273 ವಿಧ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆ ಹಾಜರು.
ವೈ.ಎನ್.ಹೊಸಕೋಟೆ: ಗುರುವಾರದಂದು ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ 287 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.
ಗ್ರಾಮದ ರಾಷ್ಟ್ರೀಯ ವಿದ್ಯಾಪೀಠ ಪ್ರೌಢಶಾಲೆ ಪರೀಕ್ಷಾ ಕೇಂದ್ರ ಪ್ರಥಮ ಇಂಗ್ಲಿಷ್ ವಿಷಯಕ್ಕೆ ಒಟ್ಟು 273 ವಿದ್ಯಾರ್ಥಿಗಳು ಹಾಜರಾಗಿದ್ದರು ಹಾಗೂ 14 ವಿದ್ಯಾರ್ಥಿಗಳು ಗೈರಾಗಿದ್ದರು.
ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳಿಗೆ ಕೊರೊನ ಸೋಂಕಿನ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ,ಶಿಕ್ಷಣ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಜೊತೆಗೂಡಿ
ವಿದ್ಯಾರ್ಥಿಗಳ ಪರೀಕ್ಷೆಗಳನ್ನು ಸುರಕ್ಷಿತವಾಗಿ ನಡೆಸಲು ಮಾಸ್ಕ್ ವಿತರಣೆ, ಸ್ಯಾನಿಟೈಸರ್ ಬಳಕೆ, ಥರ್ಮಲ್ ಸ್ಕ್ರೀನ್ಂಗ್ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಎಚ್ಚರ ವಹಿಸಿ ವಿದ್ಯಾರ್ಥಿಗಳಿಗೆ ಆತಂಕ ಇಲ್ಲದೆ ಪರೀಕ್ಷೆ ಸುಸೂತ್ರವಾಗಿ ನಡೆಸಿಕೊಡಲಾಯಿತು. ಪರೀಕ್ಷೆ ಬರೆದು ಹಿಂದಿರುಗಿದ ವಿದ್ಯಾರ್ಥಿಗಳ ಮೊಗದಲ್ಲಿ ಖುಷಿ ಮನೆಮಾಡಿತ್ತು.
ವರದಿ:ಸತೀಶ್ ವೈ.ಎನ್.ಹೊಸಕೋಟೆ