IMG 20211122 WA0035

ವಿಧಾನ ಪರಿಷತ್ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ..!

POLATICAL STATE

*ವಿಧಾನ ಪರಿಷತ್ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು: – ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಿದೆ. ಸ್ಥಳೀಯ ಮುಖಂಡರ ಜತೆ ಚರ್ಚಿಸಿ, ಪಕ್ಷಕ್ಕೆ ದುಡಿದವರನ್ನು ಗಮನದಲ್ಲಿಟ್ಟುಕೊಂಡು ಆಯ್ಕೆ ಮಾಡಲಾಗಿದೆ.

ಕಳೆದ ಬಾರಿಗಿಂತ ಹೆಚ್ಚು ಸೀಟುಗಳನ್ನು ಗೆಲ್ಲುವ ವಿಶ್ವಾಸದಲ್ಲಿದ್ದೇವೆ. ಇದು ಸ್ಥಳೀಯ ಸಂಸ್ಥೆಗಳಿಂದ ನಡೆಯುವ ಚುನಾವಣೆ. ಮತದಾರರು, ಸ್ಥಳೀಯ ನಾಯಕರ ಅಪೇಕ್ಷೆಯಂತೆ ಕೆಲವರು ಹೊಸಬರಿಗೂ ಅವಕಾಶ ನೀಡಲಾಗಿದೆ.

a9d427e2 e457 4a9b aa06 80e18ce74eb0

ರಾಜ್ಯಸಭೆ ಚುನಾವಣೆಯಲ್ಲೂ ಈ ಪ್ರತೀತಿ ಉಂಟು. ಕಾಂಗ್ರೆಸ್, ಬಿಜೆಪಿ ಎಲ್ಲ ಪಕ್ಷಗಳೂ ಆಯಾ ಸಂದರ್ಭಕ್ಕೆ ತಕ್ಕಂತೆ ಹೊಸಬರಿಗೆ ಅವಕಾಶ ನೀಡಿವೆ. ಅದೇ ರೀತಿ ಕೆಲವರು ಹೊಸಬರಿಗೆ ಅವಕಾಶ ನೀಡಲಾಗಿದೆ.

ಪಕ್ಷಕ್ಕೆ ದುಡಿದ ಕಾರ್ಯಕರ್ತರನ್ನು ಪರಿಗಣಿಸಲಾಗಿದೆ. ಒಳ್ಳೊಳ್ಳೆ ಕಾರ್ಯಕರ್ತರು ಇದ್ದಾರೆ. ಎಸ್.ಆರ್. ಪಾಟೀಲ್ ಅವರನ್ನು ಕಡೆಗಣಿಸಲಾಗಿದೆ ಎಂಬುದು ಸರಿಯಲ್ಲ. ವರಿಷ್ಠರು, ರಾಜ್ಯ ಮುಖಂಡರು ಚರ್ಚಿಸಿ ತೀರ್ಮಾನ ಕೈಗೊಂಡಿದ್ದಾರೆ. ಪಾಟೀಲರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ. ಬೇರೆ ಅಜೆಂಡಾ ಇದೆ.

0a1adac7 f9d7 4861 ba46 9c7b2c1a4700 1

ಸ್ಥಳೀಯ ಶಾಸಕರ ವಿರೋಧದ ನಡುವೆಯೂ ಕೆ.ಸಿ.‌ಕೊಂಡಯ್ಯ ಅವರಿಗೆ ಟಿಕೆಟ್ ನೀಡಲಾಗಿದೆ ಎಂಬುದೂ ಸರಿಯಲ್ಲ. ಕೆಲವರು ಅವರ ಅಭಿಪ್ರಾಯ ಹೇಳಿರಬಹುದು. ಆದರೆ ಸ್ಥಳೀಯ ಮುಖಂಡರ ಅಭಿಪ್ರಾಯ ಕ್ರೋಢೀಕರಿಸಿ ಅವರಿಗೆ ಟಿಕೆಟ್ ನೀಡಲಾಗಿದೆ. ಕೊಂಡಯ್ಯ ಅವರು ಹಿರಿಯ ನಾಯಕರು. ಸೋನಿಯಾ ಗಾಂಧಿ ಅವರಿಗಾಗಿ ಸಂಸತ್ ಸ್ಥಾನ ತ್ಯಾಗ ಮಾಡಿದವರು.

 

ಕಟಿಕೆಟ್ ನೀಡಿಕೆಯಲ್ಲಿ ನಮ್ಮ ವೈಯಕ್ತಿಕ ತೀರ್ಮಾನ ಇಲ್ಲ. ವರಿಷ್ಠರು, ರಾಜ್ಯ ಮುಖಂಡರು ಸಮಾಲೋಚನೆ ನಡೆಸಿ ತೀರ್ಮಾನಕ್ಕೆ ಬಂದಿದ್ದಾರೆ.