IMG 20211118 WA0025

ಪಾವಗಡ: ಮದ್ಯದ ಅಂಗಡಿ ಸ್ಥಳಾಂತರಿಸಲು ಆಗ್ರಹಿಸಿ ಪ್ರತಿಭಟನೆ….!

DISTRICT NEWS ತುಮಕೂರು

 ಪಾವಗಡ: -ಅರಸೀಕೆರೆ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ವ್ಯಾಪ್ತಿಯ ಗ್ರಾಮಸ್ಥರು, ಮುಖಂಡರು, ಮಹಿಳಾ ಸಂಘಟನೆಗಳು  ಸೇರಿ ಅರಸೀಕೆರೆ ಗ್ರಾಮದಲ್ಲಿರುವ ಶ್ರೀಮಾತಾ ವೈನ್ ಸೆಂಟರ್ ಅನ್ನು ಊರಿನಿಂದ ಹೊರಗೆ ಸ್ಥಳಾಂತರಿಸಲು ಅರಸೀಕೆರೆ ಗ್ರಾಮದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು

IMG 20211118 WA0024

ಪ್ರತಿಭಟನೆ ಮಾಡುವ ಸ್ಥಳಕ್ಕೆ ಪಾವಗಡ ಅಬಕಾರಿ ಇಲಾಖೆ ಅಧಿಕಾರಿಗಳು ಆಗಮಿಸಿ ಮನವಿ ಪತ್ರ ಸ್ವೀಕರಿಸಿದರು ಅನಂತರ ಮಾತನಾಡಿದ ಅಬಕಾರಿ ಇಲಾಖೆಯ ಅಧಿಕಾರಿಗಳು ಇನ್ನು ಎರಡು ತಿಂಗಳೊಳಗೆ ಸ್ಥಳಾಂತರಿಸಲಾಗುವುದು ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಅರಸೀಕೆರೆ ಗ್ರಾಮದ  ಕಾಂಗ್ರೆಸ್ ಮುಖಂಡರಾದ ಮಲ್ಲೇಶ್ ಹಾಗೂ ಅರಸೀಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಂಜುಳಾ ಮಂಜುನಾಥ್ ಉಪಾಧ್ಯಕ್ಷರಾದ ಶಿವಕುಮಾರ್ ಹಾಗೂ  ಗ್ರಾಮ ಪಂಚಾಯಿತಿ ಸದಸ್ಯರು ಪಾಲ್ಗೊಂಡಿದ್ದರು.

ವರದಿ : ಶ್ರೀನಿವಾಸುಲು ಎ.