Screenshot 2021 11 12 09 27 49 019 com.miui .videoplayer

ದೆಹಲಿ ಪ್ರವಾಸ ಯಶಸ್ವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…..!

Genaral STATE

ದೆಹಲಿ ಪ್ರವಾಸ ಯಶಸ್ವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು, ನವೆಂಬರ್ 11-ತಮ್ಮ ಎರಡು ದಿನಗಳ ದೆಹಲಿ ಪ್ರವಾಸ ಯಶಸ್ವಿಯಾಗಿದೆ. ವಿಶೇಷವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗಿನ ಭೇಟಿ, ಮುಂಬರುವ ದಿನಗಳಲ್ಲಿ ಇನ್ನಷ್ಟು ಜನಪರ ಕಾರ್ಯ ಕೈಗೊಳ್ಳುವ ವಿಶ್ವಾಸ ಮೂಡಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಅವರು ತಮ್ಮ ಎರಡು ದಿನಗಳ ದೆಹಲಿ ಪ್ರವಾಸದಿಂದ ಹಿಂದಿರುಗಿದ ನಂತರ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರಧಾನಮಂತ್ರಿಯವರು ಕಳೆದ ನೂರು ದಿನಗಳಲ್ಲಿ ಕೈಗೊಂಡ ನಿರ್ಣಯಗಳು, ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಹಾಗೂ ಹಲವು ಯೋಜನೆಗಳ ಕುರಿತು ಸಂಪೂರ್ಣ ಮಾಹಿತಿ ಪಡೆದರು. ವಿಶೇಷವಾಗಿ ಕೆಟಿಪಿಪಿ ಕಾಯ್ದೆ ತಿದ್ದುಪಡಿ ಕುರಿತು ಮಾಹಿತಿಯನ್ನು ಇತರ ರಾಜ್ಯಗಳೊಂದಿಗೆ ಹಂಚಿಕೊಂಡು ಅನುಷ್ಠಾನಗೊಳಿಸಲು ಸಲಹೆ ನೀಡುವುದಾಗಿ ತಿಳಿಸಿದರು ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.
ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕಲ್ಲಿದ್ದಲು ಕೊರತೆಯಾಗುವುದಿಲ್ಲ. ಕೇಂದ್ರ ಸರ್ಕಾರವು ಒಡಿಶಾದ ಮಂದಾಕಿನಿ ಗಣಿಯಿಂದ ಕಲ್ಲಿದ್ದಲು ಪಡೆಯಲು ಅನುಮತಿ ನೀಡಿದೆ. ಮಹಾರಾಷ್ಟ್ರದಿಂದಲೂ ಕಲ್ಲಿದ್ದಲು ದೊರೆಯಲಿದೆ ಎಂದು ತಿಳಿಸಿದರು.
ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಗೆ ಸಂಬಂಧಿಸಿದಂತೆ ಕೇಂದ್ರದಿಂದ ಸುಮಾರು 2100 ಕೋಟಿ ರೂ ಬಾಕಿ ಇರುವ ಕುರಿತು ಚರ್ಚಿಸಲಾಗಿದ್ದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಈ ಅನುದಾನ ಬಿಡುಗಡೆ ಮಾಡಲು ಕ್ರಮ ವಹಿಸುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರು ತಿಳಿಸಿದರು.