ಗಳಿಗೆ ಆದ್ಯತೆ ನೀಡುವ ಮೂಲಕ ಸಮಾಜ ಕಲ್ಯಾಣ ಇಲಾಖೆಯ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ವಿಶೇಷವಾಗಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಹಿಳೆಯರ ಸ್ವಾವಲಂಬನೆಗೆ ಒತ್ತು ನೀಡಲಾಗುವುದು. ಈ ಕುರಿತು ನಬಾರ್ಡ್ ನ ಅಧಿಕಾರಿಗಳೊಂದಿಗೆ ಸಹ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದರು.

ಮಹರ್ಷಿ ವಾಲ್ಮೀಕಿ ಅವರು ಕಾಲಾತೀತರಾದ ಮಹಾತ್ಮರು. ವಿಶ್ವದ 10 ಶ್ರೇಷ್ಠ ಕಾವ್ಯಗಳಲ್ಲಿ ಒಂದು ಎಂದು ಅವರ ರಾಮಾಯಣ ಕೃತಿ ಮನ್ನಣೆ ಪಡೆದಿದೆ. ರಾಮಾಯಣದ ಮೂಲಕ ನಮ್ಮ ಭರತವರ್ಷಕ್ಕೆ ಒಂದು ಸಂಸ್ಕೃತಿಯನ್ನು ಅವರು ನೀಡಿದರು. ಅದರಲ್ಲಿ ನಾವು ಬಾಳಿ ಬದುಕಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.IMG 20211020 WA0013

ಪರಿಶಿಷ್ಟ ವರ್ಗಗಳ ಕಲ್ಯಾಣಕ್ಕೆ ಗಿರಿಜನ ಉಪಯೋಜನೆಯಡಿ 7600 ಕೋಟಿ ರೂ. ಅನುದಾನ ನಿಗದಿ ಪಡಿಸಲಾಗಿದೆ. ಈ ಮೊತ್ತವು ಅರ್ಹ ಫಲಾನುಭವಿಗಳಿಗೆ ತಲುಪಿದಾಗಲೇ ಯೋಜನೆ ಯಶಸ್ವಿಯಾಗುವುದು. ಇದನ್ನು ಖಾತರಿ ಪಡಿಸುವ ಉದ್ದೇಶದಿಂದ ಪ್ರಮಾಣ ವಚನ ಸ್ವೀಕರಿಸಿದ ನಂತರ ಮೊದಲ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣಕ್ಕಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲು ತೀರ್ಮಾನಿಸಲಾಯಿತು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸುವ ಕುರಿತ ವಿಷಯ ಸರ್ಕಾರದ ಪರಿಶೀಲನೆಯಲ್ಲಿದೆ. ಕಾನೂನಿನ ಚೌಕಟ್ಟಿನಡಿಯಲ್ಲಿ ಪರಿಶಿಷ್ಟ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಸಮಾರಂಭದಲ್ಲಿ ಮಾತನಾಡಿದ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರು ಪರಿಶಿಷ್ಟ ಪಂಗಡದವರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ದಾವಣಗೆರೆ ಜಿಲ್ಲೆ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿಯವರು ಸಾನಿಧ್ಯ ವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ 2020-21 ಹಾಗೂ 2021-22ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ವಿ.. ರಾಮಚಂದ್ರ, ಜಂಗಲ್ ಲಾಡ್ಜಸ್ ಅಧ್ಯಕ್ಷ ಅಪ್ಪಣ್ಣ, ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ, ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ನಾಗಾಂಬಿಕಾದೇವಿ ಮತ್ತು ಇತರರು ಸಮಾರಂಭದಲ್ಲಿ ಭಾಗವಹಿಸಿದ್ದರು.